ಬಿಜೆಪಿಗೆ ಜನರ ಬಗ್ಗೆ ಕಾಳಜಿ ಇಲ್ಲ

Must Read

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...

“ಕಲಾಸೃಷ್ಟಿ” ಆರ್ಟ್ ವರ್ಕ್ ಗೆ ಚಾಲನೆ ನೀಡಿದ ಲೋಕಲ್ ಲೀಡರ್ ನಟ ಕಲ್ಮೇಶ್

ಬಾಗಲಕೋಟೆ: ಇದೆ ಅಕ್ಟೋಬರ್ ೧೫ ರಂದು, ಗದ್ದನಕೇರಿಯಲ್ಲಿ "ಕಲಾಸೃಷ್ಟಿ" ಆರ್ಟ್ ವರ್ಕ್ ಪ್ರಾರಂಭವಾಯಿತು. ಇದನ್ನು ನಟ ಕಲ್ಮೇಶ್, ಬಾಗಲಕೋಟೆಯ ನಟಿ ಅಂಕಿತಾ ನಾಯ್ಡು ಹಾಗೂ ಸಹ...

ಗೋವಿಂದಹಳ್ಳಿಯ ಪಂಚಲಿಂಗೇಶ್ವರ ; ಐದು ಶಿಖರಗಳ ಅಪರೂಪದ ಗುಡಿ

ಸ್ಥಳದ ಬಗ್ಗೆ ಕಿರು ಪರಿಚಯ: ಪ್ರಖ್ಯಾತ ಪ್ರವಾಸಿ ತಾಣವಾದ ಗೋವಿಂದನಹಳ್ಳಿಯ ಬ್ರಹ್ಮಲಿಂಗೇಶ್ವರ ಗುಡಿಯಿರುವುದು ಮಂಡ್ಯದಿಂದ 52 ಕಿ.ಮೀ ಹಾಗೂ ಕೃಷ್ಣರಾಜಪೇಟೆಯಿಂದ 20 ಕಿ.ಮೀ ಹಾಗು ಕಿಕ್ಕೇರಿಯಿಂದ...

ಸಿಂದಗಿ: ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೆ ಸ್ವರ್ಗ ಸೃಷ್ಟಿಸುತ್ತೇವೆ ಎಂದು ಹೇಳಿ ಜನತೆಗೆ ನರಕದ ದಾರಿ ತೋರಿಸಿದ್ದಾರೆ. ಬಿಜೆಪಿ ಪಕ್ಷ ಜನವಿರೋಧಿ ಹಾಗೂ ಕಾರ್ಮಿಕ ವಿರೋಧಿ ಸರಕಾರವೆಂದು ಬಿಂಬಿತವಾಗಿದೆ 2023ರ ಸಾರ್ವತ್ರಿಕ ಚುನಾವಣೆಯಲ್ಲಿ ಬದಲಾವಣೆ ಬಯಸಿದ್ದಾರೆ ಎಂದು ಮಾಜಿ ಸಭಾಪತಿ ಎ.ಆರ್.ಸುದರ್ಶನ ಆಡಳಿತ ಸರಕಾರಕ್ಕೆ ಟಾಂಗ್ ನೀಡಿದರು.

