ಮಕ್ಕಳ ಸಾಹಿತ್ಯ ಪರಿಷತ್ ಸಮ್ಮೇಳನ ಜುಲೈ 26 ಕ್ಕೆ – ಜಿಲ್ಲಾಧ್ಯಕ್ಷ ಸಿದ್ರಾಮ ನೀಲಜಗಿ

Must Read

ಬೆಳಗಾವಿ- ನ್ಯೂ ಸರ್ಕ್ಯೂಟ್ ಹೌಸ್, ನಲ್ಲಿ ನಡೆದ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು, ಬೆಳಗಾವಿ ಜಿಲ್ಲಾ ಘಟಕದ ವತಿಯಿಂದ ಪ್ರಥಮ ಮಕ್ಕಳ ಸಾಹಿತ್ಯ ಸಮ್ಮೇಳನದ 2 ನೇ ಪೂರ್ವಭಾವಿ ಸಭೆಯಲ್ಲಿ ಹಲವಾರು ವಿಷಯಗಳನ್ನು ಮಕ್ಕಳ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷರಾದ ಸಿದ್ರಾಮ ನಿಲಜಗಿ ಅವರ ಸಮ್ಮುಖದಲ್ಲಿ ಚರ್ಚಿಸಲಾಯಿತು.

ಜುಲೈ 26 ರಂದು ಬೆಳಗಾವಿಯ ಕುಮಾರ ಗಂಧರ್ವ ಸಭಾ ಭವನದಲ್ಲಿ ಮಕ್ಕಳ ಸಾಹಿತ್ಯ ಪರಿಷತನ ಸಮ್ಮೇಳನ ನಡೆಸಲು ತೀರ್ಮಾನಿಸಲಾಯಿತು.ಕಾರ್ಯಕ್ರಮದ ರೂಪು ರೇಷೆಗಳನ್ನು ಕುರಿತು ಚರ್ಚೆ ಮಾಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಕಲ ಸಿದ್ಧತೆಗಳನ್ನು ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಪ್ರಕಾಶ ಹೊಸಮನಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎಂ ವೈ ಮೆಣಸಿನಕಾಯಿ, ಜಿಲ್ಲಾ ನಿರ್ದೇಶಕರಾದ ಗುರುಲಿಂಗ ಮುನ್ಯಾಳ, ಜಿಲ್ಲಾ ಮಾದ್ಯಮ ವಕ್ತಾರ ಮುರಿಗೆಪ್ಪ ಮಾಲಗಾರ, ಹಣಮಂತ ಹರಿಜನ, ಮೂಡಲಗಿ ತಾಲೂಕಾ ಅಧ್ಯಕ್ಷರಾದ ರಮೇಶ ಬಿರಾದಾರ, ಸುಭಾಸ ಕುರಣೆ, ಆನಂದ ಸೊರಗಾಂವಿ, ಸಿ ವೈ ಮೆಣಸಿನಕಾಯಿ, ಹಣಮಂತ ಗುರವ, ಖಂಡೋಬಾ ಹೈಬತ್ತಿ, ಶಿಲ್ಪಾ ಕದಂ, ದಯಾನಂದ ಹುದ್ದಾರ ಸೇರಿದಂತೆ ಪ್ರಧಾನ ಕಾರ್ಯದರ್ಶಿಗಳು ಮತ್ತು ವಿವಿಧ ತಾಲೂಕಾ ಘಟಕದ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಜರಿದ್ದರು.

1 COMMENT

Comments are closed.

Latest News

ಮೂಡಲಗಿ : ಜಿಲ್ಲಾಮಟ್ಟದ ಬಾಲಕ ಹಾಗೂ ಬಾಲಕಿಯರ ಹ್ಯಾಂಡ್‌ಬಾಲ್ ಕ್ರೀಡಾಕೂಟ

ಮೂಡಲಗಿ - ಕ್ರೀಡೆ ಎಂಬುದನ್ನು ಗ್ರೀಕ್ ದೇಶದಲ್ಲಿ ಮನರಂಜನೆಗಾಗಿ ಬಳಸುತ್ತಿದ್ದರು ಆದರೆ ಈಗ ಮಕ್ಕಳು ಸದೃಢವಾದ ದೇಹವನ್ನು ಮತ್ತು ಜ್ಞಾನದ ಗ್ರಹಿಕೆಯು ಹೆಚ್ಚಾಗಬೇಕಾದರೆ ಮೊದಲು ಕ್ರೀಡೆಯಲ್ಲಿ...

More Articles Like This

error: Content is protected !!
Join WhatsApp Group