ನಗರ ಕೇಂದ್ರ ಗ್ರಂಥಾಲಯದಲ್ಲಿ ಬಾಬು ಜಗಜೀವನ್ ರಾಮ್ ಅವರ ಜನ್ಮ ದಿನಾಚರಣೆ

Must Read

ಬೆಳಗಾವಿ: ನಗರದ ಕೇಂದ್ರ ಗ್ರಂಥಾಲಯದಲ್ಲಿ ಹಸಿರು ಕ್ರಾಂತಿಯ ಹರಿಕಾರ,ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ಅವರ 116 ನೆಯ ಜನ್ಮ ದಿನಾಚರಣೆ ನಿಮಿತ್ತ ಪೂಜೆ ಸಲ್ಲಿಸಿ, ಗೌರವ ನಮನ ಸಲ್ಲಿಸಲಾಯಿತು. ಗ್ರಂಥಪಾಲಕರಾದ ಶಶಿಕಲಾ ಸೀಮಿಮಠ ಅವರು ಪೂಜೆ ನೆರವೇರಿಸಿದರು.

ದೇಶಾದ್ಯಂತ ‘ಬಾಬುಜಿ’ ಎಂದೇ ಕರೆಯಲ್ಪಡುವ ಜಗಜೀವನ ರಾಮ್ ಧೀಮಂತ ರಾಷ್ಟ್ರೀಯ ನಾಯಕ, ಸ್ವಾತಂತ್ರ್ಯ ಮತ್ತು ಸಾಮಾಜಿಕ ನ್ಯಾಯ ಹೋರಾಟಗಾರ ಹಾಗೂ ಅತ್ಯುತ್ತಮ ಸಂಸದೀಯ ಪಟುವಾಗಿದ್ದರು. ಬಾಬು ಜಗಜೀವನ ರಾಮ್ ಅವರು ಸ್ವಾತಂತ್ರ್ಯ ಹೋರಾಟಗಾರರಾಗಿ, ಸಂವಿಧಾನ ರಚನಾ ಸಭೆಯ ಸದಸ್ಯರಾಗಿ ಮತ್ತು ಮೊದಲ ಉಪ ಪ್ರಧಾನಿಯಾಗಿ ನಮ್ಮ ದೇಶಕ್ಕೆ ಮಹತ್ತರ ಕೊಡುಗೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಸಿಬ್ಬಂದಿಗಳಾದ ಪ್ರಕಾಶ ಇಚಲಕರಂಜಿ, ಸುಮಿತ್ ಕಾವಳೆ, ಅಂಬೇಕರ್, ಆನಂದ ಮುತ್ತಗಿ, ಸುನಿಲ್, ಲಕ್ಷ್ಮಿ, ಪೂರ್ಣಿಮಾ, ಅಕ್ಷತಾ, ಮತ್ತಿತರರು ಮತ್ತು ವಿದ್ಯಾರ್ಥಿಗಳು, ಓದುಗರು ಹಾಜರಿದ್ದು ನಮನ ಸಲ್ಲಿಸಿ, ದೇಶಕ್ಕೆ ಅವರ ಕೊಡುಗೆಗಳನ್ನು ಸ್ಮರಿಸಿದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group