ಸುದ್ದಿಗಳು

ಶಾಲಾ ಮಕ್ಕಳ ಯು.ಡಿ.ಐ.ಡಿ ಮತ್ತು ವೈದ್ಯಕೀಯ ಪ್ರಮಾಣಪತ್ರ ಶಿಬಿರ

ಸವದತ್ತಿ - ತಾಲೂಕ ಮಟ್ಟದಲ್ಲಿ ವಿಕಲಚೇತನ ಮಕ್ಕಳಿಗೆ ಯು.ಡಿ.ಐ.ಡಿ ಮತ್ತು ವೈದ್ಯಕೀಯ ಪ್ರಮಾಣಪತ್ರ ನೀಡುವ ಸಲುವಾಗಿ ಶಿಬಿರವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ನಿರ್ದೇಶನದಂತೆ ಸವದತ್ತಿಯಲ್ಲಿ ಬುಧವಾರ ಮತ್ತು ಗುರುವಾರ ಶಿಬಿರಗಳನ್ನು ಆಯೋಜಿಸುತ್ತಿದ್ದು ಇದರ ಸದುಪಯೋಗವನ್ನು ಪಾಲಕರು ತಮ್ಮ ಮಕ್ಕಳನ್ನು ಕರೆದುಕೊಂಡು ಬಂದು ಮಕ್ಕಳ ವೈದ್ಯಕೀಯ ತಪಾಸಣೆ ಮಾಡಿಸುವ ಮೂಲಕ ಪಡೆದುಕೊಳ್ಳಬೇಕು...

ಆ. ೧೫ ಪೂರ್ವಭಾವಿ ಸಭೆ; ಸಂಭ್ರಮದಿಂದ ಸ್ವಾತಂತ್ರ್ಯೋತ್ಸವ ಆಚರಿಸೋಣ – ಅಜಿತ್ ಮೆನ್ನಿಕೇರಿ

ಮೂಡಲಗಿ - ಆಗಷ್ಟ್ ೧೫ ರ ರಾಷ್ಟ್ರೀಯ ಹಬ್ಬದಂದು ದೇಶದ ಅಭಿವೃದ್ಧಿ ಕುರಿತ ಮಾತುಗಳನ್ನಾಡುತ್ತ, ಸಂತೋಷ ಸಂಭ್ರಮಗಳಿಂದ ಧ್ವಜಾರೋಹಣ ಮಾಡಿ ಸ್ವಾತಂತ್ರ್ಯೋತ್ಸವ ಆಚರಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ್ ಮೆನ್ನಿಕೇರಿ ಹೇಳಿದರು.ತಹಶೀಲ್ದಾರ ಕಾರ್ಯಾಲಯ ಹಾಗೂ ಪುರಸಭಾ ಕಾರ್ಯಾಲಯ ಮೂಡಲಗಿ ಇವುಗಳ ಸಹಯೋಗದಲ್ಲಿ ಕರೆಯಲಾಗಿದ್ದ ಸ್ವಾತಂತ್ರ್ಯ ದಿನದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ಕೋವಿಡ್ ಹಿನ್ನೆಲೆಯಲ್ಲಿ ಸಮಾರಂಭದಲ್ಲಿ...

ಶಶಿಕಲಾ ಜೊಲ್ಲೆಯನ್ನು ಸಂಪುಟದಿಂದ ಕೈ ಬಿಡುವಂತೆ ಆಗ್ರಹಿಸಿ ಪ್ರತಿಭಟನೆ

ಬೆಂಗಳೂರು- ಮೊಟ್ಟೆ ಹಗರಣದಲ್ಲಿ ಸಿಲುಕಿದ ಆರೋಪ ಹೊತ್ತಿರುವ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆಯವರನ್ನು ಸಚಿವ ಸ್ಥಾನದಿಂದ ಕೂಡಲೇ ವಜಾ ಮಾಡಬೇಕು ಎಂದು ಆಗ್ರಹಿಸಿ ಇಲ್ಲಿನ ಯುವ ಕಾಂಗ್ರೆಸ್ ಘಟಕದ ಕಾರ್ಯಕರ್ತ ರು ಕಾಂಗ್ರೆಸ್ ಭವನದಲ್ಲಿ ಪ್ರತಿಭಟನೆ ನಡೆಸಿದರು.ಭ್ರಷ್ಟಾಚಾರ ಆರೋಪ ಹೊತ್ತವರನ್ನು ಸಂಪುಟದಲ್ಲಿ ಸೇರಿಸಿಕೊಂಡಿರುವ ಬೊಮ್ಮಾಯಿ ನೇತೃತ್ವದ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಸಚಿವೆ ಜೊಲ್ಲೆಯವರ...

