spot_img
spot_img

ಸ್ವೀಪ್ ಸಮಿತಿ ಯೋಜನೆಯಡಿ ಬೈಕ್ ಜಾಗೃತಿ ಅಭಿಯಾನಕ್ಕೆ ಚಾಲನೆ.

Must Read

spot_img
- Advertisement -

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು ಎಂಬ ಕಾರಣಕ್ಕಾಗಿ ಚುನಾವಣಾ ಆಯೋಗ ವಿಭಿನ್ನವಾಗಿ ಜಾಗೃತಿ ಮೂಡಿಸುವ ಕಾರ್ಯ ನಡೆಸುತ್ತಿದೆ ಎಂದು ಸಹಾಯಕ ಚುನಾವಣಾಧಿಕಾರಿ ವಿನಯ ಪಾಟೀಲ್ ಹೇಳಿದರು.

ಪಟ್ಟಣದಲ್ಲಿ ಸ್ವೀಪ್ ಸಮಿತಿ ಯೋಜನೆಯಡಿಯಲ್ಲಿ ಹಮ್ಮಿಕೊಂಡ ಬೈಕ್ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಲೋಕಸಭಾ ಚುನಾವಣೆ ಘೋಷಣೆಯಾದಾಗಿನಿಂದ ತಾಲೂಕಿನಾದ್ಯಂತ ಈಗಾಗಲೇ ಗ್ರಾಮ ಪಂಚಾಯಿತಿ ಹಂತದಿಂದ ಜಿಲ್ಲಾ ಮಟ್ಟದವರೆಗೆ ಸ್ವೀಪ್ ಚಟುವಟಿಕೆಗಳ ವಿಭಿನ್ನ ಕಾರ್ಯಕ್ರಮಗಳನ್ನು
ಹಮ್ಮಿಕೊಂಡು ಜನರಲ್ಲಿ ಮತದಾನದ ಬಗ್ಗೆ ಜಾಗೃತಿಯನ್ನು ಮೂಡಿಸಲಾಗಿದೆ. ಹಾಗೆಯೇ ಈ ಚುನಾವಣೆಯಲ್ಲಿ 80 ವರ್ಷ ಪೂರೈಸಿದ ಹಿರಿಯ ನಾಗರಿಕರಿಗೆ ಅಂಚೆ ಮತದಾನದ ಅವಕಾಶವಿದ್ದು, ಅಂಚೆ ಮತದಾನದ ಮಹತ್ವವನ್ನು ಜನರಿಗೆ ಅರಿವು ಮೂಡಿಸಲು ಈಗಾಗಲೇ ಎಲ್ಲ ಕ್ರಮ ವಹಿಸಲಾಗಿದೆ. ಮತದಾನದ ದಿವಸ ಹೆಚ್ಚಿನ ಜನರನ್ನು ಮತಗಟ್ಟೆಗೆ ಕರೆದುಕೊಂಡು ಬಂದು ಮತ ಚಲಾವಣೆ ಮಾಡಿಸುವುದು ನಮ್ಮ ಗುರಿಯಾಗಿದೆ ಎಂದು ವಿವರಿಸಿದರು.

ಈ ವೇಳೆ ತಹಶೀಲ್ದಾರ್ ಪದೀಪಕುಮಾರ ಹಿರೇಮಠ ಮಾತನಾಡಿ, ಚುನಾವಣೆ ಸುಗಮವಾಗಿ ನಡೆಸಲು ಹಾಗೂ ಮತದಾರರಲ್ಲಿ ಮತದಾನದ ಜಾಗೃತಿ ಮೂಡಿಸಲು ತಾಲೂಕಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಜನರಲ್ಲಿ ಮತದಾನದ ಅರಿವು ಮೂಡಿಸಲು ಈಗಾಗಲೇ ವಿವಿಧ ಇಲಾಖೆಯ ವತಿಯಿಂದ ಸ್ವೀಪ್ ಚಟುವಟಿಕೆಗಳ ಅಡಿಯಲ್ಲಿ ವಿಭಿನ್ನವಾಗಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿ,
ಅದಷ್ಟು ಹೆಚ್ಚಿನ ಪ್ರಮಾಣದಲ್ಲಿ ಮತದಾನದ ಅರಿವು ಮೂಡಿಸಲು ಕ್ರಮ ವಹಿಸಿದೆ ಎಂದರು.

