ಬೀದರ -ಬಸವಕಲ್ಯಾಣ ಕ್ಷೇತ್ರದ ಟಿಕೆಟ್ ಹರಾಜಾಗಿದೆ ಎಂಬ ಗಂಭೀರ ಆರೋಪವನ್ನು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಾಡಿದ್ದಾರೆ.
ಜೆಡಿಎಸ್ ಪಕ್ಷದ ಅಭ್ಯರ್ಥಿಯ ಪರವಾಗಿ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಪತ್ರಕರ್ತರೊಡನೆ ಮಾತನಾಡಿದ ಅವರು, ಬಿಜೆಪಿಯ ಬಸವಕಲ್ಯಾಣ ಟಿಕೆಟ್ ಆಕ್ಷನ್ ನಲ್ಲಿ ಮಾರಾಟವಾಗಿದೆ ಎಂದರು.
ಇದು ಸಾಮಾನ್ಯ ವರ್ಗದ ಕ್ಷೇತ್ರವಾಗಿರುವುದರಿಂದ ಇಲ್ಲಿ ಟಿಕೆಟ್ ಗಾಗಿ ವ್ಯವಹಾರ ನಡೆದಿದೆ ಎಂಬ ರಿಪೋರ್ಟ್ ಬಂದಿವೆ ಎಂದು ಕುಮಾರಸ್ವಾಮಿ ಹೇಳಿದರು.
ಈ ಮಧ್ಯೆ ಬಿಜೆಪಿಯ ಟಿಕೆಟ್ ಶರಣಪ್ಪ ಸಲಗರ್ ಅವರಿಗೆ ಸಿಗುತ್ತಿದ್ದಂತೆಯೇ ಮಲ್ಲಿಕಾರ್ಜುನ ಖೂಬಾ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದ್ದು ಇತ್ತ ಕುಮಾರಸ್ವಾಮಿ ಕೂಡ ಗಂಭೀರ ಆರೋಪ ಮಾಡಿದ್ದು ಜಿಲ್ಲೆಯಾದ್ಯಂತ ಚರ್ಚೆಗೆ ಗ್ರಾಸವಾಗಿದೆ.
ವರದಿ : ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ, ಬೀದರ