ಬರಲಿರುವ ವಿಧಾನ ಪರಿಷತ್ ಚುನಾವಣೆಗೆ ಬೀದರ ಜಿಲ್ಲೆಯಿಂದ ಬಿಜೆಪಿ ಅಭ್ಯರ್ಥಿಯಾಗಿ ಪ್ರಕಾಶ್ ಖಂಡ್ರೆ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಭೀಮರಾವ್ ಬಿ ಪಾಟೀಲ್ ತಮ್ಮ ನಾಮ ಪತ್ರ ಸಲ್ಲಿಸಿದರು.
ಬೀದರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾಧಿಕಾರಿ ರಾಮಚಂದ್ರನ್ ಆರ್. ಅವರಿಗೆ ಇಬ್ಬರೂ ಅಭ್ಯರ್ಥಿಗಳು ತಮ್ಮ ನಾಮಪತ್ರ ಸಲ್ಲಿಸಿದರು.
ಈ ಮುಂಚೆ ಗಣೇಶ್ ಮೈದಾನದಿಂದ ಡಿಸಿ ಕಚೇರಿ ವರೆಗೆ ರ್ಯಾಲಿ ಮಾಡಿದ ಬಿಜೆಪಿ ಅಭ್ಯರ್ಥಿಯ ಜೊತೆ ಉಸ್ತುವಾರಿ ಸಚಿವ ಭಗವಂತ ಖೂಬಾ ಸಾಥ್ ನೀಡಿದರು.
ಇತ್ತ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಭೀಮರಾವ್ ಬಿ. ಪಾಟೀಲ ಅವರು ನಾಮಪತ್ರ ಸಲ್ಲಿಸಿದರು.
ನೇರವಾಗಿ ಜಿಲ್ಲಾಧಿಕಾರಿ ಕಚೇರಿಗೆ ಬಂದು ತಮ್ಮ ನಾಮಪತ್ರ ಸಲ್ಲಿಕೆ ಮಾಡಿದ ಕಾಂಗ್ರೆಸ್ ಅಭ್ಯರ್ಥಿ ಪಾಟೀಲ ಅವರ ಜೊತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಶಾಸಕ ರಹೀಂಖಾನ್ ಸಾಥ್ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಚೇರಿ ಎರಡೂ ಪಕ್ಷಗಳ ನೂರಾರು ಬೆಂಬಲಿಗರು ಜಮಾಯಿಸಿದ್ದರು.
ವರದಿ: ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ, ಬೀದರ