ಹಿರಿಯ ಮಕ್ಕಳ ಸಾಹಿತಿಗೆ ‘ ಮಕ್ಕಳ ಸಾಹಿತ್ಯ ಭೂಷಣ ‘ ಪ್ರಶಸ್ತಿ

Must Read
ಸಿಂದಗಿ: ಪಟ್ಟಣದ ವಿದ್ಯಾಚೇತನ ಪ್ರಕಾಶನವು ಮಕ್ಕಳ ಸಾಹಿತ್ಯ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ 60 ವರ್ಷ ಮೇಲ್ಪಟ್ಟ ಹಿರಿಯ ಸಾಹಿತಿಗೆ ರಾಜ್ಯ ಮಟ್ಟದ ‘ಮಕ್ಕಳ ಸಾಹಿತ್ಯ ಭೂಷಣ’ ಪ್ರಶಸ್ತಿ ನೀಡಿ ಗೌರವಿಸಲು ನಿರ್ಧರಿಸಿದೆ.
    ಪ್ರಸಕ್ತ ವರ್ಷ 2025-26 ನೇ ಸಾಲಿನಲ್ಲಿ ಈ ಪ್ರಶಸ್ತಿಗೆ ವಿಜಯಪುರ ಜಿಲ್ಲೆಯ ಕೋಲಾರ ತಾಲೂಕಿನ ಮುಳವಾಡ ಗ್ರಾಮದ ಖ್ಯಾತ ಮಕ್ಕಳ ಸಾಹಿತಿ ಪ.ಗು. ಸಿದ್ದಾಪುರ ಅವರು ಆಯ್ಕೆಯಾಗಿದ್ದಾರೆ.
   ಈ ಪ್ರಶಸ್ತಿ 15000 ರೂ. ನಗದು ಬಹುಮಾನದೊಂದಿಗೆ ಪ್ರಶಸ್ತಿ ಫಲಕ  ಒಳಗೊಂಡಿರುತ್ತದೆ. ಜೂ. 11 ರಂದು ಪಟ್ಟಣದ ಸಾರಂಗಮಠದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶ್ರೀಯುತರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ವಿದ್ಯಾಚೇತನ ಪ್ರಕಾಶನದ ಪ್ರಕಾಶಕ, ಮಕ್ಕಳ ಸಾಹಿತಿ ಹ.ಮ. ಪೂಜಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Latest News

ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು

ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...

More Articles Like This

error: Content is protected !!
Join WhatsApp Group