ಸಿಂದಗಿ: ಮಕ್ಕಳಿಗಾಗಿ ಮಕ್ಕಳ ಹಕ್ಕುಗಳಿವೆ ಅವಗಳನ್ನು ಎಲ್ಲರೂ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮಕ್ಕಳ ಹಿರಿಯ ಸಾಹಿತಿ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಹ.ಮ. ಪೂಜಾರ ಹೇಳಿದರು.
ಪಟ್ಟಣದ ಭುವನೇಶ್ವರಿ ವಿದ್ಯಾವರ್ಧಕ ಸಂಸ್ಥೆಯ ಕಾವ್ಯಾ ಶಾಲೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕಾವ್ಯಾ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಕರ್ನಾಟಕ ಸಂಭ್ರಮ 50ರ ನಿಮಿತ್ಯ ಹಮ್ಮಿಕೊಂಡ ಮಕ್ಕಳ ಕಲರವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಹಳಷ್ಟು ಮಕ್ಕಳಿಗೆ ಅವರ ಹಕ್ಕುಗಳ ಬಗ್ಗೆ ಜಾಗೃತಿ ಇಲ್ಲದಿರುವುದು ನೋವಿನ ಸಂಗತಿ. ಹಾಗಾಗಿ ಮಕ್ಕಳು ಮೊದಲು ನಿಮ್ಮ ಹಕ್ಕುಗಳ ಬಗ್ಗೆ ತಿಳಿದುಕೊಳ್ಳಬೇಕು. ಮಕ್ಕಳಿಗಾಗಿಯೇ ಸರಕಾರ ಭಾಗವಹಿಸುವ ಹಕ್ಕು, ಸಂರಕ್ಷಣೆ ಮಾಡುವ ಹಕ್ಕು, ಭಾಗವಹಿಸುವ ಹಕ್ಕು ಸೇರಿದಂತೆ ಅನೇಕ ಹಕ್ಕುಗಳನ್ನು ಜಾರಿಗೆ ತಂದಿದ್ದಾರೆ. ಅದನ್ನು ನೀವೆಲ್ಲಾ ತಿಳಿದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಈ ವೇಳೆ ಸಂಗಮ ಸಂಸ್ಥೆಯ ಸಹ ನಿರ್ದೇಶಕಿ ಸಿಂತಿಯಾ, ಜಯಶ್ರೀ ಕುಲಕರ್ಣಿ, ಎಂ.ಎಂ. ಹಂಗರಗಿ ಮಾತನಾಡಿದರು.
ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಆದಿಶೇಷ ಮಠದ ನಾಗರತ್ನ ರಾಜಯೋಗಿ ವೀರರಾಜೇಂದ್ರ ಸ್ವಾಮೀಜಿ ಆಶೀರ್ವಚನ ನೀಡಿದರು.
ಇದೇ ಸಂದರ್ಭದಲ್ಲಿ ಕಸಾಪ ಅಧ್ಯಕ್ಷ ಶಿವಾನಂದ ಬಡಾನೂರ, ಗೌರವಾಧ್ಯಕ್ಷ ಮಹಾಂತೇಶ ಪಟ್ಟಣಶೆಟ್ಟಿ, ಜಿ.ಎಸ್.ಪಟ್ಟಣಶೆಟ್ಟಿ, ಮಲ್ಲನಗೌಡ ಪಾಟೀಲ, ಪಂಡಿತ ಯಂಪೂರೆ, ಸಂದೀಪ ಚಾಂದಕವಟೆ, ರಾಜು ಕುಂಬಾರ, ಭಾಗ್ಯಶ್ರೀ, ಶಾಂತೂ ರಾಣಾಗೋಳ, ಸೇರಿದಂತೆ ಶಾಲೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ಸಾಹಿತ್ಯಾಭಿಮಾನಿಗಳು ಇದ್ದರು.