ಸಾಧಕರಿಗೆ ಮೈಸೂರಿನಲ್ಲಿ ಬ್ರಹ್ಮೀಭೂತ ಶ್ರೀ ವಾಸುದೇವ ಮಹಾರಾಜ್ ಸದ್ಭಾವನಾ ಪ್ರಶಸ್ತಿ ಪ್ರದಾನ

Must Read

ಮೈಸೂರು – ಬ್ರಹ್ಮೀಭೂತ ಶ್ರೀ ವಾಸುದೇವ ಮಹಾರಾಜ್ ರವರ ೮೩ನೇ ಜಯಂತಿ ಅಂಗವಾಗಿ ಮೈಸೂರಿನ ತ್ಯಾಗರಾಜ ರಸ್ತೆಯ ಪತ್ರಕರ್ತರ ಭವನದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ “ಶ್ರೀ ವಾಸುದೇವ ಮಹಾರಾಜ್ ಸದ್ಭಾವನಾ ” ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ ರವರು ಕಾರ್ಯಕ್ರಮ ಉದ್ಘಾಟಿಸಿದರು  ಸಾಂಸ್ಕೃತಿಕ ಚಿಂತಕ ಹಾಗು   ಶ್ರೀವಾಸುದೇವ ಮಹಾರಾಜ್ ಫೌಂಡೇಷನ್ ಅಧ್ಯಕ್ಷ ಡಾ.ಗುರುರಾಜ ಪೋಶೆಟ್ಟಿಹಳ್ಳಿ ರವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್ ಅಧ್ಯಕ್ಷತೆ ವಹಿಸಿದ್ದ ಸಮಾರಂಭದಲ್ಲಿ ಸಾಧಕರನ್ನು ಹಿರಿಯ ಸಮಾಜ ಸೇವಕ  ಡಾ.ಕೆ ರಘುರಾಮ ವಾಜಪೇಯಿ ಸನ್ಮಾನಿಸಿದರು.

ವಿವಿಧ ಕ್ಷೇತ್ರದ ಗಣ್ಯ ಸಾಧಕರಾದ ಸಮಾಜ ಸೇವೆ – ಸಂಘಟನೆಗಾಗಿ ಬೆಂಗಳೂರಿನ ಎಂ.ಬಸವರಾಜು ; ರಂಗಭೂಮಿ – ಡಾ.ಲೀಲಾ ಬಸವರಾಜು ; ರಾಜಕೀಯ – ಸಮಾಜ ಸೇವೆ ಕೆ.ಪಿ.ಯೋಗೇಶ್ ರವರಿಗೆ “ಶ್ರೀ ವಾಸುದೇವ ಮಹಾರಾಜ್ ಸದ್ಭಾವನಾ”ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು ಎಂದು ಆಯೋಜಕರಾದ ವಾಸುದೇವ ಮಹಾರಾಜ್ ಫೌಂಡೇಷನ್ ಸಂಸ್ಥಾಪಕ ಅಧ್ಯಕ್ಷ ಎಂ.ವಿ.ನಾಗೇಂದ್ರ ಬಾಬು ತಿಳಿಸಿದ್ದಾರೆ .

ವಿವರಗಳಿಗೆ : 9035618076

Latest News

ಅನ್ನದಾನೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನ

ಶ್ರೀಶೈಲ ಜಗದ್ಗುರುಗಳು, ನಾಡಿನ ಹರಗುರು ಚರಮೂರ್ತಿಗಳು ಭಕ್ತರು ಭಾಗಿಮೂಡಲಗಿ - ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಶ್ರೀ ಬಸವ ಗೋಪಾಲ ನೀಲಮಾಣಿಕ ಮಠದ ಶ್ರೀ...

More Articles Like This

error: Content is protected !!
Join WhatsApp Group