ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ

Must Read

ಮೂಡಲಗಿ: ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಅವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಶನಿವಾರದಂದು ಮೂಡಲಗಿ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಅರಭಾವಿ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಹಾಲುಮತ ಸಮಾಜದವರು ಟಗರಿಗೆ ಮಾಲಾರ್ಪಣೆ ಮಾಡಿ, ಬಂಡಾರ ಎರಚಿ ಮತ್ತು ಪಟಾಕಿ ಸಿಡಿಸಿ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.

ಈ ವೇಳೆ ಕಾಂಗ್ರೆಸ್ ಪಕ್ಷ ಹಿಂದುಳಿದ ವರ್ಗದ ಯುವ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಭಾಸ ಪೂಜೇರಿ ಮಾತನಾಡಿ, ರಾಜ್ಯದಲ್ಲಿ ಸಿದ್ದರಾಮಯ್ಯನವರು ಎರಡನೇ ಬಾರಿ ಮುಖ್ಯಮಂತ್ರಿಗಳಾಗಿ ಹಾಗೂ ಡಿ ಕೆ.ಶಿವಕುಮಾರ ಅವರು ಉಪಮುಖ್ಯಮಂತ್ರಿಯಾಗಿ  ಮತ್ತು ಎಂಟು ಸಚಿವರು ಪ್ರಮಾಣ ವಚನ ಸ್ವೀಕರಿಸಿದು ಎಲ್ಲ ಕಾಂಗ್ರೆಸ್ ಕಾರ್ಯಕರ್ತರಿಗೆ ಖುಷಿ ತಂದಿದೆ. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದಿಂದ ಜನರಿಗೆ ನೀಡಿದಂಥ ಭರವಸೆಗಳನ್ನು ಈಡೇರಿಸಿ ರಾಜ್ಯದಲ್ಲಿ ಜನಪರ ಆಡಳಿತ ನಡೆಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

ಈ ಸಂದರ್ಭದಲ್ಲಿ ಮುಖಂಡ ಕೃಷ್ಣಪ್ಪ ಸೊನ್ನದ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಕರ್ನಾಟಕ ಪ್ರದೇಶ ಕುರಬರ ಸಂಘದ ಮೂಡಲಗಿ ತಾಲೂಕಾ ಘಟಕದ ಅಧ್ಯಕ್ಷ ಡಾ.ಎಸ್.ಎಸ್.ಪಾಟೀಲ, ಮೂಡಲಗಿ ಪುರಸಭೆ ಅಧ್ಯಕ್ಷ ಹಣಮಂತ ಗುಡ್ಲಮನಿ ಹಾಲಮತ ಸಮಾಜದ ಬಾಂಧವರು ಉಪಸ್ಥಿತರಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group