ತಂತ್ರಜ್ಞಾನ ಬಳಸಿ ಕಲಿಕಾ ವಾತಾವರಣ ನಿರ್ಮಿಸಿ- ವ್ಹಿ.ಸಿ.ಹಿರೇಮಠ

Must Read

ಹೊಸ ಪುಸ್ತಕ ಓದು: ಕನ್ನಡ ಸಾಹಿತ್ಯದಲ್ಲಿ ಅನುಭಾವ

ಕನ್ನಡ ಸಾಹಿತ್ಯದಲ್ಲಿ ಅನುಭಾವ ಪ್ರಧಾನ ಸಂಪಾದಕರು : ಪ್ರೊ. ಬಿ. ಬಿ. ಡೆಂಗನವರ ಪ್ರಕಾಶಕರು : ಬೆಳದಿಂಗಳು ಪ್ರಕಾಶನ, ಬೆಳಗಾವಿ, ೨೦೨೦ ಮೊ: ೯೯೦೨೪೯೫೬೯೫ ‘ಕನ್ನಡದಲ್ಲಿ ಅನುಭಾವ ಸಾಹಿತ್ಯ’ ಇದೊಂದು ಮೌಲಿಕ...

ಸ್ನೇಹಿತರ ದಿನಾಚರಣೆಯ ಶುಭಾಷಯಗಳು

ನಮ್ಮಲ್ಲಿ ಎಷ್ಟೋ ದಿನಾಚರಣೆಗಳಿವೆ. ಇದರಲ್ಲಿ ಸ್ನೇಹಕ್ಕೆ ಕೊಡುವ ಬೆಲೆ ಯಾವುದಕ್ಕೂ ಕೊಡಲಾಗದು ಎನ್ನುತ್ತಾರೆ. ಕಾರಣ ಇಲ್ಲಿ ಸ್ವಾರ್ಥ ಅಹಂಕಾರವಿರದೆ ಶುದ್ದ ಭಾವನೆಗಳ ಸಮ್ಮಿಲನವಿರುತ್ತದೆ. ಬಡವ ಬಡವನನ್ನು...

ಪಿಂಜಾರ ಅಭಿವೃದ್ಧಿ ನಿಗಮ ಸ್ಥಾಪಿಸಲು ಒತ್ತಾಯ

ಸಿಂದಗಿ: ರಾಜ್ಯದಲ್ಲಿ ಪಿಂಜಾರ, ನದಾಫ್ ಸಮುದಾಯಗಳು ಶಿಕ್ಷಣ, ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಹಿಂದುಳಿದಿದ್ದು ಈ ಜನಾಂಗ ಉದ್ದಾರವಾಗಬೇಕಾದರೆ ಪಿಂಜಾರ್ ಅಭಿವೃದ್ಧಿ ನಿಗಮ ಅವಶ್ಯಕತೆ ಇದೆ. ಪ್ರವರ್ಗ...

ಸವದತ್ತಿ– “ ಪ್ರಸ್ತುತ ಸನ್ನಿವೇಶದಲ್ಲಿ ಎಲ್ಲ ಶಿಕ್ಷಕರು ಮಕ್ಕಳಿಗೆ ನೂತನ ತಂತ್ರಜ್ಞಾನವನ್ನು ಬಳಸಿಕೊಂಡು ಬೋಧನಾ ಚಟುವಟಿಕೆಗಳನ್ನು ನಿರ್ಮಿಸಬೇಕು. ಇದರಿಂದ ವಿದ್ಯಾರ್ಥಿಗಳಿಗೆ ಕಲಿಕಾ ವಾತಾವರಣ ಉಳಿಸಿಕೊಂಡು ಬರಲು ಸಾಧ್ಯವಿದೆ. ಘನ ಸರ್ಕಾರ ಎಲ್ಲ ಶಿಕ್ಷಕರಿಗೆ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಬೋಧನಾ ಚಟುವಟಿಕೆಗಳನ್ನು ನಿರ್ವಹಿಸಲು ತರಬೇತಿಯನ್ನು ಆಯೋಜಿಸಿದ್ದು ಇಂದು ಚಚಡಿ ಮತ್ತು ಹಿರೇಬೂದನೂರ ಸಮೂಹ ಸಂಪನ್ಮೂಲ ಕೇಂದ್ರಗಳ ವ್ಯಾಪ್ತಿಯಲ್ಲಿ ಶಿಕ್ಷಕರಿಗೆ ತರಬೇತಿ ಆರಂಭಿಸಿರುವುದು.ಇದರ ಸದುಪಯೋಗ ಎಲ್ಲರೂ ಪಡೆದುಕೊಂಡು ಮುಂದಿನ ದಿನಗಳಲ್ಲಿ ಅದನ್ನು ರಚನಾತ್ಮಕಗೊಳಿಸಿ ಬೋಧನಾ ಚಟುವಟಿಕೆಗಳನ್ನು ನಿರ್ವಹಿಸಿದರೆ ಬೋಧನೆ ಫಲಪ್ರದ ” ಎಂದು ಕ್ಷೇತ್ರ ಸಂಪನ್ಮೂಲ ವ್ಯಕ್ತಿ ವ್ಹಿ.ಸಿ.ಹಿರೇಮಠ ಕರೆ ನೀಡಿದರು.

