ಭಗಳಾಂಬಾದೇವಿ ದೇವಸ್ಥಾನದಲ್ಲಿ ಮಹಾನ್ ದಾರ್ಶನಿಕ ಬಸವಣ್ಣ ಗ್ರಂಥ ಲೋಕಾರ್ಪಣೆ

Must Read

ಬೈಲಹೊಂಗಲ-ಕೇಂದ್ರ ಬಸವ ಸಮಿತಿ ಪ್ರಕಟಿಸಿರುವ ಮಹಾನ್ ದಾರ್ಶನಿಕ ಬಸವಣ್ಣ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮ ಬೈಲಹೊಂಗಲ ಪಟ್ಟಣದ ಹೊಸೂರು ರಸ್ತೆಯಲ್ಲಿನ ಶ್ರೀ ಭಗಳಾಂಬಾದೇವಿ ದೇವಸ್ಥಾನದ ಆವರಣದಲ್ಲಿ ನಡೆಯಿತು.

ಗ್ರಂಥ ಲೋಕಾರ್ಪಣೆ ಗೊಳಿಸಿದ ಶ್ರೀ ಭಗಳಾಂಬಾದೇವಿ ದೇವಸ್ಥಾನದ ಧರ್ಮಾಧಿಕಾರಿ ಪೂಜ್ಯಶ್ರೀ ಡಾ. ವೀರಯ್ಯಸ್ವಾಮಿಗಳು ಮಾತನಾಡಿ ಕೇಂದ್ರ ಬಸವ ಸಮಿತಿ ಪ್ರಕಟಿಸಿರುವ *ಮಹಾನ್ ದಾರ್ಶನಿಕ ಬಸವಣ್ಣ* ಗ್ರಂಥ ಬಸವಣ್ಣನವರ ಜನನ, ಕಪ್ಪಡಿ ಸಂಗಮದಲ್ಲಿ ಬಸವಣ್ಣನವರ ವಿದ್ಯಾಭ್ಯಾಸ, ಕಾಯಕ ಜೀವನ, ಕಲ್ಯಾಣದಲ್ಲಿ ಬಸವಣ್ಣನವರ ಸಾಧನೆಗಳು, ಬಸವ ಮಹಾಮನೆ, ಪ್ರಸಾದ- ದಾಸೋಹ, ಅನುಭವ ಮಂಟಪದ ಸ್ಥಾಪನೆ, ಬಸವ ಪೂರ್ವದ ಪರಿಸ್ಥಿತಿ ಹಾಗೂ ನಂತರದ ಸಾಮಾಜಿಕ, ಆರ್ಥಿಕ, ಸಾಹಿತ್ಯಕ, ಶೈಕ್ಷಣಿಕ ಪರಿಸ್ಥಿತಿ ವಿವರದೊಡನೆ ಬಸವಣ್ಣನವರ ಘನ ವ್ಯಕ್ತಿತ್ವ ಹಾಗೂ ಜೀವನದ ಘಟನೆಗಳನ್ನು ಒಳಗೊಂಡು ಜನರಿಗೆ ಒಳ್ಳೆಯ ಸಂದೇಶಗಳನ್ನು ತಲುಪಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ಮೂಡಲಗಿ ತಾಲ್ಲೂಕಿನ ಹುಣಶ್ಯಾಳ ಪಿ.ವಾಯ್. ನ ಆರೂಢಜ್ಯೋತಿ ಚೈತನ್ಯ ಶಾಲೆಯ ಶಿಕ್ಷಕರಾದ ಶಿವಾನಂದ ಬಸನಾಯ್ಕ ಪಟ್ಟಿಹಾಳ (ಇಂಚಲ) ಅವರು ಮಾತನಾಡಿ ಸಕಲ ಜೀವಾತ್ಮರಿಗೆ ಲೇಸನೆ ಬಯಸಿದ ಮಹಾನ್ ಮಾನವತಾವಾದಿ, ಕಲ್ಯಾಣಕ್ಕಾಗಿ ಹಗಲಿಗಳು ಶ್ರಮಿಸಿದ ವಿಶ್ವದ ಯುಗಪುರುಷ ಬಸವಣ್ಣನವರು ಮಹಾ ಮಾನವತಾವಾದಿ, ಸ್ವತಂತ್ರ ವಿಚಾರವಾದಿ, ಸಮತಾವಾದಿ, ದಲಿತೋದ್ಧಾರಕ, ಶ್ರೇಷ್ಠ ಅರ್ಥಶಾಸ್ತ್ರಜ್ಞ, ಸ್ತ್ರೀಕುಲೋದ್ಧಾರಕ, ಪ್ರಾಮಾಣಿಕ ಬದುಕಿನ ಪಾರದರ್ಶಕ ವ್ಯಕ್ತಿತ್ವದ ಮಹಾನ್ ದಾರ್ಶನಿಕರಾಗಿದ್ದರು. ಇಂದಿನ ವಿದ್ಯಾರ್ಥಿಗಳಲ್ಲಿ ಇಂತಹ ಕಲ್ಪನೆ ಬಿತ್ತುವುದು ಶಿಕ್ಷಕರಾದ ನಮ್ಮ ಜವಾಬ್ದಾರಿಯಾಗಿದೆ ಎಂದರು.

ಕೇಂದ್ರ ಬಸವ ಸಮಿತಿಯ ಕಾರ್ಯಕಾರಿ ಸಮಿತಿಯ ಹಿರಿಯ ಸದಸ್ಯರು ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ
ಮಾಜಿ ಅಧ್ಯಕ್ಷರಾದ ಮೋಹನ ಬಸನಗೌಡ ಪಾಟೀಲ ಅವರು ಮಾತನಾಡಿ ಬಸವ ಸಮಿತಿಯು ಈಗಾಗಲೇ 50 ಭಾಷೆಗಳಲ್ಲಿ ವಚನಗಳನ್ನು ಭಾಷಾಂತರಿಸಿದೆ. ಶಾಲೆಯಿಂದ ಶಾಲೆಗೆ, ಕಾಲೇಜಿನಿಂದ ಕಾಲೇಜಿಗೆ, ವಚನಕಾರರು ಮತ್ತು ವ್ಯಕ್ತಿತ್ವ ಕಾರ್ಯಕ್ರಮವನ್ನು ಹಮ್ಮಿಕೊಂಡು ಲಕ್ಷಾಂತರ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನವಾಗಿದೆ ಎಂದು ಹೇಳಿದರು.

ಬಸವ ಅಭಿಮಾನಿ ವಿನೋದ ತೋಡಕರ ಸ್ವಾಗತಿಸಿದರು, ಕುಮಾರಿ ಗಾಯತ್ರಿ ಬಡಕನ್ನವರ ಪ್ರಾರ್ಥನೆಯೊಂದಿಗೆ ನಿರೂಪಿಸಿದರು, ಅಣ್ಣಪ್ಪ ಬಂಡಿವಡ್ಡರ ವಂದಿಸಿದರು. ಸುರೇಶ ಬಡಕನ್ನವರ, ಸುಲೋಚನಾ ಬಡಕನ್ನವರ,ಹನುಮಂತ ಬಂಡಿವಡ್ಡರ ಮತ್ತಿತರರು ಉಪಸ್ಥಿತರಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group