ಬಿಜೆಪಿಯದು ಮುಗಿದ ಅಧ್ಯಾಯ – ಖಂಡ್ರೆ

Must Read

ಬೀದರ – ಅಧಿಕಾರ ದಾಹಕ್ಕಾಗಿ ಬಿಜೆಪಿಯವರು ಏನು ಮಾಡಲೂ ಹೇಸುವುದಿಲ್ಲ‌ ಈ ಹಿಂದೆ ಕೂಡ ೧೭ ಶಾಸಕರನ್ನು ಖರೀದಿ ಮಾಡಿದ್ದನ್ನು ನಾವು ನೋಡಿದ್ದೇವೆ ಎಂದು ಸಚಿವ ಖಂಡ್ರೆ ಹೇಳಿದರು.

ನಗರದಲ್ಲಿ ಪತ್ರಕರ್ತರೊಡನೆ ಮಾತನಾಡಿದ ಅವರು, ಉಪ ಚುನಾವಣೆಯಲ್ಲಿ ನಾವು ಮೂರು ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಬಿಪಿಎಲ್ ಕಾರ್ಡ್ ರದ್ದತಿ ಬಗ್ಗೆ ಪ್ರಶ್ನಿಸಿದಾಗ, ಸಾಹುಕಾರರು, ಸರ್ಕಾರಿ ನೌಕರರು, ಟ್ಯಾಕ್ಸ್ ಕಟ್ಟುವವರು ಬಿಪಿಎಲ್ ಕಾರ್ಡ್ ಪಡೆದುಕೊಂಡಿದ್ದಾರೆ ಅಂಥ ಅನರ್ಹ ಕಾರ್ಡುಗಳನ್ನು ರದ್ದುಗೊಳಿಸಲಾಗುವುದು ಎಂದು ಖಂಡ್ರೆ ಹೇಳಿದರು.
ವಕ್ಫ್ ಬೋರ್ಡ್ ವಿರುದ್ಧ ಬಿಜೆಪಿ ಪಾದಯಾತ್ರೆ ಬಗ್ಗೆ ಖಂಡ್ರೆ ಪ್ರತಿಕ್ರಿಯೆ ನೀಡಿದರು.

ವಕ್ಫ್ ವಿವಾದ ಹುಟ್ಟು ಹಾಕಿದವರೇ ಬಿಜೆಪಿಯವರು ಅದರ ಪಶ್ಚಾತ್ತಾಪಕ್ಕಾಗಿ ಈಗ ಪಾದಯಾತ್ರೆಗೆ ಮುಂದಾಗಿದ್ದಾರೆ.ಅವರ ಅವಧಿಯಲ್ಲಿಯೇ ರೈತರಿಗೆ ನೋಟೀಸು ಕೊಟ್ಟಿದ್ದಾರೆ. ಈ ವಿಚಾರದಲ್ಲಿ ಬಿಜೆಪಿಯವರ ಮನೆಯೇ ನೂರು ಬಾಗಿಲಾಗಿದೆ ಅವರ ಬಗ್ಗೆ ಮಾತನಾಡೋದು ಬೇಡ ಎಂದು ಸಚಿವ ಖಂಡ್ರೆ ಹೇಳಿದರು

ವರದಿ : ನಂದಕುಮಾರ ಕರಂಜೆ, ಬೀದರ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group