ಪಹಲ್ಗಾಮ್ ದಾಳಿ ; ಬಿಜೆಪಿ ಸಿಂದಗಿ ಮಂಡಲ ವತಿಯಿಂದ ಪ್ರತಿಭಟನೆ

Must Read

ಸಿಂದಗಿ; ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ನಡೆಸಿರುವ ದಾಳಿಯನ್ನು ಖಂಡಿಸಿ ಭಾರತೀಯ ಜನತಾ ಪಾರ್ಟೀ ಯುವ ಮೋರ್ಚಾ ಸಿಂದಗಿ ಮಂಡಲ ವತಿಯಿಂದ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪುರ ಮಾತನಾಡಿ, ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಅಮಾಯಕ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ನಡೆಸಿರುವ ದಾಳಿ ಮನುಕುಲವನ್ನೇ ಬೆಚ್ಚಿ ಬೀಳಿಸುವಂತದ್ದು ಶೀಘ್ರವೇ ಈ ಹೇಯ ಕೃತ್ಯದ ಹಿಂದಿರುವ ಪ್ರತಿಯೊಬ್ಬ ಉಗ್ರನನ್ನೂ ಹುಡುಕಿ ಮಟ್ಟ ಹಾಕುವಲ್ಲಿ ನಮ್ಮ ಸೇನಾ ಪಡೆಗಳು ಯಶಸ್ವಿಯಾಗಲಿ ಎಂದರು.

ಸಿಂದಗಿ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಪಕ್ಷದ ಮುಖಂಡ ಶ್ರೀಶೈಲಗೌಡ ಬಿರಾದಾರ (ಮಾಗಣಗೇರಾ) ಅವರು ಮಾತನಾಡಿದರು.

ನಂತರ ಭೀಕರ ಹತ್ಯಗೊಳಗಾದ ಹಿಂದುಗಳ ಆತ್ಮಕ್ಕೆ ಚಿರ ಶಾಂತಿ ನೀಡಲೆಮದು, ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಆ ಭಗವಂತ ಕರುಣಿಸಲೆಂದು ಪ್ರಾರ್ಥಿಸಿ ಭಾವಪೂರ್ಣ ಶೃದ್ಧಾಂಜಲಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಂಡಲ ಅಧ್ಯಕ ಸಂತೋಷಗೌಡ ಪಾಟೀಲ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶೀ ಎಸ್, ಆರ್, ಪಾಟೀಲ, ಚೇತನ ಗುತ್ತೇದಾರ, ಶಿವಾನಂದ ಹಳೆಮನಿ, ಮಾಜಿ ತಾ, ಪಂ, ಸದಸ್ಯ ಶ್ರೀಶೈಲ ಚಳ್ಳಗಿ, ಬಿ, ಎಚ್ ಬಿರಾದಾರ, ಯುವ ಮೋರ್ಚಾ ಅಧ್ಯಕ್ಷ ಅಶೋಕ ನಾರಾಯಣಪುರ, ಎಸ್‌ಟಿ ಮೋರ್ಚಾ ಅಧ್ಯಕ್ಷ ಪ್ರಶಾಂತ ಕದ್ದರಗಿ, ಪಕ್ಷದ ಹಿರಿಯರಾದ ಚಂದ್ರಶೇಖರ ಅಮಲಿಯಾಳ, ಮಡಿವಾಳಪ್ಪಗೌಡ ಬಿರಾದಾರ, ಹಾಗೂ ನಮ್ಮ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು, ಅನೇಕರು ಸೇರಿದಂತೆ ಉಪಸ್ಥಿತರಿದ್ದರು

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group