ಬಿಜೆಪಿ ಮಂಡಲ ಕಾರ್ಯಕಾರಿಣಿ ಸಭೆ

Must Read

ಪ್ರವಾಹದಿಂದ ಹಾನಿಗೊಳಗಾದ ಮನೆ ಹಾಗೂ ಬೆಳೆ ಹಾನಿಗೆ ಕೂಡಲೇ ಪರಿಹಾರ ಕಲ್ಪಿಸಿಕೊಡಿ : ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ

ಗೋಕಾಕ: ಕಳೆದ ಜುಲೈ ತಿಂಗಳಲ್ಲಿ ಮಳೆ ಹಾಗೂ ಪ್ರವಾಹದಿಂದಾಗಿ ಹಾನಿಗೊಳಗಾದ ನದಿ ತೀರದ ಗ್ರಾಮಗಳ ಮನೆ ಹಾಗೂ ಬೆಳೆಗಳ ಸಮೀಕ್ಷೆಯನ್ನು ಕೂಡಲೇ ಪೂರ್ಣಗೊಳಿಸಿ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ...

ನದಿ ಸ್ವಚ್ಛತೆಗೆ ಚಾಲನೆ ನೀಡಿದ ಈರಣ್ಣ ಕಡಾಡಿ

ಗೋಕಾಕ: ಪ್ರಕೃತಿ ಉಚಿತವಾಗಿ ಕೊಟ್ಟಿರುವ ನೀರನ್ನು, ಗಿಡ ಮರಗಳು ಉಚಿತವಾಗಿ ಕೊಟ್ಟಿರುವ ಆಮ್ಲಜನಕವನ್ನು ನಾಶ ಮಾಡುವ ಮೂಲಕ ಸ್ವಯಂಕೃತ ಅಪರಾಧಗೈದ ನಾವೆಲ್ಲ ನದಿ ಸ್ವಚ್ಛತೆ ಮಾಡುವ...

ಮುಷ್ಕರ ಮತ್ತು ಆರ್ಥಿಕ ಪರಿಸ್ಥಿತಿ

ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಪ್ರಚಲಿತದಲ್ಲಿರುವ ಒಂದು ವಿದ್ಯಮಾನಗಳಲ್ಲಿ ಮುಷ್ಕರ ಕೂಡ ಒಂದು. ಬಂದ್ ಬಂದ್ ಬಂದ್.ಏನಿದು?ಏಕೆ ಮಾಡಬೇಕು? ಇದರಿಂದ ಆಗುವ ಬದಲಾವಣೆಗಳೇನು? ಯಾರಿಗೆ ಲಾಭ?...

ಮೂಡಲಗಿ – ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಅರಭಾವಿ ಮಂಡಲ ಕಾರ್ಯಕಾರಿಣಿ ಸಭೆಯು ಮೂಡಲಗಿಯಲ್ಲಿ ಮಂಡಲ ಯುವ ಮೋರ್ಚಾ ಅಧ್ಯಕ್ಷ ಪ್ರಮೋದ ನುಗ್ಗಾನಟ್ಟಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು.

ಸಭೆಯಲ್ಲಿ ಯುವಮೋರ್ಚಾ ರಾಜ್ಯ ಕಾರ್ಯದರ್ಶಿ ಈರಣ್ಣ ಅಂಗಡಿ ಮಾತನಾಡಿ, ಪಕ್ಷದ ಸಂಘಟನಾತ್ಮಕ ಚರ್ಚೆ ಮಾಡುತ್ತಾ, 75 ನೇ ಸ್ವಾತಂತ್ರ್ಯ ಮಹೋತ್ಸವದ ಅಮೃತ ಗಳಿಗೆಯಲ್ಲಿ ನಾವು ನೀವು ಪದಾಧಿಕಾರಿಗಳಾಗಿ ಕಾರ್ಯ ನಿರ್ವಹಿಸುತ್ತಿರುವದು ನಮ್ಮ ಸೌಭಾಗ್ಯ ಎಂದು ಹೇಳಿದರು.

