ಹಾಲಿ ಹಾಗೂ ಮಾಜಿ ಸಿಎಂಗಳ ಬೀದರ್ ಪ್ರವಾಸ

Must Read

ಶನಿವಾರ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಶನಿವಾರ ಬೀದರ್ ಪ್ರವಾಸ ಕೈಗೊಂಡಿದ್ದು ಅನೇಕ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ

ಬೆಂಗಳೂರಿನಿಂದ ವಿಶೇಷ ವಿಮಾನ ಮೂಲಕ ಬೀದರ್ ಏರಬೇಸ್ ಗೆ ಬರಲಿರುವ ಸಿಎಂ‌ ಬಳಿಕ ಏರಬೇಸ್ ನಿಂದ ಹೆಲಿಕಾಪ್ಟರ್ ಮೂಲಕ ಬಿಕೆಡಿಬಿ ಮೈದಾನಕ್ಕೆ ಆಗಮಿಸುವರು.

ಮಂಡಳಿ ಸಭಾ ಭವನದಲ್ಲಿ ನಡೆಯಲಿರುವ ಬಸವಕಲ್ಯಾಣ ಅಭಿವೃದ್ಧಿ ಮಂಡಳಿ ಸಭೆಯಲ್ಲಿ ಅವರು ಭಾಗಿಯಾಗಿ ಬಳಿಕ ಬಸವಕಲ್ಯಾಣವನ್ನು ಸುಂದರ ನಗರವನ್ನಾಗಿಸುವ ವಿವಿಧ ಯೋಜನೆಗಳ ಅನಾವರಣ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಅನಂತರ ಡಾ. ಬಿಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ ಮಾಡುವರು.

ಬಸವಕಲ್ಯಾಣದ ಥೇರು ಮೈದಾನದಲ್ಲಿ ಈ ಎಲ್ಲ ಕಾರ್ಯಕ್ರಮಗಳು ನಡೆಯಲಿವೆ.

ಸಂಜೆ ಬೀದರ್ ನಿಂದ ವಿಶೇಷ ವಿಮಾನದ ಮೂಲಕ ಸಿಎಂ ಹಾಗೂ ಮಾಜಿ ಸಿಎಂ ಬೆಂಗಳೂರಿಗೆ ಪ್ರಯಾಣ ಮಾಡಲಿದ್ದಾರೆ.

ಕೇಂದ್ರ ಸಚಿವ ಭಗವಂತ್ ಖೂಬಾ, ಜಿಲ್ಲಾ ಉಸ್ತುವಾರಿ ಸಚಿವ ಶಂಕರ್ ಬಿ ಪಾಟೀಲ್ ಮನೇನಕೊಪ್ಪ ಸಚಿವ ಪ್ರಭು ಚವ್ಹಾಣ್, ಶಾಸಕರು, ಅಧಿಕಾರಿಗಳು, ಸ್ವಾಮೀಜಿಗಳು ಸಮಾರಂಭದಲ್ಲಿ ಮುಖ್ಯಮಂತ್ರಿಗಳ ಜೊತೆ ಭಾಗವಹಿಸಲಿದ್ದಾರೆ.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group