ಸ್ವಚ್ಛತೆ ಸರ್ಕಾರಿ ಕಾರ್ಯಕ್ರಮವಾಗದೇ ಸ್ವಯಂಪ್ರೇರಿತವಾಗಬೇಕು

Must Read

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...

ಗಾಣಿಗ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸವದತ್ತಿ: ತಾಲೂಕಿನ ಗಾಣಿಗ ಸಮಾಜದ ಎಸ್..ಎಸ್.ಎಲ್.ಸಿ.ಹಾಗೂ ಪಿ.ಯು.ಸಿ .ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದು ಸವದತ್ತಿ ತಾಲೂಕಿನ ಗಾಣಿಗ ಸಮಾಜದ ತಾಲೂಕು ಘಟಕದ ಪ್ರಧಾನ...

ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಸಮಾರಂಭ

ಬೆಳಗಾವಿ ಶಿವಬಸವನಗರದ ಶ್ರೀ ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ದಿ. ೨೫ ರಿಂದ ೨೯ ಅಕ್ಟೋಬರ್ ೨೦೨೧ ರವರೆಗೆ ಐದು ದಿನಗಳ...

ಸಿಂದಗಿ: ನಿತ್ಯ ನಮ್ಮ ಮನೆ ಹಾಗೂ ಸುತ್ತಮುತ್ತಲಿನ ವಾತರಣವನ್ನು ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕಾದ ನಮಗೆ ಸ್ವಚ್ಛತೆಯನ್ನು ಕಾಪಾಡಿ ಎನ್ನುವ ಸರಕಾರ ಆದೇಶ ಮಾಡಬೇಕಾದ ಅನಿವಾರ್ಯತೆ ಬಂದಿರುವುದು ದುರದೃಷ್ಟಕರ ಸಂಗತಿಯಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ತಾಲೂಕಾ ಅಧ್ಯಕ್ಷ ಸಿದ್ದಲಿಂಗ ಚೌಧರಿ ಹೇಳಿದರು.

ಪಟ್ಟಣದ ತಾಲೂಕಾ ಕ್ರೀಡಾಂಗಣದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ನೆಹರೂ ಯುವ ಕೇಂದ್ರ ಹಾಗೂ ಯುವಜನ ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಕೇಂದ್ರ ಸರಕಾರದ ಆಜಾದಿ ಕಾ ಅಮೃತ ಮಹೋತ್ಸವ ದ ಅಂಗವಾಗಿ ಅ. 1ರಿಂದ 31ರ ವರೆಗೆ ಹಮ್ಮಿಕೊಂಡ ಸ್ವಚ್ಚತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ದೇಶದೆಲ್ಲೆಡೆ ಜನತೆ ಪ್ಲಾಸ್ಟಿಕ್ ಬಳಕೆಯ ಮೇಲೆ ಅವಲಂಬಿತರಾಗಿದ್ದೇವೆ ಅದನ್ನು ಮುಕ್ತವನ್ನಾಗಿ ಮಾಡಬೇಕು ಎಂದು ಹಲವು ವರ್ಷಗಳ ಹಿಂದೆ ಕೇಂದ್ರ ಸರಕಾರ ಜಿಲ್ಲಾಡಳಿತ ಮತ್ತು ತಾಲೂಕಾ ಆಡಳಿತದ ಮೂಲಕ ಪುರಸಭೆ, ಗ್ರಾಪಂ, ಪ.ಪಂ.ಯ ಆರೋಗ್ಯ ಅಧಿಕಾರಿಗಳಿಗೆ ಆದೇಶ ಮಾಡಿದೆ ಆದರೆ ಅವರೆಲ್ಲ ನಿರ್ಲಕ್ಷತನದಿಂದ ಪ್ಲಾಸ್ಟಿಕ್ ಬಳಕೆ ಅಧಿಕವಾಗಿದೆ. ಸರಕಾರ ಪ್ಲಾಸ್ಟಿಕ್ ನಿಷೇಧ ಆದೇಶ ಮಾಡುವ ಮುನ್ನ ಪ್ಲಾಸ್ಟಿಕ್ ತಯಾರಿಕಾ ಘಟಕಗಳನ್ನು ರದ್ದುಗೊಳಿಸಿ ಪ್ರತಿಯೊಂದು ಮಾರಾಟ ಮಳಿಗೆಗಳಲ್ಲಿದ್ದ ಪ್ಲಾಸ್ಟಿಕ್‍ನ್ನು ಮುಟ್ಟುಗೊಲು ಹಾಕಿಕೊಂಡಾಗ ಪ್ಲಾಸ್ಟಿಕ್ ಬಳಕೆ ನಿಲ್ಲಲು ಸಾಧ್ಯ ಅದರಿಂದ ಆಗುವ ಪರಿಸರ ಮಾಲಿನ್ಯ ನಿಲ್ಲಿಸಲು ಸಹಕಾರಿಯಾಗುತ್ತದೆ ಎಂದು ಅಭಿಮತ ವ್ಯಕ್ತಪಡಿಸಿದರು.

