spot_img
spot_img

ಎರಡು ಕ್ಷೇತ್ರಗಳಿಗೆ ಉಪಚುನಾವಣೆ; ಮೂರು ಪಕ್ಷಗಳಲ್ಲಿ ತುರುಸಿನ ಪೈಪೋಟಿ

Must Read

spot_img
- Advertisement -

ಸಿಂದಗಿ: ರಾಜ್ಯದ ಹಾನಗಲ್ ಮತ್ತು ಸಿಂದಗಿ ಮತಕ್ಷೇತ್ರದ ಶಾಸಕರ ನಿಧನದಿಂದ ತೆರವಾದ ಎರಡು ಕ್ಷೇತ್ರಗಳಿಗೆ ಉಪ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಮಹೂರ್ತ ಫಿಕ್ಸ್ ಮಾಡಿದೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಮೂರು ಪಕ್ಷಗಳು ತೀವ್ರ ಪೈಪೋಟಿಯಲ್ಲಿದ್ದರೆ ಬಹುಜನ ಸಮಾಜ ಪಾರ್ಟೀ ಹಾಗೂ ಪಕ್ಷೇತರ ಅಭ್ಯರ್ಥೀಗಳು ಕೂಡಾ ಕಣಕ್ಕಿಳಿಯುವ ಸಾಧ್ಯತೆಗಳು ಹೆಚ್ಚಿವೆ ಆದಾಗ್ಯೂ ಕೊನೆಯ ಗಳಿಗೆಯಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಮೂರು ಪಕ್ಷಗಳಲ್ಲಿ ತ್ರಿಕೋನ ಸ್ಪರ್ಧೆ ನಡೆಯುವುದು ಬಹುತೇಕ ಖಚಿತವಾಗಿದೆ. ಒಟ್ಟಾರೆ ಆಡಳಿತಾರೂಢ ಬಿಜೆಪಿ ಸರಕಾರಕ್ಕೆ ಎರಡು ಕ್ಷೇತ್ರಗಳಲ್ಲಿ ಗೆಲ್ಲುವುದು ಪ್ರತಿಷ್ಠೆವಾಗಿ ಪರಿಣಮಿಸಿದೆ ಎಂದು ಹೇಳಬಹುದಾಗಿದೆ.

ದೇಶದಲ್ಲಿ ಒಟ್ಟು 30 ಕ್ಷೇತ್ರಗಳಿಗೆ ಏಕಕಾಲಕ್ಕೆ ಉಪಚುನಾವಣೆ ನಡೆಯಲಿದ್ದು ಅದರಲ್ಲಿ ರಾಜ್ಯದ ಹಾನಗಲ್ ಮತ್ತು ಸಿಂದಗಿ ಕ್ಷೇತ್ರದ ಉಪಚುನಾವಣೆಯು ಅ. 1 ರಂದು ನಾಮಪತ್ರ ಸಲ್ಲಿಕೆ ಪ್ರಾರಂಭವಾಗಿ ಅ. 8 ರಂದು ನಾಮಪತ್ರ ಸಲ್ಲಿಸುವ ಕೊನೆಯ ದಿನವಾಗಿದ್ದು. 11 ರಂದು ನಾಮಪತ್ರ ಪರಿಷ್ಕರಣೆ 13 ರಂದು ನಾಮಪತ್ರ ಹಿಂಪಡೆದುಕೊಳ್ಳುವುದು. ಅ. 30 ರಂದು ಮತದಾನ ನಡೆಯಲಿದೆ. ನವ್ಹಂಬರ 2 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಇದರ ಪ್ರಯಕ್ತ ಚುನಾವಣೆ ನಡೆಯುವ ಕ್ಷೇತ್ರಗಳಿಗೆ ಘೋಷಣೆಯಾದ ದಿನದಿಂದಲೇ ನೀತಿ ಸಂಹಿತೆ ಜಾರಿಯಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

