ಸಾವಿನ ತಾಣವಾದ ಬಿಮ್ಸ್ ಆಸ್ಪತ್ರೆ ; ಜನರಲ್ಲಿ ಆತಂಕ

Must Read

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...

ಅರುಣ ಕಿರಣ ಪ್ರತಿದಿನ

. . .🕉. . . . || ಶ್ರೀ ಗುರುಭ್ಯೋ ನಮಃ || || ಓ೦ ಗ೦ ಗಣಪತಯೇ ನಮಃ || 🙏ಶುಭೋದಯ🙏 16: 06: 2021 ಬುಧವಾರ ಕಲಿಯುಗಾಬ್ದ...

ಟೈಮ್ಸ್ ಆಫ್ ಕರ್ನಾಟಕ ವರದಿಗೆ ಸ್ಪಂದನೆ ; ಅಕ್ರಮ ಮರಳು ದಂಧೆಯ ಬಗ್ಗೆ ಸ್ಪಷ್ಟೀಕರಣ ನೀಡಿದ ಎಸಿ

ಸಿಂದಗಿ: "ಅಕ್ರಮ ಮರಳು ಸಾಗಾಟ ನಿರಂತರ ; ಜಾಣ ಕುರುಡರಾದ ಅಧಿಕಾರಿಗಳು " ಎಂಬ ಶೀರ್ಷಿಕೆಯಲ್ಲಿ ನಮ್ಮ ಟೈಮ್ಸ ಆಫ್ ಕರ್ನಾಟಕ ವೆಬ್ ಪತ್ರಿಕೆಯಲ್ಲಿ ದಿ....

ಬೆಳಗಾವಿ – ಅವ್ಯವಸ್ಥೆಯ ತಾಣವೆಂದೇ ಕುಖ್ಯಾತಿ ಪಡೆದಿರುವ ಬೆಳಗಾವಿಯ ಬಿಮ್ಸ್ ಆಸ್ಪತ್ರೆ ಈಗ ಸಾವಿನ ತಾಣವಾಗಿಯೂ ಕುಖ್ಯಾತಿ ಪಡೆಯುವಷ್ಟರ ಮಟ್ಟಿಗೆ ಇಲ್ಲಿ ಕೊರೋನಾ ರೋಗಿಗಳ ಸಾವು ಸಂಭವಿಸುತ್ತಿದ್ದು ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ.

ಬಿಮ್ಸ್ ನಲ್ಲಿ ಸಿಬ್ಬಂದಿಯ ನಿರ್ಲಕ್ಷ್ಯ ಹಾಗೂ ಕಳಪೆ ಸಲಕರಣೆಯಿಂದಾಗಿ ಪ್ರತಿದಿನ ಸರಾಸರಿ ೫ ಜನರು ಕೋವಿಡ್ ನಿಂದಾಗಿ ಮೃತರಾಗುತ್ತಿದ್ದು ಕಳೆದ ೧೫ ದಿನಗಳಲ್ಲಿ ೧೧೦ ಸಾವು ಸಂಭವಿಸಿವೆ.

ಪ್ರಕರಣದ ಗಂಭೀರತೆ ಅರಿತ ರಾಜ್ಯದ ಸಿಎಂ ಯಡಿಯೂರಪ್ಪನವರೇ ದಿ. ೪ ರಂದು ಬೆಳಗಾವಿಗೆ ಆಗಮಿಸಿ ಪರಿಶೀಲನೆ ನಡೆಸಿದರು. ಜಿಲ್ಲೆಯ ಮಂತ್ರಿ ಮಹೋದಯರೂ ಕೂಡ ಬಿಮ್ಸ್ ಆಸ್ಪತ್ರೆಯ ಕರ್ಮಕಾಂಡದ ಪರಿಶೀಲನೆ ನಡೆಸಿದ್ದು ಮುಂದೆ ಯಾವ ರೀತಿಯ ಕ್ರಮಕ್ಕೆ ಮುಂದಾಗುತ್ತಾರೆಂಬುದನ್ನು ಕಾದು ನೋಡಬೇಕಾಗಿದೆ.

- Advertisement -

ಈ ಮಧ್ಯೆ ಕಾಂಗ್ರೆಸ್ ಮುಖಂಡ ಸತೀಶ ಜಾರಕಿಹೊಳಿಯವರು ಬಿಮ್ಸ್ ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ನಿಯೋಗದೊಂದಿಗೆ ರಾಜ್ಯ ಸರ್ಕಾರದ ಗಮನ ಸೆಳೆದಿದ್ದರು. ಲಕ್ಷ್ಮೀ ಹೆಬ್ಬಾಳಕರ, ಅಶೋಕ ಪಟ್ಟಣ, ಮಹಾಂತೇಶ ಕೌಜಲಗಿ, ಅಂಜಲಿ ನಿಂಬಾಳ್ಕರ, ಪ್ರಕಾಶ ಹುಕ್ಕೇರಿಯವರೊಡಗೂಡಿ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಬಿಮ್ಸ್ ಆಸ್ಪತ್ರೆಯ ಅವಸ್ಥೆಯ ಬಗ್ಗೆ ವಿವರಣೆ ನೀಡಿ ಕ್ರಮಕ್ಕೆ ಒತ್ತಾಯಿಸಿದ್ದರು. ಆದರೂ ಆಸ್ಪತ್ರೆಯ ಪರಿಸ್ಥಿತಿಯಲ್ಲಿ ಯಾವುದೆ ಬದಲಾವಣೆ ಕಂಡು ಬಂದಿಲ್ಲ. ದಿನೇ ದಿನೇ ಕೊರೋನಾ ಸಾವಿನ ಸಂಖ್ಯೆ ಹೆಚ್ಚಾಗುತ್ತಲಿದ್ದು ಇದು ಆಸ್ಪತ್ರೆಯೋ ಸಾವಿನ ಮನೆಯೋ ಎಂಬ ಭಾವನೆ ಜನರಲ್ಲಿ ಮೂಡುತ್ತಿದೆ.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...
- Advertisement -

More Articles Like This

- Advertisement -
close
error: Content is protected !!