ಪಟ್ಟಣದ ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಎಲ್ಲ ನಾಯಕರ ಸಮ್ಮುಖದಲ್ಲಿ ಎಲ್ಲ ಗ್ರಾಪಂ, ಜಿಪಂ ಮಟ್ಟದಲ್ಲಿ ವೀಕ್ಷಕರನ್ನು ನೇಮಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರ ನೇತೃತ್ವದಲ್ಲಿ ಕಾರ್ಮಿಕ, ಅಲ್ಪಸಂಖ್ಯಾತರ, ಸೇವಾದಳ ಸೇರಿದಂತೆ ಎಲ್ಲ ವಿಭಾಗಗಳನ್ನು ತೊಡಗಿಸಿಕೊಂಡು ಈ ಉಪಚುನಾವಣೆ ಮಾಡುತ್ತೇವೆ. ಕೇಂದ್ರ ಹಾಗೂ ರಾಜ್ಯದಲ್ಲಿ ಜನವಿರೋಧಿ ಸರಕಾರಗಳು ಅಸ್ತಿತ್ವದಲ್ಲಿವೆ ಇವರಿಗೆ ಸಂವಿಧಾನದ ಮೇಲೆ ನಂಬಿಕೆ ಇಟ್ಟುಕೊಳ್ಳದ ಕಾರಣ ಅಭಿವೃದ್ಧಿ ಕುಸಿದಿದೆ ಎಚ್ಚರದ ಗಂಟೆಯಂತೆ ಪ್ರಜಾಪ್ರಭುತ್ವದ ಹಿತದೃಷ್ಟಿಯಿಂದ ಕೆಲ ತಿಂಗಳುಗಳ ಹಿಂದೆ ನಡೆದ ಮಸ್ಕಿ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ತಕ್ಕ ಪಾಠ ಕಲಿಸಿದ್ದಾರೆ ಅಲ್ಲದೆ ಬೆಳಗಾವಿಯಲ್ಲಿ ಸ್ವಲ್ಪ ಅಂತರದಲ್ಲಿ ಅಭ್ಯರ್ಥಿ ಸೋತಿದ್ದರೂ ಸಹ ಗೆದ್ದಂತಾಗಿದೆ. ಈ ಉಪಚುನಾವಣೆಯಲ್ಲಿಯೂ ಹೆಚ್ಚಿನ ಮತಗಳ ಅಂತರದಲ್ಲಿ ಅಶೋಕ ಮನಗೂಳಿ ಅವರು ಗೆಲ್ಲುವ ವಿಶ್ವಾಸವಿದೆ ಎಂದು ಸ್ಪಷ್ಟಪಡಿಸಿದರು.

ಕರ್ನಾಟಕ ಅಭಿವೃದ್ಧಿಗೆ ಇಚ್ಚಾಶಕ್ತಿಯಿಲ್ಲ ಅವಶ್ಯಕತೆಗಳಿಗೆ ತಕ್ಕಂತೆ ಎಲ್ಲ ಶಾಸಕರಿಗೆ ಅನುದಾನ ಕೊಡುವಲ್ಲಿ ತಾರತಮ್ಯ ಧೋರಣೆ ತಾಳಿದೆ ಅಲ್ಲದೆ ಡೀಜಲ್, ಪೆಟ್ರೋಲ, ಗ್ಯಾಸ್, ಅಡುಗೆ ಎಣ್ಣೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ನೀತಿಯ ಬಗ್ಗೆ ಪ್ರಶ್ನೆ ಮಾಡಿದರೆ ಬೇಜವಾಬ್ದಾರಿ ಉಢಾಫೆ ಉತ್ತರ ನೀಡುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವಕಾಶವಿಲ್ಲ ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟದಿಂದ ಪುನಃ ಪುನಃ ಛೀಮಾರಿ ಹಾಕಿಸಿಕೊಳ್ಳುತ್ತಿದೆ ಅಲ್ಲದೆ 7 ವರ್ಷಗಳಿಂದ ಆಡಳಿತ ನಡೆಸುಸುತ್ತಿರುವ ಬಿಜೆಪಿ ಸರಕಾರ ಪ್ರಗತಿಪರ ವಿಧೇಯಕ ಮಂಡನೆ ಮಾಡಿಲ್ಲ ಆದರೆ ಕಳೆದ ಮನಮೋಹನಸಿಂಗ ಆಡಳಿತದಲ್ಲಿ ಫುಟ್ ಸೆಕ್ಯೂರಿಟಿ ಆಕ್ಟ್ ವಿಧೇಯಕ ಮಂಡನೆ ಮಾಡಿದ್ದು ಎಲ್ಲ ರಾಜ್ಯಗಳು ಅಳವಡಿಸಿಕೊಂಡಿವೆ ಈ ಎಲ್ಲ ವ್ಯವಸ್ಥೆಗಳನ್ನು ನೋಡಿ ಎಂದರು.

