ಬಿಹಾರ ಚುನಾವಣೆಯಲ್ಲಿ ಎನ್ ಡಿ ಎ ಬಹುಮತ: ಕಡಾಡಿ ಸಂತಸ

Must Read

ಮೂಡಲಗಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರು ನಡೆಸಿದ್ದ ಓಟ್ ಚೋರಿ ಎಂಬ ಸುಳ್ಳು ಅಭಿಯಾನವನ್ನು ಜನ ಧಿಕ್ಕರಿಸಿ ಎನ್‌.ಡಿ.ಎ ಮೈತ್ರಿಕೂಟವನ್ನು ಬಾರಿ ಬಹುಮತದಿಂದ ಗೆಲ್ಲಿಸಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ನ-14 ರಂದು ಪತ್ರಿಕಾ ಹೇಳಿಕೆ ನೀಡಿದ ಅವರು ಕಾಂಗ್ರೆಸ್ ಅತಿಯಾಗಿ ತುಷ್ಟೀಕರಣ ರಾಜಕಾರಣದ ಮೂಲಕ ಒಂದು ಧರ್ಮದ ಜನರನ್ನು ಓಲೈಸುವುದನ್ನು ಮತದಾರರು ತಿರಸ್ಕಾರ ಮಾಡಿರುವುದು ಬಹಳ ಸ್ಪಷ್ಟವಾಗಿದೆ. ಈ ದೇಶ ಕಂಡ ಅಭಿವೃದ್ದಿ ಪರ ಚಿಂತಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ದೇಶದ ಜನ ಬಹಳ ದೊಡ್ಡ ಪ್ರಮಾಣದಿಂದ ಒಪ್ಪಿರುವುದು ಇದರಿಂದ ತಿಳಿದು ಬರುತ್ತದೆ ಮತ್ತು ಅವರ ನಾಯಕತ್ವವನ್ನು ಪ್ರಶ್ನಿಸಿ ವಿನಾಕಾರಣ ಸುಳ್ಳು ಆರೋಪ ಮಾಡುವವರು ಕೂಡಾ ಇದರಿಂದ ಪಾಠ ಕಲಿಯಬೇಕಾಗಿದೆ ಎಂದರು.

ಬಿಹಾರ ಮುಖ್ಯಮಂತ್ರಿ ನಿತೀಶ ಕುಮಾರ ಅವರ ಆಡಳಿತಕ್ಕೆ ಬಿಹಾರದ ಮತದಾರರು ಅಭೂತಪೂರ್ವ ಗೆಲುವು ಕೊಟ್ಟಿದ್ದಾರೆ. ಈ ಚುನಾವಣೆಯಲ್ಲಿ ಗೆಲುವು ದಾಖಲಿಸಿದ ಎನ್‌ಡಿಎ ಅಭ್ಯರ್ಥಿಗಳಿಗೆ ಅಭಿನಂದನೆಗಳು ಹಾಗೂ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಪಕ್ಷದ ಪದಾಧಿಕಾರಿಗಳಿಗೆ, ಕಾರ್ಯಕರ್ತರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Latest News

ಬಾಲಿವುಡ್ ಬೆಡಗಿಯಾಗಿ ಮೆರೆದ ಕನ್ನಡದ ಹುಡುಗಿ ಶಾಂತಾ ಹುಬ್ಳಿಕರ

ಮಹಾರಾಷ್ಟ್ರ ಮತ್ತು ಭಾರತೀಯ ಚಿತ್ರ ರಂಗಕ್ಕೆ ಕನ್ನಡದ ಕೊಡುಗೆ ಅಪಾರ. ಅಮೀರ್ ಬಾಯಿ ಕರ್ನಾಟಕಿ ಗುರು ದತ್ತ ಶ್ಯಾಮ ಬೆನಗಲ್ ಗಿರೀಶ್ ಕಾರ್ನಾಡ ವಿ ಶಾಂತಾರಾಮ...

More Articles Like This

error: Content is protected !!
Join WhatsApp Group