spot_img
spot_img

ಸಾಹಿತ್ಯದ ಸವಿಯನ್ನು ಮಕ್ಕಳು ಅಸ್ವಾದಿಸಬೇಕು – ಪ್ರಕಾಶ ಮೆಳವಂಕಿ

Must Read

spot_img
- Advertisement -

ಬೈಲಹೊಂಗಲ: ಪುಸ್ತಕಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳುವುದರ ಮೂಲಕ ಸಾಹಿತ್ಯದ  ಸವಿಯನ್ನು ಮಕ್ಕಳು ಆಸ್ವಾದಿಸಬೇಕು ಎಂದು ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ಪ್ರಕಾಶ ಮೆಳವಂಕಿ ಹೇಳಿದರು.

ಅವರು ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರಕವಿ ಕುವೆಂಪು ಕನ್ನಡ ಸಂಘದ ವತಿಯಿಂದ ಏರ್ಪಡಿಸಿದ ಉಪನ್ಯಾಸ ಹಾಗೂ ಡಾ.ಎಫ್.ಡಿ.ಗಡ್ಡಿಗೌಡರ ಅವರ ದಾಸರ ದಾರಿಯಲ್ಲಿ ಕೃತಿ ಲೋಕಾರ್ಪಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಕನ್ನಡದ ಮೌಲ್ಯಯುತ ಪುಸ್ತಕಗಳನ್ನು ಓದುವ ಅಭಿರುಚಿ ಬೆಳೆಸಿಕೊಳ್ಳಬೇಕು ಎಂದು ಅವರು ಅಭಿಪ್ರಾಯಪಟ್ಟರು. 

ಕೃತಿ ಲೋಕಾರ್ಪಣೆಗೊಳಿಸಿ ಮಾತನಾಡಿದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಬೆಳಗಾವಿ ಜಿಲ್ಲಾಧ್ಯಕ್ಷರಾದ ಮೋಹನ ಬಸನಗೌಡ ಪಾಟೀಲ, ಒಂದು ಕೃತಿ ಹೊರಬರಬೇಕಾದರೆ ಅದರ ಹಿಂದೆ ಸಾಕಷ್ಟು ಪರಿಶ್ರಮ ಇರುತ್ತದೆ ಎಂದರು. ಜನಮನ ತಲುಪುವ ಸಾಹಿತ್ಯ ಬಹಳ ಕಾಲ ಉಳಿಯುತ್ತದೆ ಎಂದು ಅವರು ಹೇಳಿದರು.

- Advertisement -

ಬೈಲಹೊಂಗಲದ ಹಿರಿಯ ದಿವಾಣಿ ನ್ಯಾಯಾಲಯದ ಪ್ರಥಮ ದರ್ಜೆ ಸಹಾಯಕರು, ಕವಿಗಳಾದ  ಸುಖದೇವಾನಂದ ಚವತ್ರಿಮಠ ದಾಸರ ಕೀರ್ತನೆಗಳಲ್ಲಿ ಜೀವನ ಮೌಲ್ಯಗಳು ಎಂಬ ವಿಷಯದ ಮೇಲೆ ಉಪನ್ಯಾಸ ನೀಡಿ ಕೃತಿ ಪರಿಚಯ ಮಾಡಿಕೊಟ್ಟರು.

ಸರಳ ಪದಗಳ ಬಳಕೆ, ಗೇಯತೆ, ಲಯ ಹಾಗೂ ಭಾವದಿಂದ ಕೂಡಿದ ಕೀರ್ತನೆಗಳು ಕೃತಿಯ ಮೌಲ್ಯವನ್ನು ಹೆಚ್ಚಿಸಿವೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಮಾನವೀಯತೆಯ‌ ನೆಲೆಗಟ್ಟಿನಲ್ಲಿ ಮೂಡಿಬಂದ ಸಾಲುಗಳಲ್ಲಿ ದಾಸರ ತತ್ವ, ಸಂದೇಶಗಳನ್ನು ಸಾರುವ ಆಶಯ ಕವಿಗಳದ್ದಾಗಿದೆ ಎಂದರು.

