Bidar: ಉದ್ಯೋಗ ಮೇಳದಲ್ಲಿ ಸಾವಿರಾರು ನಿರುದ್ಯೋಗಿಗಳು ಭಾಗಿ

0
225

ಬೀದರ – ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ಭೀಮಣ್ಣಾ ಖಂಡ್ರೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲೋಜಿ ಇಂಜಿನಿಯರಿಂಗ್ ಕಾಲೇಜ್ ಆವರಣದಲ್ಲಿ   ನಡೆಯುತ್ತಿರುವ ಬೃಹತ್ ಉದ್ಯೋಗ ಮೇಳ 2023ರ ಉದ್ಯೋಗ ಮೇಳದಲ್ಲಿ ಸುಮಾರು 120ಕ್ಕೂ ಹೆಚ್ಚು ಕಂಪನಿಗಳು ಭಾಗಿಯಾಗಿದ್ದವು.

ಈ ಬೃಹತ್ ಉದ್ಯೋಗ ಮೇಳಕ್ಕೆ ಉದ್ಯೋಗಕ್ಕಾಗಿ  ಸಾವಿರಾರು ಉದ್ಯೋಗಾಕಾಂಕ್ಷಿಗಳು ಭಾಗಿಯಾಗಿದ್ದು ಸುಮಾರು ಒಂದು ಸಾವಿರ ವಿದ್ಯಾರ್ಥಿಗಳಿಗೆ ಉದ್ಯೋಗ ಸಿಗುವ ನಿರೀಕ್ಷೆ ಇದೆ ಎನ್ನಲಾಗಿದೆ.

ಜಿಲ್ಲಾಡಳಿತ ಬೀದರ್, ಸಂಜೀವಿನಿ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತಾ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಪಂಚಾಯತ್ , ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಜಿಲ್ಲಾ ಉದ್ಯೋಗ ಮತ್ತು ವಿನಿಮಯ ಕೇಂದ್ರ ಬೀದರ್, ಕ್ಯಾಡ್ ಮ್ಯಾಕ್ಸ್ ಬೆಂಗಳೂರು ಮತ್ತು ಪ್ರತಿಷ್ಟಿತ ಕಂಪನಿಗಳು ಹಾಗೂ ಭೀಮಣ್ಣಾ ಖಂಡ್ರೆ ತಾಂತ್ರಿಕ ಮಹಾವಿದ್ಯಾಲಯ (BKIT) ಭಾಲ್ಕಿ ಇವರ ಸಂಯುಕ್ತಾಶ್ರಯದಲ್ಲಿ ಬೃಹತ್ ಉದ್ಯೋಗ ಮೇಳ ಕಾರ್ಯಕ್ರಮ ಜಿಲ್ಲಾ ಆಡಳಿತ ನಡೆಸಿಕೊಟ್ಟಿದೆ

ಬೃಹತ್ ಉದ್ಯೋಗ ಮೇಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ದೀಪ ಬೆಳಗುವ ಮೂಲಕ ಮೇಳಕ್ಕೆ ಚಾಲನೆ  ನೀಡಿದರು..

ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ  ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಆತ್ಮವಿಶ್ವಾಸ ಇದ್ದರೆ ಪರ್ವತವನ್ನೇ ನಡೆಸ ಬಲ್ಲ ಶಕ್ತಿ  ಯುವಕರಲ್ಲಿ ಬರಬೇಕು ಎಂದರು.

ಬೀದರ್ ಜಿಲ್ಲೆ ಶರಣರ ನಾಡು ಇಲ್ಲಿ ಕಾಯಕಕ್ಕೆ ಹೆಚ್ಚು ಒತ್ತು ನೀಡಲಾಗುವುದು ಕಾಯಕವೇ ಕೈಲಾಸ.ಆಥಿ೯ಕ ನೀತಿಯಿಂದ ಮತ್ತು ಕೋರೊನಾ ಮಹಾ ಮಾರಿಯಿಂದ ದೇಶದಲ್ಲಿ ನಿರುದ್ಯೋಗ ಹೆಚ್ಚಾಗಿದೆ. ಇದರಿಂದಾಗಿ ಯುವಕರು ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಯುವಕರ ನಿರುದ್ಯೋಗ ಹೋಗಲಾಡಿಸಲು ಈ ಭಾಗದ ಯುವಕರಿಗಾಗಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದರು.

ದುಡಿಯುವ ಕೈಗಳಿಗೆ ಕೆಲಸ ಕೆಲಸ ಕೊಡುವ ಅವಶ್ಯಕತೆ ಇದೆ. ಉದ್ಯೋಗ ಇದ್ದರೆ ಮಾತ್ರ ಯುವಕರು ಉತ್ತಮ ಜೀವನ ರೂಪಿಸಲು ಸಾಧ್ಯ. ಬಂಡೆಯಂತೆ ಗಟ್ಟಿಯಾಗಿ ಮುನ್ನಡೆಯಿರಿ ಎಂದು ವಿದ್ಯಾರ್ಥಿಗಳಿಗೆ ಸಚಿವ ಈಶ್ವರ ಖಂಡ್ರೆ ಕಿವಿ ಮಾತು ಹೇಳಿದರು.

ಉದ್ಯೋಗ ಅರಸಿ  ಬೀದರ ಜಿಲ್ಲೆ ಯಾದ್ಯಂತ ಯವಕರು ಉದ್ಯೋಗ ‌ಮೇಳಕ್ಕೆ  120 ಕ್ಕೂ ಹೆಚ್ಚು ಕಂಪನಿಗಳು ಬಂದಿವೆ ಕನಿಷ್ಠ ಸಾವಿರ ಮೇಲ್ಪಟು ವಿದ್ಯಾರ್ಥಿ ಗಳಿಗೆ  ನೇಮಕಾತಿ ಪತ್ರ ದೊರಕುವ ವಿಶ್ವಾಸ ವ್ಯಕ್ತಪಡಿಸಿದರು.

ಪೌರಾಡಳಿತ ಸಚಿವ ರಹೀಂ ಖಾನ್ , ವಿಧಾನಪರಿಷತ್ ಸದಸ್ಯರಾದ ಅರವಿಂದ ಕುಮಾರ ಅರಳಿ, ಚಂದ್ರಶೇಖರ ಪಾಟೀಲ, ಭೀಮರಾವ್ ಪಾಟೀಲ್, ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ, ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಶಿಲ್ಪಾ ಎಮ್, ಸೇರಿದಂತೆ ಜಿಲ್ಲೆಯ ಅಧಿಕಾರಿಗಳು ಹಾಗೂ ರಾಜಕೀಯ ‌ನಾಯಕರು ಸಾಥ್ ನೀಡಿದರು.


ವರದಿ: ನಂದಕುಮಾರ ಕರಂಜೆ, ಬೀದರ