ರಾಷ್ಟ್ರ ರಾಜಕಾರಣದಲ್ಲಿ ಸುಮಾರು 70 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷವು ಸಿಂದಗಿ ಕ್ಷೇತ್ರದಲ್ಲಿ ಕಳೆದ 5 ಬಾರಿಯ ಚುನಾವಣೆಯಲ್ಲಿ ಮೂರನೇ ಸ್ಥಾನದಲ್ಲಿ ಉಳಿದು ಪಕ್ಷಕ್ಕೆ ಹಿನ್ನಡೆಯಾಗಿತ್ತು ಅದನ್ನು ಮರು ಸ್ಥಾಪನೆ ಮಾಡಬೇಕು ಎಂದು ಉಪಚುನಾವಣೆ ಘೋಷಣೆಯಾಗುವ ಮುನ್ನವೇ ಅನುಕಂಪದ ಅಲೆಯ ಮೇಲೆ ಅಶೋಕ ಮನಗೂಳಿ ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಿದೆ ಆದರೆ ಬಿಜೆಪಿ ಮತ್ತು ಜೆಡಿಎಸ್, ಬಹುಜನ ಸಮಾಜ ಪಾರ್ಟಿಯ ಅಭ್ಯರ್ಥಿಗಳ ಹೆಸರು ಇನ್ನೂ ಘೋಷಣೆಯಾಗಿಲ್ಲ. ಕಳೆದ 2018ರ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ದಿ.ಶಾಸಕ ಎಂ.ಸಿ.ಮನಗೂಳಿಯವರು 9873 ಮತಗಳ ಅಂತರದಿಂದ ಜಯಭೇರಿ ಬಾರಿಸಿ ಬಿಜೆಪಿ ಭದ್ರಕೋಟೆಯನ್ನು ಛಿದ್ರಿಸಿದ್ದರು. ಕಳೆದ ಮೂರು ಬಾರಿ ಕ್ಷೇತ್ರವನ್ನು ಅಕ್ರಮಿಸಿದ ಬಿಜೆಪಿ ಪಕ್ಷ ಇನ್ನೂ ತನ್ನ ಅಭ್ಯರ್ಥಿಯನ್ನು ಘೋಷಿಸಿಲ್ಲ. ಆದರೂ ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರ ಆಡಳಿತದಲ್ಲಿರುವದರಿಂದ ಈ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷವು ಅಧಿಕಾರ ಪಡೆದುಕೊಳ್ಳಬೇಕು ಮತ್ತು ಕಳೆದ ಸಮ್ಮಿಶ್ರ ಸರಕಾರದಲ್ಲಿ ಆಡಳಿತ ನಡೆಸಿದ ಹಿನ್ನಲೆಯಲ್ಲಿ ಜೆಡಿಎಸ್ ತನ್ನ ತೆಕ್ಕೆಗೆ ಹಾಕಿಕೊಳ್ಳಬೇಕು ಎನ್ನುವ ಲೆಕ್ಕಾಚಾರ ನಡೆಸಿದರೆ ಕಾಂಗ್ರೆಸ್ ಪಕ್ಷ 15 ವರ್ಷಗಳಿಂದ ಕಳೆದುಕೊಂಡಿದ್ದ ಇತಿಹಾಸ ಮರು ಸ್ಥಾಪಿಸಬೇಕು ಎಂದು ದಿ.ಎಂ.ಸಿ.ಮನಗೂಳಿಯವರ ಪುತ್ರನನ್ನೆ ಪಕ್ಷಕ್ಕೆ ಸೆಳೆದುಕೊಂಡು ಹೊಸ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.

- Advertisement -

ಚನಾವಣೆ ಘೋಷಣೆಯಾದ ಬೆನ್ನಲ್ಲೆ ಜೆಡಿಎಸ್ ಪಕ್ಷದ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿಯವರು ಉಪ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಖಚಿತ ಎಂದು ಹೇಳಿಕೆ ನೀಡಿದ್ದಾರೆ ಇದರಿಂದ ಜೆಡಿಎಸ್ ಕಾರ್ಯಕರ್ತರಲ್ಲಿ ಉತ್ಸಾಹ ಮನೆ ಮಾಡಿದೆ. ಅಲ್ಲದೆ ಕಳೆದ 2018 ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಹುಜನ ಪಾರ್ಟಿ ಸಹಯೋಗದೊಂದಿಗೆ ಚುನಾವಣೆ ಎದುರಿಸಿತ್ತು ಆದರೆ ಈ ಉಪಚುನಾವಣೆಯಲ್ಲಿ ಬಹುಜನ ಪಾರ್ಟಿಯು ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತದೆ ಎನ್ನುವುದು ಚರ್ಚೆಯಲ್ಲಿದೆ ಆದರೆ ಯಾರು ಅಭ್ಯರ್ಥಿಯಾಗುತ್ತಾರೆ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಲ್ಲಿ ಟಿಕೇಟಗಾಗಿ ಕಸರತ್ತು ನಡೆದಿದ್ದು ಟಿಕೇಟ ಸಿಗದೇ ಇದ್ದಲ್ಲಿ ಬಹುತೇಕರು ಪಕ್ಷೇತರರಾಗಿ ಕಣಕ್ಕಿಳಿಯುವ ಸಾಧ್ಯತೆಗಳಿವೆ ಎನ್ನುವುದು ಸಾರ್ವಜನಿಕರ ವಲಯದಲ್ಲಿ ಹರಿದಾಡುತ್ತಿದೆ. ಇನ್ನು ಪ್ರಜಾವಂತ ಮತದಾರ ಪ್ರಭುಗಳು ಯಾವ ಪಕ್ಷದ ಅಭ್ಯರ್ಥಿಯ ಕೊರಳಿಗೆ ವಿಜಯದ ಮಾಲೆ ಹಾಕುತ್ತಾರೋ ಎನ್ನುವುದು ಕಾದು ನೋಡಬೇಕಾಗಿದೆ.


ವರದಿ: ಪಂಡಿತ್ ಯಂಪೂರೆ, ಸಿಂದಗಿ

- Advertisement -
- Advertisement -

Latest News

ಶ್ರೀ ಬಸವೇಶ್ವರ ಸೊಸಾಯಿಟಿಗೆ ರಜತ ಮಹೋತ್ಸವ ಸಂಭ್ರಮ

ಮೂಡಲಗಿ -ಪಟ್ಟಣದ ಶ್ರೀ ಬಸವೇಶ್ವರ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಗೆ ೨೫ ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಇದೇ ದಿ. ೨೫ ರಂದು ಸಂಭ್ರಮದ ಬೆಳ್ಳಿ ಮಹೋತ್ಸವ...
- Advertisement -

More Articles Like This

- Advertisement -
close
error: Content is protected !!
Join WhatsApp Group