spot_img
spot_img

ಬಸವಣ್ಣನ ಕರ್ಮಭೂಮಿ ಬೀದರನಲ್ಲಿ ಸಂಭ್ರಮದ ಜಯಂತ್ಯುತ್ಸವ

Must Read

ಬೀದರ – ಬಸವಣ್ಣನವರ ಕರ್ಮಭೂಮಿ ಬೀದರ ಜಿಲ್ಲೆಯ ಬಸವಕಲ್ಯಾಣ ದಲ್ಲಿ ಬಸವ ಜಯಂತಿ ವಿಶೇಷ ಸಂಭ್ರಮ, ಸಡಗರಗಳಿಂದ ಆಚರಿಸಲ್ಪಟ್ಟಿತು.

ಶಾಸಕ ಶರಣು ಸಲಗರ ನಗರದ ಬಸವೇಶ್ವರ ವೃತ್ತದಲ್ಲಿ ಬಸವಣ್ಣನವರ ಮೂರ್ತಿಗೆ ಮಾಲಾರ್ಪಣೆ ಮಾಡಿದರು. ಶಾಸಕ ಬಂಡೆಪ್ಪ ಖಾಶೆಂಪೂರ, ಶಾಸಕ ರಹೀಂ ಖಾನ್, ಶಾಸಕ ರಘುನಾಥ್ ಮಲಕಾಪೂರೆ, ಎಮ್ಎಲ್ಸಿ ಅರವಿಂದ ಅರಳ್ಳಿ, ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಸಕಲ ಬಸವ ಭಕ್ತರು ಬಸವಣ್ಣನ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.

ರಂಜಾನ್ ಆಚರಣೆ:

ಇತ್ತ ಬಸವ ಜಯಂತಿಯ ಜೊತೆಗೇ ಜಿಲ್ಲೆಯಲ್ಲಿ ರಂಜಾನ್ ಹಬ್ಬವನ್ನು ಸಂಭ್ರಮದಿಂದ ಶಾಂತಿಯಿಂದ ಆಚರಿಸಲಾಯಿತು.

ಸಾವಿರಾರು ಸಂಖ್ಯೆಯಲ್ಲಿ ಮುಸಲ್ಮಾನರು ಬೀದರ ನಗರದ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಈ ಪ್ರಾರ್ಥನೆಯಲ್ಲಿ ಶಾಸಕ ರಹೀಂ ಖಾನ್ ಪಾಲ್ಗೊಂಡರು.

ಜೆಡಿಎಸ್ ಮುಖಂಡ ಬಂಡೆಪ್ಪ ಕಾಶೆಂಪೂರ್, ಬಿಜೆಪಿ ಮುಖಂಡ ಸೂರ್ಯಕಾಂತ್ ನಾಗಮಾರಪಳ್ಳಿ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.

ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ ಏರ್ಪಡಿಸಿತ್ತು.


ವರದಿ:  ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ಕವಿ ನಾಗೇಶ್ ನಾಯಕಗೆ ಜಿಲ್ಲಾ ಸಾಹಿತ್ಯ ಪ್ರತಿಷ್ಠಾನದ ದತ್ತಿ ಪ್ರಶಸ್ತಿ ಪ್ರದಾನ

ಸವದತ್ತಿಃ ಸಮೀಪದ ಉಡಿಕೇರಿಯ ರಾಮಲಿಂಗೇಶ್ವರ ಪ್ರೌಢಶಾಲೆಯ ಕವಿ, ಶಿಕ್ಷಕ ನಾಗೇಶ್ ಜೆ. ನಾಯಕ ಅವರಿಗೆ ಇತ್ತೀಚೆಗೆ ಬೆಳಗಾವಿ ಹಿಂದವಾಡಿಯ ಐ.ಎಂ.ಇ.ಆರ್. ಸಭಾಭವನದಲ್ಲಿ ಜರುಗಿದ ಬೆಳಗಾವಿ ಜಿಲ್ಲಾ...
- Advertisement -

More Articles Like This

- Advertisement -
close
error: Content is protected !!