ಬೂದಿಹಾಳ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

Must Read

ಬೈಲಹೊಂಗಲ: 2022-23 ನೇ ಸಾಲಿನ ಬೈಲಹೊಂಗಲ ತಾಲೂಕಾ ಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.

ಅಭಿಷೇಕ ಫಕ್ಕೀರಪ್ಪ ಗರಗದ (1500 ಮೀ ಓಟ ಪ್ರಥಮ), ಅಭಿಲಾಷ ಗಂಗಪ್ಪ ಹೊಂಗಲ (800ಮೀ ಓಟ ಪ್ರಥಮ), ಬಸವರಾಜ ಮೂಗಪ್ಪ ಹೊಸೂರ (ಉದ್ದ ಜಿಗಿತ ದ್ವಿತೀಯ) ಸ್ಥಾನಗಳನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾಕ್ಷಿ ಚಂದ್ರು ನಾಗಣ್ಣವರ (ಉದ್ದ ಜಿಗಿತ ತೃತೀಯ), ಸಿದ್ದು ಫಕ್ಕೀರಪ್ಪ ಕುರಿ (3000 ಮೀ ಓಟ ತೃತೀಯ) ಸ್ಥಾನ ಪಡೆದಿದ್ದಾರೆ.

ವಿದ್ಯಾರ್ಥಿಗಳ ಈ ಅಭೂತಪೂರ್ವ ಸಾಧನೆಗೆ ಮುಖ್ಯಶಿಕ್ಷಕರಾದ ಎನ್.ಆರ್.ಠಕ್ಕಾಯಿ, ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರವೀಣ ಗುರುನಗೌಡರ, ಶಿಕ್ಷಕರಾದ ಜಗದೀಶ ನರಿ, ಸುನೀಲ ಭಜಂತ್ರಿ, ಶಿವಾನಂದ ಬಳಿಗಾರ, ಶ್ರೀಪಾಲ ಚೌಗಲಾ, ವಿರೇಂದ್ರ ಪಾಟೀಲ ಹಾಗೂ ಎಸ್.ಡಿ.ಎಂ.ಸಿ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group