ಮಹಿಳೆಯ ಕೊಲೆಗಾರನಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹ

Must Read

ಸಿಂದಗಿ: ಫೇ. ೧೮ ರಂದು ದಾರವಾಡ ಜಿಲ್ಲೆಯ ಕುಂದುಗೋಳ ತಾಲೂಕಿನ ಯರಗುಪ್ಪ ಗ್ರಾಮದ ಕುರಿಗಾಹಿ ಮಹಿಳೆಯ ಮೇಲೆ ಅತ್ಯಾಚಾರ ವೆಸಗಿ ಕೊಲೆ ಮಾಡಿದ ದುಷ್ಕರ್ಮಿಗೆ ಉಗ್ರವಾದ ಶಿಕ್ಷೆಗೆ ಗುರಿಪಡಿಸಿ ಸರಕಾರ ಆ ಕುಟುಂಬದ ಸದಸ್ಯರಿಗೆ ರಕ್ಷಣೆ ನೀಡುವ ಮೂಲಕ ರೂ ೫೦ ಲಕ್ಷ ಪರಿಹಾರ ಒದಗಿಸಿಕೊಡಬೇಕು ಎಂದು ಓಬಿಸಿ ಮೋರ್ಚಾ ಅಧ್ಯಕ್ಷ ರವಿಕಾಂತ ನಾಯ್ಕೋಡಿ ಹಾಗೂ ಕುರುಬರ ಸಂಘದ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.

ಈ ಕುರಿತು ಜಂಟಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಳೆದ ೧೮ ರಂದು ಧಾರವಾಡ ಜಿಲ್ಲೆಯ ಕುಂದುಗೋಳ ತಾಲೂಕಿನ ಯರಗುಪ್ಪ ಗ್ರಾಮದ ವಲಸೆ ಕುರಿಗಾರ ಕುಟುಂಬದ ಮಹಿಳೆಯ ಲಕ್ಷ್ಮೀ ವಿಠ್ಠಲ ಕಳ್ಳಿಮನಿ ಅವರು ಅಡವಿಯಲ್ಲಿ ಕಟ್ಟಿಗೆ ತರಲು ಹೋದಾಗ ಮಹ್ಮದ ಕೊಲಕಾರ ಎಂಬ ವ್ಯಕ್ತಿ ಆ ಮಹಿಳೆಯ ಮೇಲೆ ಅತ್ಯಾಚಾರ ವೆಸಗಿ ಕೊಲೆ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸ ಇಲಾಖೆ ಯಶಸ್ವಿಯಾಗಿದ್ದು ಸ್ವಾಗತಾರ್ಹ. ಬಂಧಿತ ಆರೋಪಿಗೆ ನ್ಯಾಯಾಲಯ ಬೇಲ್ ನೀಡದೇ ಆತನಿಗೆ ಜೀವಾವಧಿ ಶಿಕ್ಷೆಗೆ ಗುರಿ ಪಡಿಸಬೇಕು. ಮೃತ ಲಕ್ಷ್ಮಿ ಇವರಿಗೆ ಮೂರು ಚಿಕ್ಕ ಮಕ್ಕಳಿದ್ದು ಆ ಕುಟುಂಬದ ಮುಖ್ಯಸ್ಥೆಯಾಗಿದ್ದರು. ಇಂತಹ ಕುರಬ ಸಮುದಾಯದ ನಿತ್ಯ ಕಾಯಕ ಕುರಿಕಾಯುವುದು ಅದನ್ನು ದಮನ ಮಾಡುವ ನಿಟ್ಟಿನಲ್ಲಿ ಇಂತಹ ದುಷ್ಟರು ಕಾರ್ಯ ನಿತ್ಯ ನಿರಂತರ ನಡೆಸುತ್ತಿವೆ ಕಾರಣ ರಾಜ್ಯ ಸರಕಾರ ಈ ಸಮುದಾಯಕ್ಕೆ ಸೂಕ್ತ ರಕ್ಷಣೆ ನೀಡಬೇಕು ಅಲ್ಲದೆ ಆ ಕುಟುಂಬದ ಸದಸ್ಯನಿಗೆ ಸರಕಾರಿ ಸೇವೆಗೆ ಅನುವು ಮಾಡಿಕೊಡಬೇಕು ಮತ್ತು ಆ ಕುಟುಂಬದ ನಿರ್ವಹಣೆಗೆ ರೂ ೫೦ ಲಕ್ಷ ಪರಿಹಾರ ಒದಗಿಸಿಕೊಡಬೇಕು ಎಂದು ಕುರಬ ಸಮಾಜದ ತಾಲೂಕಾಧ್ಯಕ್ಷ ನಿಂಗಣ್ಣ ಬಿರಾದಾರ, ಗೌರವ ಕಾರ್ಯದರ್ಶಿ ಸುದರ್ಶನ ಜಂಗಾಣಿ ಸರಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group