ಬೀದರ – ಜಿಲ್ಲೆಯ ಬಸವಕಲ್ಯಾಣ ನಗರದ ಖೂಬಾ ಕಾಲನಿ ನಿವಾಸಿಗಳು ಸ್ವಂತ ಖರ್ಚಿನಲ್ಲೇ ತಾತ್ಕಾಲಿಕ ರಸ್ತೆ ನಿರ್ಮಾಣ ಮಾಡಿಕೊಂಡಿದ್ದಾರೆ. ಹದಗೆಟ್ಟ ರಸ್ತೆಯನ್ನು ನಿರ್ಮಿಸುವಂತೆ ಅನೇಕ ಬಾರಿ ಮನವಿ ಸಲ್ಲಿಸಿದ್ದರೂ ಸ್ಪಂದಿಸದ ನಗರಸಭೆ ಅಧಿಕಾರಿಗಳಯ, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು, ಹಣ ಸಂಗ್ರಹಿಸಿ ತಾತ್ಕಾಲಿಕ ರಸ್ತೆ ನಿರ್ಮಾಣಕ್ಕೆ ನಿವಾಸಿಗಳು ಮುಂದಾಗಿದ್ದಾರೆ.
ಬಸವಕಲ್ಯಾಣ ನಗರದ ಪ್ರತಿಷ್ಠಿತ ಕಾಲನಿಯಲ್ಲಿ ರಸ್ತೆಗಾಗಿ ಜನರ ಪರದಾಟ ಹಲವು ವರ್ಷಗಳಿಂದ ಇತ್ತು. ಅನೇಕ ಬಾರಿ ನಗರಸಭೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ರಸ್ತೆ ನಿರ್ಮಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಶಾಸಕರು, ಅಧಿಕಾರಿಗಳಿದ್ರೂ ನಾವೇ ಹಣ ಸಂಗ್ರಹಿಸಿ ರಸ್ತೆ ನಿರ್ಮಿಸುವ ಸ್ಥಿತಿ ಬಂದಿದೆ. ಸುಸಜ್ಜಿತ ರಸ್ತೆ ನಿರ್ಮಾಣ ಮಾಡಲು ಸರ್ಕಾರದ ಬಳಿ ಹಣ ಇಲ್ವಾ? ಒಂದು ರಸ್ತೆಗಾಗಿ ಎಷ್ಟು ಸರಿ ನಾವು ಅಲೆದಾಡಬೇಕು ಎಂದು ಸ್ಥಳೀಯರಿಂದ ಪ್ರಶ್ನೆ ಮಾಡಿ ಆಕ್ರೋಶ ಹೊರಹಾಕಿದ ನಿವಾಸಿಗಳು, ಸದ್ಯಕ್ಕೆ ನಾವೇ ತಾತ್ಕಾಲಿಕ ರಸ್ತೆ ನಿರ್ಮಿಸಿದ್ದೀವಿ. ಈಗ್ಲಾದ್ರೂ ಸರ್ಕಾರ ಎಚ್ಚೆತ್ತು ಸುಸಜ್ಜಿತ ರಸ್ತೆ ನಿರ್ಮಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ಒತ್ತಾಯ ಮಾಡಿದರು.
ವರದಿ : ನಂದಕುಮಾರ ಕರಂಜೆ, ಬೀದರ