ಜೊಲ್ಲೆ ಮೇಲಿನ ಆರೋಪದ ಬಗ್ಗೆ ತನಿಖೆಯಾಗಬೇಕು – ಸತೀಶ ಜಾರಕಿಹೊಳಿ

ಗೋಕಾಕ - ಶಾಲಾ ಮಕ್ಕಳಿಗೆ ನೀಡುವ ಮೊಟ್ಟೆ ಕಾಂಟ್ರಾಕ್ಟ್ ನೀಡುವ ಹಗರಣದಲ್ಲಿ ಹೆಸರು ಕೇಳಿಬಂದಿರುವ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆಯವರ ವಿರುದ್ಧ ತನಿಖೆಯಾಗಬೇಕು. ಈಗಲೇ ಅವರಿಗೆ ಸಚಿವ ಸ್ಥಾನ ನೀಡಿದ್ದರಿಂದ ಅವರು ಇನ್ನಷ್ಟು ಬಲಿಷ್ಠರಾಗುತ್ತಾರೆ. ಸಚಿವರಾಗುವ ಮುಂಚೆಯೇ ಝೀರೋ ಟ್ರಾಫಿಕ್ ನಲ್ಲಿ ಪ್ರಮಾಣ ವಚನಕ್ಕೆ ಬಂದಿರುವುದು ಅವರ ಧೋರಣೆ ತೋರಿಸುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ...

ಉಪಮುಖ್ಯಮಂತ್ರಿ ಸ್ಥಾನ ರದ್ದು ; ಬಿಜೆಪಿಯ ರಾಜ್ಯಹಿತದ ಸಂಪ್ರದಾಯ

ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸಚಿವ ಸಂಪುಟ ಅಸ್ಥಿತ್ವಕ್ಕೆ ಬಂದಂತಾಗಿದೆ. ಮಂತ್ರಿಗಳು ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಸಚಿವ ಸಂಪುಟದ ವಿಶೇಷವೆಂದರೆ ಉಪ ಮುಖ್ಯಮಂತ್ರಿ ಸ್ಥಾನ ಎಂಬ ಉತ್ಸವ ಮೂರ್ತಿ ಇಲ್ಲದಿರುವುದು !ಹಿಂದಿನ ಎಸ್ ಎಮ್ ಕೃಷ್ಣ ಅವರ ಕಾಲದಲ್ಲಿ ಅತೃಪ್ತರನ್ನು ಸಮಾಧಾನಪಡಿಸಲೆಂದು ಹುಟ್ಟಿಸಲಾದ ಉಪಮುಖ್ಯಮಂತ್ರಿ ಸ್ಥಾನವೆಂಬುದು ರಾಜ್ಯದ ಬೊಕ್ಕಸಕ್ಕೆ ಹೊರೆಯೇ ಆಗಿತ್ತಷ್ಟೇ. ಉಪ ಮುಖ್ಯಮಂತ್ರಿ...

ಡಾ. ಭೇರ್ಯ ರಾಮಕುಮಾರ ಅವರಿಗೆ ಪ್ರಮಾಣಪತ್ರ

ಬೆಂಗಳೂರು - ಇತ್ತೀಚೆಗೆ ಬೆಂಗಳೂರಿನ ಗಾಂಧಿಭವನದಲ್ಲಿ ಕನ್ನಡ ಅಭಿವೃದ್ದಿ ಪ್ರಾಧಿಕಾರವು ಹಮ್ಮಿಕೊಂಡಿದ್ದ ಕನ್ನಡ ಜಾಗೃತಿ ಸಮಿತಿ ಸದಸ್ಯರ ರಾಜ್ಯಮಟ್ಟದ ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದ ಸಾಹಿತಿ ,ಪತ್ರಕರ್ತ ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ಅವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಅವರು ಪ್ರಮಾಣಪತ್ರ ನೀಡಿದರು.ಸಾರ್ವಜನಿಕ ಇಲಾಖೆಗಳಲ್ಲಿ ಕನ್ನಡ ಬಳಕೆಗಾಗಿ...

ಮೀರಜ್ – ಮಂಗಳೂರು ರೈಲು ಓಡಾಟ ಶೀಘ್ರ ಆರಂಭಿಸಲು ಕಡಾಡಿಯವರಿಂದ ಮನವಿ

ಮೂಡಲಗಿ: ಕುಂದಾನಗರಿ ಬೆಳಗಾವಿ ಜಿಲ್ಲೆ ಹಾಗೂ ಸುತ್ತಲಿನ ವಿವಿಧ ಜಿಲ್ಲೆಗಳ ಸಾರ್ವಜನಿಕರ ಅನುಕೂಲಕ್ಕಾಗಿ ಮೀರಜ್-ಮಂಗಳೂರ ವಾಯಾ ಅರಸೀಕೆರೆ ಮಾರ್ಗವಾಗಿ ರೈಲು ಓಡಾಟ ಶೀಘ್ರ ಆರಂಭಿಸಬೇಕು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರಿಗೆ ಮನವಿ ಪತ್ರ ನೀಡಿ ಒತ್ತಾಯಿಸಿದರು.ಬುಧವಾರ (ಆ.4) ರಂದು ಕೇಂದ್ರ ರೈಲ್ವೆ ಸಚಿವ...

