spot_img
spot_img

ತುಮಕೂರು, ಮಂಡ್ಯ ಜಿಲ್ಲೆಗಳಲ್ಲಿ ಮೆಗಾ ಫುಡ್ ಪಾರ್ಕ್ ಗೆ ಕೇಂದ್ರ ಅನುಮೋದನೆ

Must Read

ಮೂಡಲಗಿ: ದೇಶದಲ್ಲಿ ಆಹಾರ ಸಂಸ್ಕರಣೆ ವಲಯವನ್ನು ಅಭಿವೃದ್ಧಿಪಡಿಸಲು ಕೇಂದ್ರ ಸರಕಾರ ರಾಜ್ಯದ ತುಮಕೂರು ಮತ್ತು ಮಂಡ್ಯ ಜಿಲ್ಲೆಯಲ್ಲಿ ಎರಡು ಮೆಗಾ ಫುಡ್ ಪಾರ್ಕ್‍ಗಳನ್ನು ಅನುಮೋದಿಸಿದೆ ಎಂದು ಕೇಂದ್ರ ಆಹಾರ ಸಂಸ್ಕರಣಾ, ಕೈಗಾರಿಕೆಗಳ ಸಚಿವ ಪಶುಪತಿ ಕುಮಾರ್ ಪರಸ್ ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.

ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಮೆಗಾ ಫುಡ್ ಪಾರ್ಕ್ ಯೋಜನೆಯ ಕುರಿತು ಸಂಸದ ಈರಣ್ಣ ಕಡಾಡಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು ದೇಶದ ಬೇರೆ ಬೇರೆ ರಾಜ್ಯಗಳಲ್ಲಿ ಒಟ್ಟು 41 ಮೆಗಾ ಫುಡ್ ಪಾರ್ಕ ಗಳನ್ನು ಅನುಮೋದಿಸಲಾಗಿದೆ. ಕರ್ನಾಟಕದ ತುಮಕೂರು ಇಂಟಿಗ್ರೇಟೆಡ್ ಫುಡ್ ಪಾರ್ಕ ಪ್ರೈವೆಟ್ ಲಿ. ಸಂಸ್ಥೆಗೆ 50 ಕೋಟಿ ರೂ ಮಂಜೂರಾಗಿದ್ದು, 48.72 ಕೋಟಿ ರೂ ಅನುದಾನ ಬಿಡುಗಡೆಯಾಗಿದೆ ಹಾಗೂ ಮಂಡ್ಯ ಫೇವರಿಚ್ ಇನ್ಫ್ರಾ ಮೆಗಾ ಫುಡ್ ಪಾರ್ಕ್ ಲಿ. ಕಂಪನಿಗೆ 50 ಕೋಟಿ ರೂ ಮಂಜೂರಾಗಿದ್ದು, 48.72 ಕೋಟಿ ರೂ ಅನುದಾನ ಬಿಡುಗಡೆಯಾಗಿದೆ ಎಂದು ಸಚಿವರು ಉತ್ತರಿಸಿದ್ದಾರೆಂದು ಸಂಸದರು ಮಾಹಿತಿ ಹಂಚಿಕೊಂಡರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಶ್ರೀ ಕೃಷ್ಣ ಜನ್ಮಾಷ್ಟಮಿ

ಸರ್ವಾಸಾಂ ಜಯಂತೀನಾಂ ಶ್ರೇಷ್ಠಾ ಕೃಷ್ಣಾಷ್ಟಮೀ ಮತಾ ಯಸ್ಮಾತ್ ಸನ್ನಿಹಿತಾತ್ಯಂತಂ ತತ್ರೈವೋಪವಸೇನ್ನರಃ ಸರ್ವಾಸ್ವಪಿ ಜಯಂತೀಷು ಪೂಜಾ ಕಾರ್ಯಾ ವಿಸೇಷತಃ ಸಾನಿಧ್ಯ ಏವ ಕರ್ತವ್ಯ ಉಪವಾಸೋ ನ ದೂರಗಃ ಎಲ್ಲ ಜಯಂತಿಗಳಲ್ಲಿಯೂ ಶ್ರೀ ಕೃಷ್ಣ...
- Advertisement -

More Articles Like This

- Advertisement -
close
error: Content is protected !!