spot_img
spot_img

ರೈತರ ಸ್ವಾವಲಂಬಿ ಬದುಕಿಗೆ ಕೆಎಂಎಫ್ ವರದಾನ – ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

Must Read

ಮೂಡಲಗಿ: ದೇಶದಲ್ಲಿಯೇ ಸಹಕಾರಿ ರಂಗದಲ್ಲಿ ಎರಡನೇಯ ಸ್ಥಾನದಲ್ಲಿರುವ ಕೆಎಂಎಫ್ ರೈತರ ಆರ್ಥಿಕಾಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.

ಪಟ್ಟಣದಲ್ಲಿ ಕಳೆದ ಮಂಗಳವಾರದಂದು ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದಿಂದ 19.50 ಲಕ್ಷ ರೂ.ಗಳ ಚೆಕ್‍ಗಳನ್ನು ಫಲಾನುಭವಿಗಳಿಗೆ ವಿತರಿಸಿ ಮಾತನಾಡಿದ ಅವರು, ಕೆಎಂಎಫ್ ಇನ್ನಷ್ಟು ಎತ್ತರಕ್ಕೆ ಬೆಳೆಸಿ ರೈತರ ಸ್ವಾವಲಂಬಿ ಬದುಕಿಗೆ ಭದ್ರಬುನಾದಿ ಹಾಕುವುದಾಗಿ ತಿಳಿಸಿದರು.

ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹಾಲು ಉತ್ಪಾದಕರ ಸಹಕಾರಿ ಸಂಘಗಳಿಗೆ ವಿವಿಧ ಯೋಜನೆಗಳಡಿ ಒಟ್ಟು 19.50 ಲಕ್ಷ ರೂ.ಗಳ ಚೆಕ್‍ಗಳನ್ನು ವಿತರಿಸಿದರು.

ಶಿಂಧಿಕುರಬೇಟ ಹಾಲು ಉತ್ಪಾದಕರ ಸಹಕಾರಿ ಸಂಘದ ಕಟ್ಟಡಕ್ಕೆ 5 ಲಕ್ಷ ರೂ. ಖಾನಾಪೂರ, ಮುನ್ಯಾಳ, ಬಸವನಗರ ಹುಣಶ್ಯಾಳ ಪಿವಾಯ್ ಸಂಘಗಳ ಕಟ್ಟಡಕ್ಕೆ ತಲಾ 2.50 ಲಕ್ಷ ರೂ. ಮತ್ತು ಶಿವಾಪೂರ(ಹ) ಸಂಘದ ಕಟ್ಟಡಕ್ಕೆ 2 ಲಕ್ಷ ರೂ. ಸೇರಿದಂತೆ ಒಟ್ಟು 14.50 ಲಕ್ಷ ರೂ.ಗಳ ಚೆಕ್‍ಗಳನ್ನು ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ವಿತರಿಸಿದರು.

ಬಸವನಗರ ತೋಟದ ಪದ್ಮಾವತಿ ಸಪ್ತಸಾಗರ, ಖಾನಟ್ಟಿಯ ರಮೇಶ ಬಿ.ಪಾಟೀಲ, ಶಾಂತಿನಗರದ ಅಪ್ಪಯ್ಯ ದೊಡಗೊಂಡಿ, ಸತ್ತೆಪ್ಪ ಬೀರನಗಡ್ಡಿ, ರಡ್ಡೇರಹಟ್ಟಿಯ ಅಪ್ಪಯ್ಯ ಮುರೆನ್ನವರ, ಬೆಟಗೇರಿಯ ಶಿವಾನಂದ ಹಾಲನ್ನವರ ಅವರಿಗೆ ತಲಾ 50 ಸಾವಿರ ರೂ.ಗಳಂತೆ ಒಟ್ಟು 3 ಲಕ್ಷ ರೂ.ಗಳ ರಾಸು ವಿಮೆ ಚೆಕ್‍ಗಳನ್ನು ವಿತರಿಸಿದರು. ಕಲ್ಯಾಣ ಸಂಘದ 2 ಲಕ್ಷ ರೂ. ಸೇರಿದಂತೆ ಒಟ್ಟು 19.50 ಲಕ್ಷ ರೂ.ಗಳ ಚೆಕ್‍ಗಳನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿತರಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಮಲ್ಲು ಪಾಟೀಲ, ಮೂಡಲಗಿ ಉಪಕೇಂದ್ರ ಅಧಿಕಾರಿ ರವಿ ತಳವಾರ, ವಿಸ್ತರಣಾಧಿಕಾರಿ ವಿಠ್ಠಲ ಲೋಕುರಿ, ಸಚೀನ ಪಡದಲ್ಲಿ, ಡಾ. ಪ್ರಕಾಶ ಬೆಳಗಲಿ, ಡಾ. ಕೌಜಲಗಿ, ಸುರೇಶ ಪಾಟೀಲ, ಸೇರಿದಂತೆ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

- Advertisement -
- Advertisement -

Latest News

ಕೌಜಲಗಿ ಹೊಸ ತಾಲೂಕು ರಚನೆಗೆ ಸಂಪೂರ್ಣ ಬೆಂಬಲ- ಶಾಸಕ ಬಾಲಚಂದ್ರ ಜಾರಕಿಹೊಳಿ

ಎಲ್ಲರೂ ಸೇರಿ ಒಗ್ಗಟ್ಟಾಗಿ ಕೌಜಲಗಿಯನ್ನು ತಾಲೂಕು ಕೇಂದ್ರವನ್ನಾಗಿಸಲು ಪ್ರಯತ್ನಿಸೋಣ ಕೌಜಲಗಿ(ತಾ.ಗೋಕಾಕ): ಕೌಜಲಗಿ ಹೊಸ ತಾಲೂಕು ರಚನೆಗೆ ನನ್ನ ಸಂಪೂರ್ಣ ಬೆಂಬಲ ಇದೆ ಎಂದು ಅರಭಾವಿ ಶಾಸಕ, ಕೆಎಮ್‍ಎಫ್...
- Advertisement -

More Articles Like This

- Advertisement -
close
error: Content is protected !!