ಬೆಂಗಳೂರು – ನಮ್ಮ ಮೆಟ್ರೊ
ಪ್ರಯಾಣ ದರವನ್ನು ಭಾರೀ ಪ್ರಮಾಣದಲ್ಲಿ ಏರಿಸಿರುವುದಕ್ಕೆ ರಾಜ್ಯಾದ್ಯಂತ ಜನಾಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೆ ಮೆಟ್ರೊ ಪ್ರಯಾಣ ದರ ಇಳಿಸುವಂತೆ ಬೆಂಗಳೂರು ಮೆಟ್ರೊ ರೈಲ್ವೆ ನಿಗಮ (ಬಿಎಂಆರ್‌ಸಿಎಲ್) ಕಾರ್ಪೋರೇಷನ್‌ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿಗಳು, ಎಲ್ಲೆಲ್ಲಿ ಅಸಹಜ
ರೀತಿಯಲ್ಲಿ ಮೆಟ್ರೊ ಪ್ರಯಾಣ ದರ ಏರಿಕೆಯಾಗಿದೆಯೋ ಅಂತಹ ಕಡೆಗಳಲ್ಲಿ ಮೆಟ್ರೊ ಪ್ರಯಾಣ ದರ
ಇಳಿಸುವಂತೆ ಬಿಎಂಆರ್‌ಸಿಎಲ್ ವ್ಯವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.
ಬೆಂಗಳೂರು ಮೆಟ್ರೋ ರೈಲು ನಿಗಮ ಇತ್ತೀಚೆಗೆ ಮೆಟ್ರೋ
ಪ್ರಯಾಣ ದರ ಪರಿಷ್ಕರಿಸಿದ್ದು, ಈ ದರ ಏರಿಕೆ ಹಲವು ರೀತಿಯ ವೈಪರೀತ್ಯಗಳಿಂದ ಕೂಡಿದ್ದು, ಕೆಲವು ಕಡೆಗಳಲ್ಲಿ ಪ್ರಯಾಣ ದರ ದುಪ್ಪಟ್ಟಾಗಿರುವುದನ್ನು ಗಮನಿಸಿದ್ದೇನೆ. ಇಲ್ಲೆಲ್ಲಾ ಪ್ರಯಾಣ ದರವನ್ನು ಕಡಿಮೆ ಮಾಡುವಂತೆ ಸೂಚನೆ
ನೀಡಿದ್ದೇನೆ ಎಂದು ಅವರು ತಿಳಿಸಿದ್ದಾರೆ.
ಮೆಟ್ರೊ ಪ್ರಯಾಣ ದರವನ್ನು ಭಾರೀ ಪ್ರಮಾಣದಲ್ಲಿ
ಏರಿಕೆ ಮಾಡಿರುವುದಕ್ಕೆ ಸಾರ್ವಜನಿಕರಿಂದ ವ್ಯಾಪಕ ವಿರೋಧವೂ ವ್ಯಕ್ತವಾಗಿದೆ. ಸಾರ್ವಜನಿಕರ ವಿರೋಧವನ್ನು
ಪರಿಗಣಿಸಿ ಎಲ್ಲೆಲ್ಲಿ ಅಸಹಜ ರೀತಿಯಲ್ಲಿ ದರ ಏರಿಕೆಯಾಗಿದೆಯೋ ಅಂತಹ ಕಡೆಗಳಲ್ಲಿ ಪ್ರಯಾಣ ದರ
ಇಳಿಸುವಂತೆ ಮೆಟ್ರೋ ರೈಲು ನಿಗಮದ ವ್ಯವಸ್ಥಾಪಕರಿಗೆ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.