spot_img
spot_img

ಕಲ್ಬುರ್ಗಿ ಪಂಚಮಸಾಲಿ ಸಮಾವೇಶದಲ್ಲಿ ಭಾಗವಹಿಸಲು ಕರೆ

Must Read

- Advertisement -

ಸಿಂದಗಿ: ಪಂಚಮಸಾಲಿ ಸಮಾಜದ 2ಎ ಮೀಸಲಾತಿ ಹೋರಾಟದ ಮುಂದುವರಿದ ಭಾಗವಾಗಿ ಕಲ್ಯಾಣ ಕರ್ನಾಟಕದ ಕಲ್ಬುರ್ಗಿ ಜಿಲ್ಲೆಯಾದ್ಯಂತ ಹೋರಾಟದ ಕಿಚ್ಚು ಪಸರಿಸುತ್ತಿದೆ. ಪಂಚಮಸಾಲಿ ಸಮಾಜದ ಪ್ರಥಮ ಜಗದ್ಗುರುಗಳಾದ ಕೂಡಲಸಂಗಮ ಪೀಠದ ಬಸವ ಜಯ ಮೃತ್ಯುಂಜಯ ಮಹಾಸ್ವಾಮಿಗಳ ನೇತೃತ್ವದಲ್ಲಿ 12 ರಂದು ಸಂಜೆ 4ಗಂಟೆಗೆ ಕಲ್ಬುರ್ಗಿ ನಗರದ ಶ್ರೀ ಶರಣಬಸವೇಶ್ವರ ಜಾತ್ರಾ ಮೈದಾನದಲ್ಲಿ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.

ಇದು ಪಂಚಮಸಾಲಿ ಸಮಾಜದ ಪ್ರತಿಷ್ಠೆಯಾಗಿರುವುದರಿಂದ ರಾಜ್ಯಾದ್ಯಂತ ಎಲ್ಲ ಕಡೆಗಳಿಂದ ದೀಕ್ಷ ಗೌಡ, ಮಲೇಗೌಡ ಸೇರಿದಂತೆ ಪಂಚಮಸಾಲಿ ಸಮಾಜದ ಎಲ್ಲ ಬಾಂಧವರು ಭಾಗವಹಿಸಲಿದ್ದು ಹಾಗೆಯೇ ಸಿಂದಗಿ ತಾಲೂಕಿನ ಎಲ್ಲಾ ಪಂಚಮಸಾಲಿ ಸಮಾಜದ ಎಲ್ಲ ಬಂಧುಗಳು ಭಾಗವಹಿಸಿ ಸಮಾವೇಶವನ್ನು ಯಶಸ್ವಿಗೊಳಿಸಿ ಹೋರಾಟದ ಹಾದಿಗೆ ಬಲ ತುಂಬಬೇಕೆಂದು ಪಂಚಮಸಾಲಿ ಸಮಾಜ ತಾಲುಕಾಧ್ಯಕ್ಷ ಎಂ.ಎಂ ಹಂಗರಗಿ, 2ಎ ಮೀಸಲಾತಿ ಹೋರಾಟ ಸಮಿತಿ ಗೌರವಾಧ್ಯಕ್ಷ ಚಂದ್ರಶೇಖರ್ ಎಂ ನಾಗರಬೆಟ್ಟ ಜಂಟಿಯಾಗಿ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿಕೊಂಡಿದ್ದಾರೆ.

- Advertisement -
- Advertisement -

Latest News

ಭತ್ತದ ನಾಡು ಕೆ.ಆರ್.ನಗರ ಕಾವೇರಿ ತೀರದ ಅರ್ಕೇಶ್ವರ

ನಾವು ಕಪ್ಪಡಿ ದರ್ಶನ ಮಾಡಿಕೊಂಡು ಕೆ.ಆರ್.ನಗರದ ಅರ್ಕೇಶ್ವರ ದೇವಸ್ಥಾನ ನೋಡಲು ಪ್ರಯಾಣ ಮುಂದುವರೆಸಿದೆವು. ಕೆ.ಆರ್.ನಗರದಿಂದ ಹಾಸನ ರಸ್ತೆಯಲ್ಲಿ ಮೂರ್ನಾಲ್ಕು ಕಿ.ಮೀ. ದೂರದಲ್ಲಿ ಕಾವೇರಿ ನದಿಯ ದಂಡೆಯಲ್ಲಿ...
- Advertisement -

More Articles Like This

- Advertisement -
close
error: Content is protected !!
Join WhatsApp Group