ಶಾಸ್ತ್ರೀಯ ಭಾಷೆಯಾಗಿ ಕನ್ನಡ-ಇತ್ತೀಚಿನ ಸವಾಲು ಮತ್ತು ಸಾಧ್ಯತೆ-ಕುರಿತು ವಿಚಾರಸಂಕಿರಣ

Must Read

ಬೆಂಗಳೂರು: ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟ (ನೊಂ.) ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಹಕಾರದೊಂದಿಗೆ ‘ಶಾಸ್ತ್ರೀಯ ಭಾಷೆಯಾಗಿ ಕನ್ನಡ-ಇತ್ತೀಚಿನ ಸವಾಲು ಮತ್ತು ಸಾದ್ಯತೆ’ ಕುರಿತು ಚಿಂತನಾ ಗೋಷ್ಟಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ ಆಗಸ್ಟ್ 26ರ ಸೋಮವಾರ ಸಂಜೆ 5.00 ಗಂಟೆಗೆ ಏರ್ಪಡಿಸಿದೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆಯವರು ಉದ್ಘಾಟಿಸಲಿರುವ ಗೋಷ್ಟಿಯಲ್ಲಿ ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಎಂ.ತಿಮ್ಮಯ್ಯನವರು ಪ್ರಾಸ್ತಾವಿಕ ಭಾಷಣವನ್ನು ಮಾಡಲಿದ್ದು ಮೈಸೂರಿನ ಶಾಸ್ತ್ರೀಯ ಕನ್ನಡ ಉನ್ನತ ಅಧ್ಯಯನ ಕೇಂದ್ರದ ಹಿರಿಯ ಸಂಶೋಧಕರಾದ ಡಾ.ಅನ್ನಪೂರ್ಣ.ಎನ್.ಎಸ್ ಅವರು ವಿಷಯ ಮಂಡಿಸಲಿದ್ದಾರೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಡಾ.ಸಂತೋಷ ಹಾನಗಲ್ಲ ಅವರು ಮುಖ್ಯ ಅತಿಥಿಗಳಾಗಿರುವ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರ ಘನ ಉಪಸ್ಥಿತಿ ಇರಲಿದೆ. ಬರಹಗಾರರೂ ಮತ್ತು ರಾಜ್ಯಸಭೆಯ ನಿವೃತ್ತ ಸದಸ್ಯರೂ ಆದ ಡಾ.ಎಲ್.ಹನುಮಂತಯ್ಯನವರು ಗೋಷ್ಟಿಯ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಕಾರ್ಯಕ್ರಮಕ್ಕೆ ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಎಲ್ಲರನ್ನೂ ಆಹ್ವಾನಿಸಿದ್ದಾರೆ.

Latest News

ಕಲಬುರಗಿ ವಿಮಾನ ನಿಲ್ದಾಣ ಸ್ತಬ್ಧ: ರಾಜ್ಯ ಸರಕಾರದ ಮೌನದಿಂದ ಅಭಿವೃದ್ಧಿಗೆ ಹಿನ್ನಡೆ

371 ಜೆ ವ್ಯಾಪ್ತಿಯ ವಿಮಾನ ನಿಲ್ದಾಣಕ್ಕೆ ಗ್ರಹಣ: ಜನಪ್ರತಿನಿಧಿಗಳ ಮೌನಕ್ಕೆ ಆಕ್ಷೇಪಇತ್ತೀಚೆಗಷ್ಟೇ ಕಲಬುರಗಿಯಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಸಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ಸಂಕಲ್ಪ...

More Articles Like This

error: Content is protected !!
Join WhatsApp Group