ಬೆಳಗಾವಿಯ ಕಾರಂಜಿಮಠ ವತಿಯಿಂದ ದತ್ತಿನಿಧಿ ಕಾರ್ಯಕ್ರಮ

ಬೆಳಗಾವಿ - ಆಗಸ್ಟ್ 9 ರಂದು ಸಾಯಂಕಾಲ 6 ಗಂಟೆಗೆ ಬೆಳಗಾವಿಯ ಕಾರಂಜಿಮಠದಲ್ಲಿ ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘ ಮತ್ತು ಕಾರಜಿಮಠ ಬೆಳಗಾವಿ ಇವರ ಆಶ್ರಯದಲ್ಲಿ ಸಿದ್ದರಾಮಯ್ಯ ಚರಂತಿಮಠ ಇವರ ಸ್ಮರಣಾರ್ಥ ದತ್ತಿನಿಧಿ ಕಾರ್ಯಕ್ರಮ ಜರುಗಲಿದೆ.ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಕಾರಂಜಿ ಮಠದ ಶ್ರೀ ಗುರುಸಿದ್ಧ ಮಹಾಸ್ವಾಮಿಗಳು ವಹಿಸುವರು. ಜಿಲ್ಲಾ ಲೇಖಕಿಯರ ಸಂಘದ ಅಧ್ಯಕ್ಷೆ ಡಾ....

ಪ್ರಭು ಚವ್ಹಾಣಗೆ ಸಚಿವ ಸ್ಥಾನ ; ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

ಬೀದರ - ಪ್ರಭು ಚವ್ಹಾಣಗೆ ಸಚಿವ ಸ್ಥಾನ ಪಡೆದಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಮಂಠಾಳಕರ್ ನೇತೃತ್ವದಲ್ಲಿ ಜಿಲ್ಲೆಯ ಹುಮನಾಬಾದ್ ಪಟ್ಟಣದ ವಿವಿಧ ವೃತ್ತಗಳಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಪರಸ್ಪರ ಸಿಹಿಹಂಚಿ ಸಂಭ್ರಮಿಸಿದರು.ಜಿಲ್ಲಾ ಉಪಾಧ್ಯಕ್ಷ ವಿಶ್ವನಾಥ ಪಾಟೀಲ ಮಾಡ್ಗುಳ್, ಪಕ್ಷದ ಮುಖಂಡ ವಿನಾಯಕ ಮಂಡಾ, ಸಾಂಸ್ಕೃತಿಕ ಪ್ರಕೋಷ್ಟದ...

ಕೋವಿಡ್‍ದಿಂದ ರಕ್ಷಣೆಗಾಗಿ ಮಕ್ಕಳಿಗೆ ಲಸಿಕೆ ಅವಶ್ಯ

ಮೂಡಲಗಿ: ‘ಕೋವಿಡ್ ಸೋಂಕು ಬಾಧಿಸದಂತೆ ಮಕ್ಕಳ ರಕ್ಷಣೆಗಾಗಿ ಲಸಿಕೆ ಹಾಕಿಸುವುದು ಅವಶ್ಯವಿದೆ’ ಎಂದು ಚಿಕ್ಕ ಮಕ್ಕಳ ತಜ್ಞ ಡಾ. ಮನೋಹರ ವಿ. ಹೇಳಿದರು.ಇಲ್ಲಿಯ ಶ್ರೀ ಶಿವಬೋಧರಂಗ ಚಿಕ್ಕಮಕ್ಕಳ ಆಸ್ಪತ್ರೆಯಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಹಾಗೂ ಸುರಕ್ಷಾ ಪ್ಯಾರಾ ಮೆಡಿಕಲ್ ಕಾಲೇಜು ಇವರ ಸಹಯೋಗದಲ್ಲಿ ಏರ್ಪಡಿಸಿದ್ದ ಕೋವಿಡ್‍ದಿಂದ ರಕ್ಷಣೆಯ ಮಕ್ಕಳಿಗೆ ಲಸಿಕೆ ನೀಡುವ ಅಭಿಯಾನವನ್ನು...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group