ಬೀದರ – ಬಸವಣ್ಣನವರ ಕರ್ಮಭೂಮಿ ಬಸವಕಲ್ಯಾಣ ದಲ್ಲಿ ಉಪ ಚುನಾವಣೆಯ ಕಾವು ಜೋರಾಗಿಯೇ ಇದ್ದು ಬಿಜೆಪಿಯ ಬಂಡಾಯ ಅಭ್ಯರ್ಥಿಯಾಗಿರುವ ಮಲ್ಲಿಕಾರ್ಜುನ ಖೂಬಾ ಸ್ವತಂತ್ರವಾಗಿ ನಾಮಪತ್ರ ಸಲ್ಲಿಸುವ ಸಿದ್ಧತೆಯಲ್ಲಿದ್ದಾರೆ.

ಕಾಂಗ್ರೆಸ್ ಪಕ್ಷದಿಂದ ದಿ.ಬಿ ನಾರಾಯಣರಾವ್ ಅವರ ಪತ್ನಿ ಮಲ್ಲಮ್ಮ ಅವರು ನಾಮಪತ್ರ ಸಲ್ಲಿಸಲಿದ್ದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಇವರಿಗೆ ಸಾಥ್ ನೀಡಲಿದ್ದಾರೆ.

ಇನ್ನೊಂದು ಕಡೆ ಬಿಜೆಪಿ ಅಭ್ಯರ್ಥಿಯಾಗಿ ಶರಣು ಸಲಗರ ಇಂದು ನಾಮಪತ್ರ ಸಲ್ಲಿಸುವ ನಿರೀಕ್ಷೆಯಿದೆ. ನಾಮಪತ್ರ ಸಲ್ಲಿಕೆಗೂ ಮುನ್ನ ಬಿಜೆಪಿ ಬೃಹತ್ ಸಮಾವೇಶ ನಡೆಸಿದ್ದು ನಗರದ ಶಾಂತಿನಿಕೇತನ ಕಾಲೇಜು ಮೈದಾನದಲ್ಲಿ ಡಿಸಿಎಂ ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ವಸತಿ ಸಚಿವ ಸೋಮಣ್ಣ, ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ ಸೇರಿದಂತೆ ಅನೇಕ ಮುಖಂಡರು ಸಮಾವೇಶದಲ್ಲಿ ಭಾಗಿಯಾಗಿದ್ದಾರೆ.
ವರದಿ : ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ, ಬೀದರ