- Advertisement -
ಸಿಂದಗಿ: ಪಟ್ಟಣದ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯ ಸಿಂದಗಿ ಇವುಗಳ ಸಹಯೋಗದಲ್ಲಿ ಶುಕ್ರವಾರ ಕಾಲೇಜಿನ ಸಭಾ ಭವನದಲ್ಲಿ 23ರಂದು ಮಧ್ಯಾಹ್ನ 1.30 ಗಂಟೆಗೆ ದತ್ತಿ ಉಪನ್ಯಾಸ ಕಾರ್ಯಕ್ರಮ ಜರುಗಲಿದೆ ಎಂದು ಸಾಹಿತ್ಯ ಪರಿಷತ್ತಿನ ತಾಲೂಕಾಧ್ಯಕ್ಷ ರಾಜಶೇಖರ ಕೂಚಬಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪರಿಷತ್ತಿನ ಗೌರವಾಧ್ಯಕ್ಷ ಮಹಾಂತೇಶ ಪಟ್ಟಣಶೆಟ್ಟಿ, ಗೋಲ್ಲಾಳಪ್ಪಗೌಡ ಪಾಟೀಲ ಮಾಗಣಗೇರಿ, ದತ್ತಿದಾನಿಗಳಾದ ಅಶೋಕ ಗಾಯಕವಾಡ, ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಶರಣಬಸವ ಜೋಗೂರ, ಸಾಲೋಟಗಿಯ ಸಾಹಿತಿ ಗೀತಯೋಗಿ ಅವರು ಉಪನ್ಯಾಸ ನೀಡಲಿದ್ದಾರೆ.
ಕಾರ್ಯಕ್ರಮದಲ್ಲಿ ಪರಿಷತ್ತಿನ ಎಲ್ಲ ಪದಾಧಿಕಾರಿಗಳು ಹಾಗೂ ಕನ್ನಡ ಸಾಹಿತ್ಯಾಸಕ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಎಂದು ರಾಜಶೇಖರ ಕೂಚಬಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.