ಬೆಳಗಾವಿ – ಜಿಲ್ಲೆಯ ಹುಕ್ಕೇರಿ ತಾಲೂಕಿನ ನಿಡಸೋಸಿ ದುರದುಂಡೇಶ್ವರ ಮಠದ ಪೀಠಾಧಿಪತಿ ಜಗದ್ಗುರು ಶ್ರೀ ಶಿವಲಿಂಗೇಶ್ವರ ಸ್ವಾಮೀಜಿಯವರ ಕಾರು ಅಪಘಾತವಾಗಿದ್ದು ಸ್ವಾಮೀಜಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹುಬ್ಬಳ್ಳಿಗೆ ತೆರಳುವಾಗ ರಾಷ್ಟ್ರೀಯ ಹೆದ್ದಾರಿ ನಂ.೪ ರಲ್ಲಿ ಕಾರು ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ. ಸ್ವಾಮೀಜಿಯವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೆಎಲ್ಈ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿದ್ದು ಈಗ ಚೇತರಿಸಿಕೊಂಡಿದ್ದಾರೆ.