ಅವರು ಸವದತ್ತಿ ತಾಲೂಕಿನ ಚಚಡಿ ಮತ್ತು ಹಿರೇಬೂದನೂರ ಸಮೂಹ ಸಂಪನ್ಮೂಲ ಕೇಂದ್ರ ವ್ಯಾಪ್ತಿಯ ಶಿಕ್ಷಕ, ಶಿಕ್ಷಕಿಯರಿಗಾಗಿ ತಂತ್ರಜ್ಞಾನ ಬಳಸಿಕೊಂಡು ಬೋಧನಾ ಚಟುವಟಿಕೆ ಹಮ್ಮಿಕೊಳ್ಳುವ ತರಬೇತಿಯನ್ನು ಉದ್ದೇಶಿಸಿ ಗೂಗಲ್ ಮೀಟ್‍ನಲ್ಲಿ ಇಲಾಖೆ ಪರವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿ ಡಿ.ಬಿ.ಎತ್ತಿನಗುಡ್ಡ. ಚಚಡಿ ಸಮೂಹ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿ ರಫೀಕ ಕುಲಗೋಡ. ಡೈಟ್ ಉಪನ್ಯಾಸಕರಾದ ಪ್ರಕಾಶ ಪಾಟೀಲ. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಉಪಾಧ್ಯಕ್ಷರಾದ ಮಲ್ಲಿಕಾರ್ಜುನ ಸಿದ್ದನಗೌಡರ.ಹಿರೇಬೂದನೂರ ಸಮೂಹ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿ ಮೋಹನ ಬಾಳೇಕುಂದರಗಿ 90ಕ್ಕೂ ಹೆಚ್ಚು ಶಿಕ್ಷಕ ಶಿಕ್ಷಕಿಯರು ಗೂಗಲ್ ಮೀಟ್ ತರಬೇತಿಯಲ್ಲಿ ಪಾಲ್ಗೊಂಡಿದ್ದರು.

- Advertisement -

ತರಬೇತಿ ಸಂಪನ್ಮೂಲ ವ್ಯಕ್ತಿಗಳಾದ ಡಿ.ಬಿ.ಎತ್ತಿನಗುಡ್ಡ “ ಇ ಮೇಲ್ ಐಡಿ ಹೇಗೆ ಮಾಡಬೇಕು ಎಂಬುದನ್ನು ತಿಳಿಸುವ ಜೊತೆಗೆ ಬದಲಾಗುತ್ತಿರುವ ತಂತ್ರಜ್ಞಾನದಲ್ಲಿ ವಿಷಯಗಳ ಬೋಧನೆಯ ಮಹತ್ವ” ಕುರಿತಂತೆ ಮಾತನಾಡಿದರು. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಉಪಾಧ್ಯಕ್ಷರಾದ ಮಲ್ಲಿಕಾರ್ಜುನ ಸಿದ್ದನಗೌಡರ ಮಾತನಾಡಿ, “ ಶಿಕ್ಷಕರಿಗೆ ಬದಲಾಗುತ್ತಿರುವ ವಾತಾವರಣದಲ್ಲಿ ತಂತ್ರಜ್ಞಾನ ಬಳಸಿಕೊಂಡು ಬೋಧಿಸಲು ಈ ತರಬೇತಿ ನಿಜಕ್ಕೂ ಪರಿಣಾಮಕಾರಿಯಾಗಿದೆ. ಇಲಾಖೆಯ ಇಂತಹ ಚಟುವಟಿಕೆಗಳನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ಗುಣಾತ್ಮಕ ಶಿಕ್ಷಣಕ್ಕೆ ನಾಂದಿ ಹಾಡೋಣ” ಎಂದು ತಿಳಿಸಿದರು.

ಕಾರ್ಯಕ್ರಮದ ಪ್ರಾರಂಭದಲ್ಲಿ ಕೋವಿಡ್ ಸಂದರ್ಭದಲ್ಲಿ ನಿಧನರಾದ ಶಿಕ್ಷಕ ಶಿಕ್ಷಕಿಯರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಹಿರೇಬೂದನೂರ ಸಮೂಹ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿ ಮೋಹನ ಬಾಳೇಕುಂದರಗಿ.ಕಾರ್ಯಕ್ರಮ ನಿರ್ವಹಿಸಿದರು. ಚಚಡಿ ಸಮೂಹ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿ ರಫೀಕ ಕುಲಗೋಡ ವಂದನಾರ್ಪಣೆ ಸಲ್ಲಿಸಿದರು.

- Advertisement -
- Advertisement -

Latest News

ಹೊಸ ಪುಸ್ತಕ ಓದು: ಕನ್ನಡ ಸಾಹಿತ್ಯದಲ್ಲಿ ಅನುಭಾವ

ಕನ್ನಡ ಸಾಹಿತ್ಯದಲ್ಲಿ ಅನುಭಾವ ಪ್ರಧಾನ ಸಂಪಾದಕರು : ಪ್ರೊ. ಬಿ. ಬಿ. ಡೆಂಗನವರ ಪ್ರಕಾಶಕರು : ಬೆಳದಿಂಗಳು ಪ್ರಕಾಶನ, ಬೆಳಗಾವಿ, ೨೦೨೦ ಮೊ: ೯೯೦೨೪೯೫೬೯೫ ‘ಕನ್ನಡದಲ್ಲಿ ಅನುಭಾವ ಸಾಹಿತ್ಯ’ ಇದೊಂದು ಮೌಲಿಕ...
- Advertisement -

More Articles Like This

- Advertisement -
close
error: Content is protected !!