spot_img
spot_img

‘ನಮ್ಮ ಕ್ಲಿನಿಕ್’ ಬಗ್ಗೆ ಎಲ್ಲರಲ್ಲೂ ಅರಿವು ಮೂಡಿಸಿ – ಶಾಸಕ ಮನಗೂಳಿ

Must Read

spot_img
- Advertisement -

ಸಿಂದಗಿ: ಜೀವನದಲ್ಲಿ ಆಸ್ತಿ, ಸಂಪತ್ತು ಮತ್ತು ಅಧಿಕಾರ ಎಲ್ಲವನ್ನು ಗಳಿಸುವುದು ಬಹಳ ಸುಲಭ. ಆದರೆ ಆರೋಗ್ಯ ನಮಗೆ ಅತ್ಯಮೂಲ್ಯವಾದದ್ದು, ಈ ನಮ್ಮ ಕ್ಲಿನಿಕ್‌ನ ಬಗ್ಗೆ ಜನರಲ್ಲಿ ಎಲ್ಲರೂ ಅರಿವು ಮೂಡಿಸಿ ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.

ಪಟ್ಟಣದ ಬಂದಾಳ ರಸ್ತೆಯಲ್ಲಿ ವಿಜಯಪುರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಪಂಚಾಯತ್ ಮತ್ತು ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಮ್ಮ ಕ್ಲಿನಿಕ್ ಉದ್ಘಾಟನಾ ಸಮಾರಂಭವನ್ನು ಶಾಸಕ ಅಶೋಕ ಮನಗೂಳಿ ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ಮದೀನಾ ನಗರ ಮತ್ತು ಹೆಗ್ಗೆರೇಶ್ವರ ದೇವಸ್ಥಾನದ ಬಳಿ ಸಿಂದಗಿ ನಗರಕ್ಕೆ ಮತ್ತೆರಡು ನಮ್ಮ ಕ್ಲಿನಿಕ್ ಮಂಜೂರಾಗಿದೆ. ಇಲ್ಲಿ ದೊರೆಯುವ ಎಲ್ಲ ಸೌಲಭ್ಯಗಳ ಸದುಪಯೋಗವನ್ನು ಎಲ್ಲ ಸಾರ್ವಜನಿಕರು ಪಡೆದುಕೊಳ್ಳಬೇಕು.ಈ ಭಾಗದ ಜನರ ಆರೋಗ್ಯದ ದೃಷ್ಠಿಯಿಂದ ಈ ಶಾಖೆಯನ್ನು ಪ್ರಾರಂಭ ಮಾಡಲಾಗಿದೆ. ವಿಶೇಷವಾಗಿ ಕೊಳಗೇರಿ ನಿವಾಸಿಗಳಿಗೆ ಪ್ರಯೋಜನವಾಗಬೇಕು. ಎಲ್ಲರೂ ಉತ್ತಮ ಆರೋಗ್ಯವಂತರಾಗಬೇಕು ಎನ್ನುವ ದಿಸೆಯಲ್ಲಿ ರಾಜ್ಯ ಸರಕಾರ ಸಿಂದಗಿ ನಗರಕ್ಕೆ 2 ನಮ್ಮ ಕ್ಲಿನಿಕ್‌ ಮಂಜೂರು ಮಾಡಿದ್ದು ಸಂತಸ ತಂದಿದೆ ಎಂದರು.

ಈ ವೇಳೆ ಜಿಲ್ಲಾ ವೈದ್ಯಾಧಿಕಾರಿ ಡಾ.ಸಂಪತ್ ಕುಮಾರ ಗುಣಾರಿ ಮಾತನಾಡಿದರು. ಕಾರ್ಯಕ್ರಮದಲ್ಲಿ ತಾಲೂಕು ವೈದ್ಯಾಧಿಕಾರಿ ಡಾ.ಎ.ಎ.ಮಾಗಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಹರಿ ಕುಲಕರ್ಣಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಪೂಜಾರಿ, ಆಸ್ಪತ್ರೆಯ ನಾಮ ನಿರ್ದೇಶಿತ ಸದಸ್ಯರಾದ ಶಾಂತೂ ರಾಣಾಗೋಳ, ಸತೀಶ ಕಕ್ಕಸಗೇರಿ, ಸಾಯಬಣ್ಣ ಪುರದಾಳ, ಶಾಂತಗೌಡ ಬಿರಾದಾರ, ವಿಕಾಸ ಕೋತ, ಜಾಕೀರ್ ಸಿಂದಗಿಕರ, ವಿನಯ ಕುಲಕರ್ಣಿ, ಪುರಸಭೆ ಉಪಾಧ್ಯಕ್ಷ ರಾಜಣ್ಣ ನಾರಾಯಣಕರ, ವ್ಯವಸ್ಥಾಪಕ ಮಹಾಲಿಂಗ ಫಕಿರಪೂರ, ಶಾಂತೂ ಕುಂಬಾರ, ಭಾಗಣ್ಣ, ಲತಾ, ಪರಶುರಾಮ ಕೂಚಬಾಳ, ಅಶೋಕ ವಗ್ಗರ, ತಾಲೂಕಾ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಪಿ.ವೈ.ಚೌಡಕಿ, ಆರೋಗ್ಯ ನಿರೀಕ್ಷಣಾಧಿಕಾರಿ ವಿರೇಂದ್ರ ಪವಾಡೆ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿಗಳು, ಸಾರ್ವಜನಿಕರು ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಕವಿರತ್ನ ಕಾಳಿದಾಸ ಪ್ರಶಸ್ತಿ ಪುರಸ್ಕೃತ ಯಲ್ಲಾಲಿಂಗ ವಾಳದಗೆ ಸತ್ಕಾರ

ಮೂಡಲಗಿ: ತಾಲೂಕಿನ ಶಿವಾಪುರ(ಹ) ಗ್ರಾಮದ ಯುವ ಮುಖಂಡ ಮತ್ತು ಸಮಾಜ ಸೇವಕ ಯಲ್ಲಾಲಿಂಗ ವಾಳದ ಗೆ ಕವಿರತ್ನ ಕಾಳಿದಾಸ ಪ್ರಶಸ್ತಿ ಲಭಿಸಿದೆ. ಇತ್ತೀಚೆಗೆ ರಾಮದುರ್ಗ ತಾಲೂಕಿನ ಸುರೇಬಾನ...
- Advertisement -

More Articles Like This

- Advertisement -
close
error: Content is protected !!
Join WhatsApp Group