- Advertisement -

ರಾಜ್ಯ ಯುವಮೋರ್ಚಾ ಉಪಾಧ್ಯಕ್ಷ ರಾಜಕುಮಾರ್ ಸಗಾಯಿ ಮಾತನಾಡಿ, ಅರಬಾಂವಿ ಮಂಡಲ ಯುವಮೋರ್ಚಾ ಪದಾಧಿಕಾರಿಗಳ ಕಾರ್ಯ ಶ್ಲಾಘನೀಯವಾಗಿದೆ ಎಂದು ಹೇಳಿದರು. ಬೆಳಗಾವಿ ಜಿಲ್ಲಾ ಗ್ರಾಮಾಂತರ ಯುವ ಮೋರ್ಚಾ ಅಧ್ಯಕ್ಷರು ಬಸವರಾಜ ನೇಸರಗಿ ಮಾತನಾಡಿ, ಪ್ರತಿಯೊಬ್ಬ ಪದಾಧಿಕಾರಿಗಳು ನಮ್ಮ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಯೋಜನೆಗಳು ಜನರಿಗೆ ಮುಟ್ಟುವಂತೆ ನಾವು ಕೆಲಸ ಮಾಡಬೇಕು ಎಂದರು.

ಅರಬಾಂವಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ, ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಸಿದ್ದಣ್ಣ ದುರದುಂಡಿ, ಕೇದಾರಿ ಭಸ್ಮೆ, ಜಿಲ್ಲಾ ಉಪಾಧ್ಯಕ್ಷ ದುಂಡಪ್ಪ ನಂದಗಾವಿ, ಜಿಲ್ಲಾ ಕಾರ್ಯದರ್ಶಿ ಪ್ರವೀಣ್ ಕೊಪ್ಪದ, ಗುರು ಹಿರೇಮಠ, ಮದನ್ ದಾನನ್ನವರ, ಆನಂದ ಮೂಡಲಗಿ, ಬಸವರಾಜ ಕೋಣಿ, ಪ್ರಭು ಹಡಪದ, ಯುವಮೋರ್ಚಾ ಪದಾಧಿಕಾರಿಗಳು ಕಾರ್ಯಕಾರಿಣಿಸದಸ್ಯರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ರಾಜ್ಯ ಪದಾಧಿಕಾರಿಗಳಾಗಿ ಒಂದು ವರ್ಷ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ ಈರಣ್ಣ ಅಂಗಡಿ, ರಾಜಕುಮಾರ ಸಗಾಯಿ ಹಾಗೂ ಬಸವರಾಜ ನೇಸರಗಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಇದೆ ಸಂದರ್ಭದಲ್ಲಿ ಸಾಮೂಹಿಕ ರಕ್ಷಾಬಂಧನ ಕಾರ್ಯಕ್ರಮ ಆಚರಿಸಲಾಯಿತು.

- Advertisement -
- Advertisement -

Latest News

ಪ್ರವಾಹದಿಂದ ಹಾನಿಗೊಳಗಾದ ಮನೆ ಹಾಗೂ ಬೆಳೆ ಹಾನಿಗೆ ಕೂಡಲೇ ಪರಿಹಾರ ಕಲ್ಪಿಸಿಕೊಡಿ : ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ

ಗೋಕಾಕ: ಕಳೆದ ಜುಲೈ ತಿಂಗಳಲ್ಲಿ ಮಳೆ ಹಾಗೂ ಪ್ರವಾಹದಿಂದಾಗಿ ಹಾನಿಗೊಳಗಾದ ನದಿ ತೀರದ ಗ್ರಾಮಗಳ ಮನೆ ಹಾಗೂ ಬೆಳೆಗಳ ಸಮೀಕ್ಷೆಯನ್ನು ಕೂಡಲೇ ಪೂರ್ಣಗೊಳಿಸಿ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ...
- Advertisement -

More Articles Like This

- Advertisement -
close
error: Content is protected !!