ಪ್ರಶಸ್ತಿಗೆ ಕೃತಿಗಳ ಆಹ್ವಾನ

Must Read

ಬೆಳಗಾವಿ : ಇಲ್ಲಿಯ ಬಿ.ಎ.ಸನದಿ ಸಾಂಸ್ಕೃತಿಕ ಪ್ರತಿಷ್ಠಾನವು ಉದಯೋನ್ಮುಖ ಬರಹಗಾರರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿ ವರ್ಷ ನೀಡುವ ರಾಜ್ಯಮಟ್ಟದ ಜನ್ನಾ ಸನದಿ ಸಾಹಿತ್ಯ ಪ್ರಶಸ್ತಿಗೆ 2024 ರಲ್ಲಿ ಪ್ರಕಟವಾದ ಕವನ ಸಂಕಲನಗಳನ್ನು ಆಹ್ವಾನಿಸಿದೆ.

35ವರ್ಷದ ಒಳಗಿನವರು ತಮ್ಮ ವಯಸ್ಸಿನ ದಾಖಲೆಯೊಂದಿಗೆ ಕವನ ಸಂಕಲನದ ಮೂರು ಪ್ರತಿಗಳನ್ನು ಸೆಪ್ಟೆಂಬರ್ 30ರೊಳಗೆ  ಬಸವರಾಜ ಗಾರ್ಗಿ “ಹೊಂಗನಸು”, 73 ರಾಣಿ ಚನ್ನಮ್ಮ ಹೌಸಿಂಗ್ ಸೊಸೈಟಿ ಶ್ರೀನಗರ ಬೆಳಗಾವಿ, ಮೊಬೈಲ್ ಸಂಖ್ಯೆ 84535 00025 ಈ ವಿಳಾಸಕ್ಕೆ ಕಳುಹಿಸಬೇಕು.

ಪ್ರಶಸ್ತಿಯು 5000 ರೂಪಾಯಿ ನಗದು, ಪ್ರಶಸ್ತಿ ಪತ್ರ ಹಾಗು ಸ್ಮರಣಿಕೆಯನ್ನು ಒಳಗೊಂಡಿದೆ. ನವೆಂಬರ್ ತಿಂಗಳಲ್ಲಿ ನಡೆಯುವ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ. ರಾಮಕೃಷ್ಣ ಮರಾಠೇ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group