ಬಾಂಗ್ಲಾ ದೇಶದ ವಿರುದ್ಧ ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸ್ ಜೊತೆಗೆ ವಾಗ್ವಾದಕ್ಕಿಳಿದ ಹಿಂದೂ ಕಾರ್ಯಕರ್ತರು
ಬೀದರ -ನೆರೆಯ ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಲ್ಲೆ ಪ್ರಕರಣಗಳು ಭಾರತದಲ್ಲೂ ಕಾವು ಮೂಡಿಸತೊಡಗಿದೆ. ವಿಶ್ವ ಹಿಂದೂ ಪರಿಷತ್, ಭಜರಂಗ ದಳ ಸೇರಿದಂತೆ ವಿವಿಧ ಹಿಂದೂ ಪರ ಸಂಘಟನೆಗಳು ದೇಶದ ಹಲವು ನಗರಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಬಾಂಗ್ಲಾ ಹಿಂದೂಗಳ ರಕ್ಷಣೆಗೆ ಮುಂದಾಗುವಂತೆ ಒತ್ತಾಯಿಸಿವೆ.
ಬೀದರ ನಲ್ಲಿ ಕೂಡ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಬಾಂಗ್ಲಾದೇಶ ಪ್ರಧಾನಿಯ ಭಾವಚಿತ್ರ ಸುಡಲು ಮುಂದಾದ ಸಂದರ್ಭದಲ್ಲಿ ಪೊಲೀಸ್ ತಡೆಯುಂಟು ಮಾಡಿದರು.
ಇದರಿಂದ ಕೆರಳಿದ ವಿಶ್ವ ಹಿಂದೂ ಪರಿಷತ್ ಸದಸ್ಯರಾಗಿರುವ ಶಶಿಕುಮಾರ್ ಹೊಸಳ್ಳಿ ಪೊಲೀಸ್ ವಿರುದ್ಧ ವಾಗ್ವಾದಕ್ಕಿಳಿದರು. ನಾವು ನಮ್ಮ ರಾಜ್ಯದ ಮುಖ್ಯಮಂತ್ರಿ ಅಥವಾ ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರ ಸುಡುತ್ತಿಲ್ಲ..ಹೊರ ದೇಶದ ಪ್ರಧಾನಿಯ ಫೋಟೋ ಸುಟ್ಟರೆ ನೀವು ಯಾಕೆ ವಿರೋಧ ಮಾಡುತ್ತೀರಿ ಸುಡಲು ಅನುಮತಿ ಯಾಕೆ ಕೊಡುವುದಿಲ್ಲ ಎಂದು ಪ್ರತಿಭಟನೆಕಾರರು ಪೊಲೀಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ವರದಿ : ನಂದಕುಮಾರ ಕರಂಜೆ, ಬೀದರ

