- Advertisement -
ಬೀದರ್ ಪೊಲೀಸರ ಭರ್ಜರಿ ಕಾರ್ಯಾಚರಣೆ- 43 ಲಕ್ಷ ಮೌಲ್ಯದ ವಸ್ತು ವಶಕ್ಕ
ಬೀದರ – ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣಗಳನ್ನು ಭೇದಿಸಿದ ಪೊಲೀಸ್ ಅಧಿಕಾರಿಗಳು ಬಂಗಾರ, ಬೆಳ್ಳಿ, ದ್ವಿಚಕ್ರ ವಾಹನಗಳು, ಜಾನುವಾರುಗಳು ಸೇರಿ ಒಟ್ಟು 43,87,100 ರೂಪಾಯಿ ಮೌಲ್ಯದ ಸ್ವತ್ತು ರಿಕವರಿ ಮಾಡಿಕೊಂಡಿದ್ದಾರೆ.
ಹುಮನಾಬಾದ್, ಬಸವಕಲ್ಯಾಣ, ಭಾಲ್ಕಿ, ಕಮಲನಗರ, ಔರಾದ ಸೇರಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣಗಳನ್ನು ಬೀದರ ಪೊಲೀಸರು ಭೇದಿಸಿದ್ದಾರೆ.
ಈ ಎಲ್ಲಾ ಪ್ರಕರಣ ಸಂಬಂಧ 25 ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ ಎಂಬುದಾಗಿ ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಮಾಹಿತಿ ನೀಡಿದ್ದಾರೆ.
- Advertisement -
ವರದಿ – ನಂದಕುಮಾರ ಕರಂಜೆ, ಬೀದರ