spot_img
spot_img

ಮಕ್ಕಳು ಶಿಸ್ತು ಬದ್ಧತೆಯಿಂದ ಅಧ್ಯಯನ ಮಾಡಬೇಕು -ತಹಶೀಲ್ದಾರ ಪ್ರದೀಪಕುಮಾರ

Must Read

spot_img
- Advertisement -

ಸಿಂದಗಿ: ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಂದ ಮಕ್ಕಳು ಶಿಸ್ತು ಬದ್ಧತೆಯನ್ನು ಅಳವಡಿಸಿಕೊಂಡು ಸರಿಯಾಗಿ ಅಧ್ಯಯನ ಮಾಡಿ ಮೌಲ್ಯಾದಾರಿತ ಶಿಕ್ಷಣ ಪಡೆದು ಉನ್ನತ ಸ್ಥಾನ ತಲುಪಬೇಕು ಎಂದು ತಹಶೀಲ್ದಾರ ಪ್ರದೀಪಕುಮಾರ ಹಿರೇಮಠ ಹೇಳಿದರು.

ಪಟ್ಟಣದ ಸೋಂಪುರ ರಸ್ತೆಯಲ್ಲಿರುವ ಭುವನೇಶ್ವರಿ ವಿದ್ಯಾವರ್ಧಕ ಸಂಘದ ಕಾವ್ಯಾ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆ, ಆರೂಢ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ ಹಾಗೂ ಶ್ರೀ ಸಂಗಮೇಶ್ವರ ಕಾಲೇಜ್ ಆಫ್ ಫಾರ್ಮಸಿ ವತಿಯಿಂದ ಹಮ್ಮಿಕೊಂಡ ಕಾವ್ಯ ಸಿರಿ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ವಿದ್ಯಾರ್ಥಿಗಳಿ ನಿತ್ಯ ಪರಿಶ್ರಮ ಪಡಬೇಕು. ತಾಳ್ಮೆಯಿಂದ ವರ್ತಿಸಬೇಕು. ಉತ್ತಮ ಆರೋಗ್ಯ ಕಾಪಾಡಿಕೊಂಡು ಸಂಸ್ಕಾರವಂತಿಕೆ ಬೆಳೆಸಿಕೊಂಡು ಉತ್ತಮ ಪ್ರಜೆಗಳಾಗಬೇಕು ಅಲ್ಲದೆ ಶಾಲೆಯಿಂದ ನವೋದಯ ಸೈನಿಕ, ಆದರ್ಶ, ಮೂರಾರ್ಜಿ ವಸತಿ ಶಾಲೆಗಳಿಗೆ ಆಯ್ಕೆಯಾದ ಮಕ್ಕಳಿಗೆ ಶಾಸಕ ಅಶೋಕ ಮನಗೂಳಿ ಸನ್ಮಾನಿಸಿ ಮಾತನಾಡಿದ ಅವರು, ಶಿಕ್ಷಕರು ಮಕ್ಕಳಿಗೆ ಗುಣಾತ್ಮಕ ಸಂಸ್ಕಾರದ ಪಠ್ಯದ ಜೊತೆಗೆ ಸ್ಪರ್ಧಾತ್ಮಕ ವಿಷಯಾಧಾರಿತ ಶಿಕ್ಷಣ ನೀಡಿದಾಗ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ ಮೂಡಲಿಕ್ಕೆ ಸಾಧ್ಯ ಎಂದರು.

ಕಾರ್ಯಕ್ರಮದ ಅತಿಥಿ ಸ್ಥಾನವನ್ನು ಅಲಂಕರಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಮಾತನಾಡಿದರು. ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ ಯಂಕಂಚಿ ಕೂಂಟೋಜಿ ಹಿರೇಮಠದ ಅಭಿನವ ರುದ್ರಮುನಿ ಶಿವಾಚಾರ್ಯರು ಆಶೀರ್ವಚನ ನೀಡಿದರು.