- Advertisement -

ಸಹಾಯಕ ಚುನಾವಣಾಧಿಕಾರಿ ವಿನಯ ಪಾಟೀಲ, ಸಿಂದಗಿ ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ, ಆಲಮೇಲ ತಹಶೀಲ್ದಾರ್ ಮಹಾದೇವ ಸಣ್ಣಮುರಿ, ತಾಪಂ ಇಒ ಸುಬ್ರಮಣ್ಯ ಶರ್ಮಾ, ಪುರಸಭೆ ಮುಖ್ಯಾಧಿಕಾರಿ ಗುರುರಾಜ ಚೌಕಿಮಠ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನಗರದಾದ್ಯಂತ ಬೈಕ್ ಓಡಿಸುವ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆಸಿದರು.
ಪಟ್ಟಣದ ತಾಲೂಕು ಆಡಳಿತದಿಂದ ಹೊರಟ ಬೈಕ್ ಜಾಗೃತಿ ಅಭಿಯಾನವು ಸ್ವಾಮಿ ವಿವೇಕಾನಂದ ವೃತ್ತದ ಮಾರ್ಗವಾಗಿ ಕನಕದಾಸ ವೃತ್ತ, ಡೋಹರ ಕಕ್ಕಯ್ಯ ವೃತ್ತ, ಬಸ್ ನಿಲ್ದಾಣ, ಡಾ.ಅಂಬೇಡ್ಕರ ವೃತ್ತದಿಂದ ಬಸವೇಶ್ವರ ವೃತ್ತದ ಮಾರ್ಗವಾಗಿ ತಾಲೂಕು ಕಚೇರಿಯ ಹತ್ತಿರ ಮುಕ್ತಾಯಗೊಂಡಿತು.

ಇದೇ ಸಂದರ್ಭದಲ್ಲಿ ಸಿಪಿಐ ನಾನಾಗೌಡ ಪೊಲೀಸ್ ಪಾಟೀಲ್, ಪಿಎಸ್‍ಐ ಭೀಮಪ್ಪ ರಬಕವಿ, ಕಂದಾಯ ನಿರೀಕ್ಷಕ ಆಯ್.ಎ.ಮಕಾಂದರ ಸೇರಿದಂತೆ ಸಿಂದಗಿ ಮತ್ತು ಆಲಮೇಲ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.

- Advertisement -
- Advertisement -

Latest News

ಬೆಳಗಾವಿ ಜಿಲ್ಲಾ ಕೃಷಿಕ ಸಮಾಜದ ನೂತನ ಅಧ್ಯಕ್ಷರಾಗಿ ಶಂಕರಗೌಡ ಪಾಟೀಲ್ ಆಯ್ಕೆ

ಜಿಲ್ಲಾ ಕೃಷಿಕ ಚುನಾವಣೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರವೇಶ ; ಎಲ್ಲ ಸ್ಥಾನಗಳೂ ಅವಿರೋಧ ಆಯ್ಕೆ ರಾಜ್ಯ ಪ್ರತಿನಿಧಿಯಾಗಿ ಬಾಳಪ್ಪ ಬೆಳಕೂಡ ಆಯ್ಕೆ ಬೆಳಗಾವಿ- ಸಹಕಾರ ವಲಯದ ಜಿಲ್ಲಾ...
- Advertisement -

More Articles Like This

- Advertisement -
close
error: Content is protected !!
Join WhatsApp Group