ಸಾಮಾಜಿಕ, ಶೈಕ್ಷಣಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ್ದಕ್ಕಾಗಿ ನಿವೃತ್ತ ಪ್ರೌಢ ಶಾಲಾ ಶಿಕ್ಷಕರಾದ ಸಿ.ಎಂ. ಬೂದಿಹಾಳ ಅವರು ಬೆಳಗಾವಿ ನಾಗನೂರ ರುದ್ರಾಕ್ಷಿ ಮಠದಿಂದ ಕೊಡಮಾಡುವ ‘ಸೇವಾರತ್ನ’ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಜಾಗತಿಕ ಲಿಂಗಾಯತ ಮಹಾಸಭಾದ ಮಹಾನಗರದ ಪ್ರಧಾನ ಕಾರ್ಯದರ್ಶಿ ಆಗಿರುವ ಶ್ರೀಯುತರಿಗೆ ದಿನಾಂಕ 8- 12 – 2023ರಂದು ಜರುಗುವ ಪೂಜ್ಯ ಶ್ರೀ ಡಾ. ಶಿವಬಸವ ಮಹಾಸ್ವಾಮಿಗಳವರ 134 ನೆಯ ಜಯಂತಿ ಮಹೋತ್ಸವದ ಸಂದರ್ಭದಲ್ಲಿ ಪೂಜ್ಯರು ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ.