spot_img
spot_img

ಭಾಲ್ಕಿಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

Must Read

spot_img

ಬೀದರ- ಪುರಸಭೆಯ ವಾಹನವನ್ನು  ಪಕ್ಷದ ಕೆಲಸಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಬಳಸಿ ಕೊಳ್ಳುತ್ತಿರುವುದನ್ನು ಕಂಡು ಬಿಜೆಪಿ ಕಾರ್ಯಕರ್ತರು  ಪೊಲೀಸ್ ಠಾಣೆ ದೂರು ನೀಡಿದ ಹಿನ್ನೆಲೆಯಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರಲ್ಲಿ ಮಾತಿನ ಚಕಮಕಿ ನಡೆಯಿತು.

ಭಾಲ್ಕಿ ನಗರದಲ್ಲಿ ಶುಕ್ರವಾರ ಸಾಯಂಕಾಲ 4:00 ಗಂಟೆಗೆ ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಕಾರ್ಯಕ್ರಮ ನಡೆಯಲಿದ್ದು ಕಾಂಗ್ರೆಸ್ ಪಕ್ಷದ ಧ್ವಜ ಮತ್ತು ಫ್ಲೆಕ್ಸ್ ಗಳನ್ನು ಅಳವಡಿಸಲು ಪುರಸಭೆಯ ವಾಹನವನ್ನು ಬಳಸಿಕೊಳ್ಳುತ್ತಿರುವ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಬಿಜೆಪಿ ಮುಖಂಡ ಡಿ.ಕೆ ಸಿದ್ರಾಮ ಮತ್ತು ಅವರ ಬೆಂಬಲಿಗರು ತಡೆದರು. ಈ ಸಂದರ್ಭದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.

ಪುರಸಭೆಯ ವಾಹನವನ್ನು ಪೊಲೀಸ್ ಠಾಣೆಗೆ ಒಪ್ಪಿಸಿದ ಬಿಜೆಪಿ ಮುಖಂಡ ಡಿ.ಕೆ ಸಿದ್ರಾಮ ಹಾಗೂ ಕಾರ್ಯಕರ್ತರು ಅಲ್ಲಿಂದ ತೆರಳಿದರು.


ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ

ಬೆಂಗಳೂರು- ಶ್ರವಣ ಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಜೈನ್ ಸಮುದಾಯದ ಸಮಗ್ರ...
- Advertisement -

More Articles Like This

- Advertisement -
close
error: Content is protected !!