ಕರ್ನಾಟಕ ಸರ್ಕಾರದ, ಕರ್ನಾಟಕ ಬಯಲಾಟ ಅಕಾಡೆಮಿ, ಬಾಗಲಕೋಟೆ, ಕರ್ನಾಟಕ ವಿದ್ಯಾವರ್ಧಕ ಸಂಘ, ಧಾರವಾಡ ಸಂಯುಕ್ತ ಆಶ್ರಯದಲ್ಲಿ ಮೂರು ದಿನಗಳ ವಿಚಾರ ಸಂಕಿರಣ ಹಾಗೂ ಬಯಲಾಟ ಪ್ರದರ್ಶನ ಕಾರ್ಯಕ್ರಮದಲ್ಲಿ ಅಕಾಡೆಮಿಯ ಅಧ್ಯಕ್ಷರಾದ ಡಾ. ಕೆ.ಆರ್. ದುರ್ಗಾದಾಸ್ ಅವರಿಗೆ ಕೇಂದ್ರ ಬಸವ ಸಮಿತಿ ಪ್ರಕಟಿಸಿರುವ ಮಹಾನ್ ದಾರ್ಶನಿಕ ಬಸವಣ್ಣ ಗ್ರಂಥವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲಾ ಮಾಜಿ ಅಧ್ಯಕ್ಷರು, ಕೇಂದ್ರ ಬಸವ ಸಮಿತಿಯ ಕಾರ್ಯಕಾರಿಣಿ ಸಮಿತಿಯ ಹಿರಿಯ ಸದಸ್ಯರಾದ ಮೋಹನ ಬಸನಗೌಡ ಪಾಟೀಲ ರವರು ಅರ್ಪಿಸಿ ಗೌರವಿಸಿದರು.
ಕರ್ನಾಟಕ ಬಯಲಾಟ ಅಕಾಡೆಮಿಯ ಗಣಕಯಂತ್ರ ನಿರ್ವಾಹಕರಾದ ಮಂಜುನಾಥ ಹಡಪದ,ಬಯಲಾಟದ ಬಾಲ ಕಲಾವಿದರು ಉಪಸ್ಥಿತರಿದ್ದರು.