spot_img
spot_img

ಲಯನ್ಸ್ ಕ್ಲಬ್ ಪರಿವಾರದಿಂದ ಸ್ವಚ್ಛತೆ

Must Read

spot_img
- Advertisement -

ಮೂಡಲಗಿ: ಸ್ವಾತಂತ್ರ್ಯೋತ್ಸವ ಆಚರಣೆಯ ಅಂಗವಾಗಿ ಮೂಡಲಗಿಯ ಲಯನ್ಸ್ ಕ್ಲಬ್ ಪರಿವಾರವು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಸೋಮವಾರ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.

ಲಯನ್ಸ್ ಕ್ಲಬ್ ಅಧ್ಯಕ್ಷ ಶ್ರೀಶೈಲ ಲೋಕನ್ನವರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ‘ಲಯನ್ಸ್ ಕ್ಲಬ್‍ದಿಂದ ಪುರಸಭೆಯ ಸಹಕಾರದೊಂದಿಗೆ 2023-24ನೇ ಸಾಲಿನಲ್ಲಿ  ಪಟ್ಟಣದ ವಿವಿಧ ವಾರ್ಡ್‍ಗಳ ಸ್ವಚ್ಛತೆಯ ಅಭಿಯಾನವನ್ನು ಪ್ರಾರಂಭಿಸಿರುವೆವು. ಸ್ವಚ್ಛತೆ ಮೂಲಕ ಪಟ್ಟಣದ ನೈರ್ಮಲ್ಯ ಕಾಯ್ದುಕೊಂಡು ರೋಗರುಜಿನಗಳು ಬಾರದಂತೆ ಪ್ರತಿಯೊಬ್ಬರು ಜಾಗೃತವಹಿಸುವುದು ಅವಶ್ಯವಿದೆ’ ಎಂದರು.

ಕಾರ್ಯದರ್ಶಿ ಸುಪ್ರೀತ ಸೋನವಾಲಕರ ಪ್ರಾಸ್ತಾವಿಕ ಮಾತನಾಡಿದರು.

- Advertisement -

ಸಂಜಯ ಮೋಕಾಶಿ, ಎನ್.ಟಿ. ಪಿರೋಜಿ, ಬಾಲಶೇಖರ ಬಂದಿ,  ಮಹಾಂತೇಶ ಹೊಸೂರ, ಶಿವಾನಂದ ಗಾಡವಿ, ಸಂಗಮೇಶ ಕೌಜಲಗಿ, ಡಾ. ನೇಸೂರ,  ಅಪ್ಪಣ್ಣ ಬಡಿಗೇರ, ಡಾ. ಯಲ್ಲಾಲಿಂಗ ಮುಳವಾಡ ಇದ್ದರು.

ಖಜಾಂಚಿ ಕೃಷ್ಣಾ ಕೆಂಪಸತ್ತಿ ನಿರೂಪಿಸಿ, ವಂದಿಸಿದರು.

- Advertisement -
- Advertisement -

Latest News

ಯೋಗ ಸ್ಪರ್ಧಾ ವಿಜೇತರಿಗೆ ಕಡಾಡಿ ಸನ್ಮಾನ

ಮೂಡಲಗಿ: ಗ್ರಾಮೀಣ ಪ್ರದೇಶದ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಯೋಗದಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ ಇಂತಹ ಪ್ರತಿಭೆಗಳು ಬೆಳಕಿಗೆ ಬಂದು ನಾಡಿನ...
- Advertisement -

More Articles Like This

- Advertisement -
close
error: Content is protected !!
Join WhatsApp Group