- Advertisement -
ಬೀದರ – ಗಡಿ ಜಿಲ್ಲೆಯಲ್ಲಿ ಕೋರೋನಾ ವೈರಸ್ ಆರ್ಭಟ ಹಿನ್ನೆಲೆಯಲ್ಲಿ.ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ರಾಜ್ಯದ ಆರೋಗ್ಯ ಮಂತ್ರಿ ಡಾ. ಸುಧಾಕರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಪತ್ರವೊಂದನ್ನು ಬರೆದಿದ್ದು, ಜೀವ ಉಳಿಸಿ ಎಂದು ಮನವಿ ಮಾಡಿದ್ದಾರೆ.
ಜಿಲ್ಲಾ ಆಸ್ಪತ್ರೆಯಲ್ಲಿ ೨೮೬ ರೋಗಿಗಳ ಜೀವ ಅಪಾಯದಲ್ಲಿ ಇರುವುದು ಎಂದು ಡಾ.ಸುಧಾಕರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಿಗೆ ಪತ್ರದ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯಾವ ಕಾರಣಕ್ಕಾಗಿ ಜಿಲ್ಲೆಯಲ್ಲಿ ಔಷಧ ಕೊರತೆ ಆಗಿದೆ ಎಂಬುದನ್ನು ಸ್ಪಷ್ಟವಾಗಿ ಹೇಳಿ..ರೋಗಿಗಳಿಗೆ ಏನೇ ಆದರೂ ನೀವು ಹೊಣೆಗಾರ ಎಂದು ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಪತ್ರದ ಮೂಲಕ ತಿಳಿಸಿದ್ದಾರೆ.