ವ್ಯಾಜ್ಯಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಿಕೊಳ್ಳಲು ನ್ಯಾಯಾಧೀಶರ ಕರೆ

Must Read

ಸಿಂದಗಿ ನ್ಯಾಯಾಲಯಗಳ ಸಂಕೀರ್ಣದಲ್ಲಿ ಮಾರ್ಚ್ 12 ರಂದು ಕರ್ನಾಟಕ ರಾಜ್ಯಾದ್ಯಂತ ಮತ್ತು ಸಿಂದಗಿ, ಆಲಮೇಲ ಹಾಗೂ ದೇವರಹಿಪ್ಪರಗಿ ತಾಲ್ಲೂಕಿನ ಸಾರ್ವಜನಿಕರ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಚಿಸಿದಲ್ಲಿ ಮುಂಚಿತವಾಗಿ ಸಂಬಂಧಪಟ್ಟ ತಾಲ್ಲೂಕು ಕಾನೂನು ಸೇವಾ ಸಮಿತಿಯನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು ಸಿಂದಗಿ ಜೆಎಂಎಫ್‍ಸಿ ಸಿವಿಲ್ ನ್ಯಾಯಾಧೀಶ ರಮೇಶ ಗಾಣಿಗೇರ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿರುವ ಪ್ರಕರಣಗಳಾದ ಕೌಟುಂಬಿಕ, ಜೀವನಾಂಶ, ವಾಟ್ನಿ, ದಾವೆ, ರಾಜಿ ಆಗುವ ಕ್ರಿಮಿನಲ್ ಪ್ರಕರಣಗಳು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳಾದ ಬ್ಯಾಂಕ್ ಸಾಲ ಮರುಪಾವತಿ, ಸರ್ಕಾರದ ವಿವಿಧ ಇಲಾಖೆಗಳಲ್ಲಿ ಯೋಜನಾ ಫಲಾನುಭವಿಗಳು, ನೀರಿನ ಕರ, ಮನೆ ಕರ ಮತ್ತು ಇತರೆ ಪ್ರಕರಣಗಳನ್ನು ಯಾವುದೇ ವೆಚ್ಚವಿಲ್ಲದೇ ಎರಡು ಪಕ್ಷಗಾರರಿಗೆ ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳಲು ಕೋರಲಾಗಿದೆ. ಪ್ರಕರಣಗಳನ್ನು ರಾಜಿಮಾಡಿಕೊಳ್ಳುವುದರಿಂದ ಹಣ ಮತ್ತು ಸಮಯ ಉಳಿತಾಯವಾಗುವುದು ಹಾಗೂ ಸಮಾಜದಲ್ಲಿ ದ್ವೇಷ ಭಾವನೆಗಳು ಕಡಿಮೆ ಆಗುತ್ತವೆ ಆದ್ದರಿಂದ ಎಲ್ಲಾ ಸಾರ್ವಜನಿಕರು ರಾಷ್ಟ್ರೀಯ ಲೋಕ ಅದಾಲತ್‍ನ ಸದುಪಯೋಗ ಪಡೆದುಕೊಂಡು ನೆಮ್ಮದಿಯ ಜೀವನ ನಡೆಸಬೇಕೆಂದು ಈ ಮೂಲಕ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

Latest News

ಯಶಸ್ವಿ ಹಾಸನಾಂಬ ಫಿಲಂ ಫೆಸ್ಟಿವಲ್

ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮ್ಯಾಕ್ಸ್ ಕಾನ್, ಡ್ರೀಮ್ ಸ್ಟುಡಿಯೋ ಎಂಟರ್ಟೈನ್ಮೆಂಟ್, ವೆಂಚರ್ ಮೂವೀಸ್  ವತಿಯಿಂದ ಹಾಸನಾಂಬ ಚಲನಚಿತ್ರೋತ್ಸವ 2025 ಕಾರ್ಯಕ್ರಮವನ್ನು...

More Articles Like This

error: Content is protected !!
Join WhatsApp Group