- Advertisement -

ವಿಜಯಪುರ ಜಿಲ್ಲೆ ಸಂಪೂರ್ಣ ನೀರಾವರಿಯಾಗಿದೆ ಅಲ್ಲದೆ ಶೇ. 80 ರಷ್ಟು ಈ ಕ್ಷೇತ್ರವು ಕೂಡ ನೀರಾವರಿಯಾಗಿದೆ ಎಂದರೆ ಅದು ಕಾಂಗ್ರೆಸ್ ಪಕ್ಷದ ಕೊಡುಗೆಯಾಗಿದೆ. ಕಳೆದ ವರ್ಷಗಳಿಂದ ಆವರಿಸಿದ ಕೋವಿಡ್ ನಿಂದ ಜನರು ಸಂಕಷ್ಟದಲ್ಲಿದ್ದಾರೆ ಆದರೆ ಬಿಜೆಪಿ ಸರಕಾರಕ್ಕೆ ಜನರ ಕಾಳಜಿ ಇಲ್ಲ ಸಾಮಾನ್ಯ ಸಂದರ್ಭದಲ್ಲಿ ಯಾರು ಬೇಕಾದರು ಅಡಳಿತ ನಡೆಸಬಹುದು ಈ ಸಂದರ್ಭದಲ್ಲಿ ವಿರೋಧ ಪಕ್ಷದಲ್ಲಿದ್ದರೂ ಕೂಡ ವಿಶೇಷ ಕಾಳಜಿ ವಹಿಸಿ ಜವಾಬ್ದಾರಿಯಿಂದ ಆರೋಗ್ಯಹಸ್ತ, ಸಹಾಯಹಸ್ತ ನೀಡಿದೆ ಎಂದು ತಿಳಿಸಿದರು.

ಮಾಜಿ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ ಮಾತನಾಡಿ,ಎಲ್ಲಿಯವರೆಗೆ ಸಮಾನತೆ ಬರುವುದಿಲ್ಲವೋ ಅಲ್ಲಿಯವರೆಗೆ ಅನ್ನಭಾಗ್ಯ ನಿಲ್ಲದು. ಈ ಯೋಜನೆಯಿಂದ ಕೋವಿಡ್ ಸಂದರ್ಭದಲ್ಲಿ ಬಡಜನತೆಗೆ ಆಸರೆಯಾಗಿದೆ ನರೇಗಾ ಯೋಜನೆಯಿಂದ ದುಡಿಯುವ ಕೈಗಳಿಗೆ ಕೆಲಸ ನೀಡಿದೆ. ಅನ್ನಭಾಗ್ಯ ಯೋಜನೆಯಿಂದ ಹಸಿದ ಹೊಟ್ಟೆ ತುಂಬಿಸಿದೆ ಈಗೀನ ಬಿಜೆಪಿ ಸರಕಾರ ಅವುಗಳನ್ನು ಬಂದ್ ಮಾಡುವ ಹುನ್ನಾರ ನಡೆಸಿದೆ ಅದನ್ನೆಲ್ಲ ಮನಗಂಡ ಜನತೆ ಈ ಉಪಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ 25 ಸಾವಿರ ಮತಗಳ ಅಂತರದಲ್ಲಿ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕೊಳ್ಳೆಗಾಲ ಮಾಜಿ ಶಾಸಕ ಬಾಲರಾಜು, ಮಾಜಿ ಶಾಸಕ ಶರಣಪ್ಪ ಸುಣಗಾರ, ಹಮೀದಹ್ಮದ ಮುಶ್ರಪ್, ಜಿಪಂ ಮಾಜಿ ಅಧ್ಯಕ್ಷ ಸುಜಾತಾ ಕಳ್ಳಿಮನಿ, ಪ್ರಕಾಶ ಪಾಟೀಲ, ಜಿಲ್ಲಾಧ್ಯಕ್ಷ ರಾಜು ಆಲಗೂರ, ಬ್ಲಾಕ್ ಸಮಿತಿ ಅಧ್ಯಕ್ಷ ವಿಠ್ಟಲ ಕೊಳ್ಳೂರ, ಯೋಗಪ್ಪಗೌಡ ಪಾಟೀಲ, ಪಕ್ಷದ ವಕ್ತಾರರಾದ ಮಲ್ಲು ಸಾವಳಸಂಗ, ರಾಜು ಕೂಚಬಾಳ, ಎಸ್ಸಿ, ಎಸ್ಟಿ ಘಟಕದ ಅಧ್ಯಕ್ಷ ಪರಶುರಾಮ ಕಾಂಬಳೆ, ಕುಮಾರ ಗೊಂದಳಿ, ಮಡಿವಾಳ ತಳವಾರ, ಇರ್ಫಾನ ಮುಲ್ಲಾ ಸೇರಿದಂತೆ ಅನೇಕರಿದ್ದರು.


ವರದಿ: ಪಂಡಿತ್ ಯಂಪೂರೆ, ಸಿಂದಗಿ

- Advertisement -

LEAVE A REPLY

Please enter your comment!
Please enter your name here

- Advertisement -

Latest News

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...
- Advertisement -

More Articles Like This

- Advertisement -
close
error: Content is protected !!