ಬೈಲಹೊಂಗಲ: 2024-25 ನೇ ಸಾಲಿನ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಬಾಲಕರ 4X400 ಮೀ ರಿಲೇ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಬಾಲಕರ ವಿಭಾಗದಲ್ಲಿ ಮುತ್ತುರಾಜ ಜೋಗಿಗುಡ್ಡ (1500 ಮೀ ಓಟದಲ್ಲಿ ಪ್ರಥಮ), 14 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಶ್ರೇಯಾ ಕುಲಕರ್ಣಿ (80 ಮೀ ಹರ್ಡಲ್ಸ್ ಪ್ರಥಮ) ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅಲ್ಲದೇ ಮಲ್ಲಪ್ಪ ದಳವಾಯಿ( 400 ಮೀ ಓಟದಲ್ಲಿ ತೃತೀಯ ಸ್ಥಾನ )ಕಲ್ಮೇಶ ಗುಡ್ಡದ (1500 ಮೀ ಓಟದಲ್ಲಿ ತೃತೀಯ) ಸ್ಥಾನ ಪಡೆದಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಮುಖ್ಯಶಿಕ್ಷಕರಾದ ಎನ್.ಆರ್.ಠಕ್ಕಾಯಿ, ಶಿಕ್ಷಕರಾದ ಜೆ.ಆರ್.ನರಿ, ಆರ್.ಸಿ.ಸೊರಟೂರ, ಎಚ್.ವಿ.ಪುರಾಣಿಕ, ಎಸ್.ವಿ.ಬಳಿಗಾರ, ಎಂ.ಎನ್.ಕಾಳಿ, ಕೆ.ಐ.ಯರಗಂಬಳಿಮಠ ಹಾಗೂ ಎಸ್.ಡಿ.ಎಂ.ಸಿ ಪದಾಧಿಕಾರಿಗಳು, ಗ್ರಾಮಸ್ಥರು, ಹಳೆಯ ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ದೈಹಿಕ ಶಿಕ್ಷಣ ಶಿಕ್ಷಕರಾದ ಪಿ.ಎಸ್.ಗುರುನಗೌಡರ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದರು.