spot_img
spot_img

ಬಿಜೆಪಿ ಸಂಸದರು ಕೇಂದ್ರದ ಗುಲಾಮರಂತೆ ವರ್ತನೆ ಮಾಡುತ್ತಿದ್ದಾರೆ – ಈಶ್ವರ್ ಖಂಡ್ರೆ

Must Read

spot_img

ಬೀದರ – ಬಿಜೆಪಿಯ ಸಂಸದರು ಹಾಗೂ ನಾಯಕರು ಕೇಂದ್ರದ ಗುಲಾಮರಂತೆ ವರ್ತನೆ ಮಾಡುತ್ತಿದ್ದಾರೆ ಎಂದು ಬೀದರ್ ನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಪರಿಷತ್ ಚುನಾವಣೆಯ ಪ್ರಚಾರ ಸಭೆಯಲ್ಲಿ ಸಂಸದರು ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಕೇಂದ್ರ ಸರ್ಕಾರ ರಾಜ್ಯದ ಮೇಲೆ ಪ್ರಹಾರ ಮೇಲೆ ಪ್ರಹಾರ ಮಾಡುತ್ತಿದ್ದು ಕರ್ನಾಟಕಕ್ಕೆ ಬಿಜೆಪಿಯವರು ಘೋರ ಅನ್ಯಾಯ ಮಾಡುತ್ತಿದ್ದಾರೆ… ಸಂಸದರು ಮತ್ತು ನಾಯಕರು ‌ಲೋಕಸಭೆಯಲ್ಲಿ ಆಗಲಿ ಪ್ರಧಾನಿ ಮುಂದೆ ಆಗಲಿ ರಾಜ್ಯದ ಹಕ್ಕು ಕೇಳುವ ಧೈರ್ಯ ಮಾಡದೆ ಅಂಜುಬುರಕರಾಗಿರುವ ಕಾರಣ ಇಂದು ರಾಜ್ಯ ಬಳಲುತ್ತಿದೆ ಎಂದು ಕಿಡಿಕಾರಿದರು.

ಕೇಂದ್ರ ಸರ್ಕಾರ ಯಾವ ರೀತಿ ರಾಜ್ಯವನ್ನು ಕಡೆಗಣಿಸಲಾಗುತ್ತಿದೆಯೋ ಅದೇ ರೀತಿ ರಾಜ್ಯ ಸರ್ಕಾರ ಕಲ್ಯಾಣ ಕರ್ನಾಟಕವನ್ನು ಕಡೆಗಣಿಸುತ್ತಿದ್ದು ಕಲ್ಯಾಣ ಕರ್ನಾಟಕದ ಮೇಲೆ ಬಿಜೆಪಿ ಸರ್ಕಾರ ಘೋರ ಅನ್ಯಾಯ ಮಾಡಿದೆ ಎಂದು ಖಂಡ್ರೆ ಆರೋಪಿಸಿದರು.

ಇನ್ನೂ ಕಲ್ಯಾಣ ಕರ್ನಾಟಕ ಮಂಡಳಿಯೇ ನಿರ್ಮಾಣ ಮಾಡಿಲ್ಲ ಜೊತೆಗೆ ಒಂದೂ ಸಭೆ ಮಾಡಿಲ್ಲ ಹೀಗಾಗೀ ಈ ಪರಿಷತ್ ಚುನಾವಣೆಯಿಂದ ಒಂದು ಸಂದೇಶ ಹೋಗಬೇಕಾಗಿದ್ದು ಜಿಲ್ಲೆಯ ಎಲ್ಲಾ ಕಡೆ ಕಾಂಗ್ರೆಸ್ ಅಲೆ ಇದೆ. ಕಾಂಗ್ರೆಸ್ ಅಭ್ಯರ್ಥಿ ಭೀಮ್ ರಾವ್ ಬಿ ಪಾಟೀಲ್ ಸಮರ್ಥ ಅಭ್ಯರ್ಥಿಯಾಗಿದ್ದು ಹೆಚ್ಚಿನ ಮತಗಳಿಂದ ಗೆಲ್ಲುತ್ತಾರೆ ಎಂಬ ವಿಶ್ವಾಸವಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಪ್ರಚಾರ ಸಭೆಯಲ್ಲಿ ಹೇಳಿದರು.

ಬೀದರ್ ನ ಚಿದ್ರಿ ಬಳಿ ನಡೆದ ವಿಧಾನ ಪರಿಷತ್ ಚುನಾವಣೆಯ ಪ್ರಚಾರ ಸಭೆಯಲ್ಲಿ‌‌ ಈಶ್ವರ್ ಖಂಡ್ರೆ‌‌ ಕಾಂಗ್ರೆಸ್ ಅಭ್ಯರ್ಥಿ ಭೀಮ್ ರಾವ್ ಪಾಟೀಲ್ ಬಿ ಪರ ಮತಯಾಚನೆ ಮಾಡುತ್ತಿದ್ದರೆ ಇತ್ತ ಈ ವೇಳೆ ಸಂಪೂರ್ಣವಾಗಿ ಕೋವಿಡ್ ನಿಯಮಗಳ ಮಹಾ ಉಲ್ಲಂಘನೆ ಮಾಡಲಾಯಿತು.


ವರದಿ: ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ, ಬೀದರ

- Advertisement -
- Advertisement -

Latest News

ವಿದ್ಯುತ್ ಕಳ್ಳತನ ಮಹಾಪರಾಧ: ಎಇಇ ಧರೆಪ್ಪಗೋಳ

ಸಿಂದಗಿ: ವಿದ್ಯುತ್ ಕಳ್ಳತನ ಮಹಾಪರಾಧ, ಕಳ್ಳತನ ಮಾಡಿದ ಗ್ರಾಹಕರಿಗೆ ಜೈಲುವಾಸ ಮತ್ತು ದಂಡ ಕಟ್ಟಿಟ್ಟಬುತ್ತಿ ಎಂದು ಸಿಂದಗಿ ಸಹಾಯಕ ಕಾರ್ಯನಿರ್ವಾಹಕ ವಿಶಾಲ್ ಧರೆಪ್ಪಗೋಳ ಹೇಳಿದರು. ತಾಲೂಕಿನ ಮೋರಟಗಿ...
- Advertisement -

More Articles Like This

- Advertisement -
close
error: Content is protected !!