- Advertisement -

ಬೈಲಹೊಂಗಲದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಕನ್ನಡ  ಸ್ನಾತಕೋತ್ತರ ಅಧ್ಯಯನ ಕೇಂದ್ರದ ಮುಖ್ಯಸ್ಥರಾದ  ಡಾ. ಎಫ್.ಡಿ.ಗಡ್ಡಿಗೌಡರ ಮಾತನಾಡಿ ಪ್ರೌಢಶಾಲಾ ಹಂತದಲ್ಲಿ ಮಕ್ಕಳು ತಮ್ಮ ಒಳಗೆ ಅಡಗಿದ ಪ್ರತಿಭೆಗಳನ್ನು ಗುರುತಿಸಿಕೊಂಡು ಸಾಧನೆಯತ್ತ ಸಾಗಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬೂದಿಹಾಳ ಸರಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕರಾದ ಎನ್.ಆರ್.ಠಕ್ಕಾಯಿ ಮಾತನಾಡಿ ಮಕ್ಕಳಿಗೆ ಒಂದು ವಿಶಿಷ್ಟ ಅನುಭವ ಕೊಡವ ಹಾಗೂ ಎಳೆ ಮನಸ್ಸಿನಲ್ಲಿ ಸ್ಫೂರ್ತಿಯ ಬೀಜ ಬಿತ್ತುವ ಉದ್ದೇಶದಿಂದ ಶಾಲೆಯಲ್ಲಿ ಆಯೋಜಿಸಿದ ಇಂತಹ ವಿಭಿನ್ನ ಕಾರ್ಯಕ್ರಮ ಮನಸ್ಸಿಗೆ ಖುಷಿ ನೀಡಿದೆ ಎಂದು ಹರ್ಷ ವ್ಯಕ್ತಪಡಿಸಿದರು. ಶಿಕ್ಷಕಿಯರಾದ ರೇಖಾ ಸೊರಟೂರ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಶಿಕ್ಷಕರಾದ ಜಗದೀಶ ನರಿ, ಶ್ರೀಪಾಲ ಚೌಗಲಾ, ಶಿವಾನಂದ ಬಳಿಗಾರ, ವೀರೇಂದ್ರ ಪಾಟೀಲ ಉಪಸ್ಥಿತರಿದ್ದರು. ತನುಜಾ ಬಡಿಗೇರ ಪ್ರಾರ್ಥಿಸಿದರು. ರಾಜೇಶ್ವರಿ ಸೊಗಲದ ನಿರೂಪಿಸಿದರು. ಶಿಕ್ಷಕರಾದ ಎಸ್.ಬಿ. ಭಜಂತ್ರಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಪಿ.ಎಸ್. ಗುರುನಗೌಡರ ವಂದಿಸಿದರು. ಚೈತ್ರಾ ಸೊಗಲದ, ಕಾವೇರಿ ಬೋಬಡೆ, ಮಲ್ಲಮ್ಮ ಅಳಗೋಡಿ, ಸುಶ್ಮಿತಾ ಸೊಗಲದ ಕಾರ್ಯಕ್ರಮ ನಿರ್ವಹಿಸಿದರು.

- Advertisement -
- Advertisement -

Latest News

ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ

ಬೆಳಗಾವಿ - ತಾಲೂಕಿನ ಹೊಸ ಇದ್ದಲಹೊಂಡ ಶಿವಾಪೂರ ಸರಕಾರಿ ಪ್ರೌಢ ಶಾಲೆಯ ವರ್ಗಾವಣೆಗೊಂಡ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ ನಡೆಯಿತು. ಸಮಾರಂಭದ ಅಧ್ಯಕ್ಷತೆ ಶ್ರೀಮತಿ ಜಿ ಬಿ ಸುಗತೆ...
- Advertisement -

More Articles Like This

- Advertisement -
close
error: Content is protected !!
Join WhatsApp Group