ಅರಭಾವಿ ಶಾಸಕರ ಗೃಹ ಕಛೇರಿಯಲ್ಲಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆ

Must Read

ಗೋಕಾಕ: ಮಾಜಿ ಪ್ರಧಾನಿ, ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆಯನ್ನು ಅರಭಾವಿ ಶಾಸಕರ ಗೃಹ ಕಛೇರಿಯಲ್ಲಿ ಶನಿವಾರದಂದು ಸರಳವಾಗಿ ಆಚರಿಸಲಾಯಿತು.

ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಅವರು ದಿ.ಅಟಲ್ ಬಿಹಾರಿ ವಾಜಪೇಯಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಭಾರತ ಕಂಡ ಪ್ರಧಾನಿಗಳಲ್ಲಿ ವಾಜಪೇಯಿ ಅವರು ಅತ್ಯುತ್ತಮವಾಗಿದ್ದರು. ಇವರ ಆಡಳಿತದಲ್ಲಿ ದಕ್ಷತೆ, ಪ್ರಾಮಾಣಿಕತೆ ಜೊತೆಗೆ ಇಡೀ ಜಗತ್ತೇ ಮೆಚ್ಚುವ ಆಡಳಿತ ನೀಡಿದ್ದರು. ಇವರೊಬ್ಬ ಅಜಾತ ಶತ್ರು. ಅನೇಕ ಅಭಿವೃದ್ಧಿಪರ ಯೋಜನೆಗಳು ಇವರ ಆಡಳಿತದಲ್ಲಿ ನಡೆದಿದ್ದವು. ದೇಶ ಕಂಡ ಮುತ್ಸದ್ಧಿ ರಾಜಕಾರಣಿ ದಿ. ವಾಜಪೇಯಿ ಅವರಾಗಿದ್ದರು ಎಂದು ಹೇಳಿದರು.

ಆಪ್ತ ಸಹಾಯಕರಾದ ನಿಂಗಪ್ಪ ಕುರಬೇಟ, ಲಕ್ಕಪ್ಪ ಲೋಕುರಿ, ಅಬ್ದುಲ್ ಮಿರ್ಜಾನಾಯ್ಕ, ಗುತ್ತಿಗೆದಾರ ಮಹಾದೇವ ಹಾರೂಗೇರಿ, ಮಾರುತಿ ಸರ್ವಿ, ಅಶೋಕ ಸರ್ವಿ, ಫಕೀರಪ್ಪ ಮಲ್ದೂರ, ಕಾಶೀಂ ಫಿರಜಾದೆ, ರಮೇಶ ಸಂಪಗಾಂವಿ, ಅಡಿವೆಪ್ಪ ಕಂಕಾಳಿ, ಅಸ್ಲಂ ಶೇಖ, ಬಿಜೆಪಿ ಪದಾಧಿಕಾರಿಗಳು ಸೇರಿದಂತೆ ಮತ್ತೀತರರು ಉಪಸ್ಥಿತರಿದ್ದರು.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group