- Advertisement -

ಈ ವೇಳೆ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಅರವಿಂದ ಡೋಣೂರ, ಎಂ.ಎಂ.ಹಂಗರಗಿ, ವಿಶ್ವನಾಥ ಕುರುಡಿ, ರೂಪಾ ಪಾಟೀಲ, ಕಾಂಚನಾ ನಾಗರಬೆಟ್ಟ, ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ ನಾರಗಬೆಟ್ಟ, ಪಾಲಕ ಪ್ರತಿನಿಧಿ ಚಂದ್ರಕಾಂತ ಸಿಂಗೆ, ಡಾ.ಗೌರಿ ಉತ್ನಾಳ ವೇದಿಕೆಯ ಮೇಲಿದ್ದರು.

ಈ ಸಂದರ್ಭದಲ್ಲಿ ಕಾವ್ಯಾ ಶಾಲೆಯಿಂದ ನವೋದಯ ಸೈನಿಕ, ಆದರ್ಶ, ಮೂರಾರ್ಜಿ ಸೇರಿದಂತೆ ವಿವಿಧ ವಸತಿ ಶಾಲೆಗಳಿಗೆ ಆಯ್ಕೆಯಾದ ಮಕ್ಕಳಿಗೆ ಶಾಸಕ ಅಶೋಕ ಮನಗೂಳಿ ಸನ್ಮಾನಿಸಿ ಗೌರವಿಸಿದರು. ಬಳಿಕ ಶಾಲೆಯ ವಿದ್ಯಾರ್ಥಿಗಳಿಂದ ಸಂಗೀತ, ನೃತ್ಯ ಹಾಗೂ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳು ಜನಮನ ಸೆಳೆದವು.
ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಸಂದೀಪ ಚಾಂದಕವಟೆ, ಮುಖ್ಯಗುರು ರಾಜಕುಮಾರ ಕಾಂಬಳೆ, ಗುರುಮಾತೆ ಸುಮಾ ವಸ್ತ್ರದ, ಕಾರ್ತಿಕ ನಾಗರಬೆಟ್ಟ, ಕಾವ್ಯಾ ನಾಗರಬೆಟ್ಟ, ಸಂಗನಗೌಡ ಪಾಟೀಲ, ಪಂಡಿತ ಯಂಪೂರೆ, ಮಲ್ಲನಗೌಡ ಪಾಟೀಲ ಇಬ್ರಾಹಿಂಪೂರ, ಪ್ರಸಾದ ಪೈ. ರಮೇಶ ಯಾಳಗಿ, ಮಹಾಂತೇಶ ನೂಲಾನವರ, ವಿರೇಶ, ಜಬ್ಬರ ಸೇರಿದಂತೆ ಶಾಲೆಯ ಬೋಧಕ-ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗೂ ಪಾಲಕರು ಇದ್ದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಅಗತ್ಯ ದಾಖಲಾತಿಗಳನ್ನು ನೀಡಿ ಇ- ಆಸ್ತಿ ದಾಖಲಿಸಿಕೊಳ್ಳಿ-ತುಕಾರಾಮ ಮಾದರ

ಮೂಡಲಗಿ - ಪಟ್ಟಣದ ಪುರಸಭೆ ವ್ಯಾಪ್ತಿಯೊಳಗೆ ಬರುವ ಎಲ್ಲಾ ರೀತಿಯ ಕಟ್ಟಡ, ನಿವೇಶನಗಳಿಗೆ ಆಸ್ತಿ ತೆರಿಗೆಯನ್ನು ೨೦೨೪-೨೫ ನೇ ಸಾಲಿನ ಅಂತ್ಯದವರೆಗೆ ಪೂರ್ಣ ಪ್ರಮಾಣದಲ್ಲಿ ಪಾವತಿಸಿಕೊಂಡು...
- Advertisement -

More Articles Like This

- Advertisement -
close
error: Content is protected !!
Join WhatsApp Group