ಪತ್ರಕರ್ತರ ಸಂಘದ ಅಧ್ಯಕ್ಷ ಆನಂದ ಶಾಬಾದಿ ಮಾತನಾಡಿ, ಪ್ರತಿಯೊಬ್ಬರೂ ಸ್ವಚ್ಚತೆ ಕಾಪಾಡುವಲ್ಲಿ ಬರೀ ಸರಕಾರದ ಅಧಿಕಾರಿಗಳನ್ನು ದೂಷಿಸದೇ ನಾವೆಲ್ಲರೂ ಸ್ವಯಂ ಪ್ರೇರಿತರಾಗಿ ನಮ್ಮ ಸುತ್ತಮುತ್ತಲಿನ ವಾತಾವರಣವನ್ನು ಶುಚಿಗೊಳಿಸಿಕೊಳ್ಳಲು ಸನ್ನದ್ಧರಾಗಲು ಕೇಂದ್ರ ಸರಕಾರ ಅಕ್ಟೊಬರ 1 ರಿಂದ ಸ್ವಚ್ಚತಾ ಅಭಿಯಾನ ಪ್ರಾರಂಭಿಸಿದ್ದು ಪ್ರತಿಯೊಬ್ಬರು ಸರಕಾರದ ಕಾರ್ಯಕ್ರಮ ಎಂದು ಭಾವಿಸದೇ ನಮ್ಮೆಲ್ಲರ ಕಾರ್ಯಕ್ರಮವಾಗಿ ಮಾರ್ಪಟ್ಟಾಗ ಸ್ವಚ್ಚತಾ ಅಭಿಯಾನಕ್ಕೆ ಒಂದು ಅರ್ಥ ಬರುತ್ತದೆ ಅಲ್ಲದೆ ಯುವಜನ ಕ್ರೀಡಾ ಇಲಾಖೆಗೆ ಕ್ರೀಡಾಂಗಣ ನಿರ್ವಹಣೆಗೆ ಅನುದಾನ ಮಿಸಲಿಟ್ಟಿರುವುದಿಲ್ಲ ಎನ್ನುವ ಕೂಗು ಕೇಳಿ ಬರುತ್ತಿದ್ದು ಕ್ರೀಡಾ ಪಟುಗಳನ್ನು ರೂಪಿಸುವ ಕ್ರೀಡಾಂಗಣ ನಿರ್ವಹಣೆಗಾಗಿ ಜಿಲ್ಲಾಡಳಿತ ಕೂಡಲೇ ಹಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

- Advertisement -

ಕ್ರೀಡಾಧಿಕಾರಿ ಶಿವಕುಮಾರ ಕಲ್ಲೂರ ಮಾತನಾಡಿ, ಕೇಂದ್ರ ಸರಕಾರದ ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ನೆಹರೂ ಯುವ ಕೇಂದ್ರ, ರಾಷ್ಟ್ರೀಯ ಸೇವಾ ಯೋಜನೆಗೆ ಸೇರಿದ ಲಕ್ಷಾಂತರ ಯುವ ಸ್ವಯಂಸೇವಕರ, ಸಮುದಾಯದ ಸಹಭಾಗಿತ್ವದಿಂದ ಪ್ರತಿದಿನ ಒಂದು ಇಲಾಖೆಯ ಮುಖ್ಯಸ್ಥರ ನೇತೃತ್ವದಲ್ಲಿ ಇಡೀ ರಾಜ್ಯಾದ್ಯಂತ ಸ್ವಚ್ಚತಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಈ ಕಾರ್ಯಕ್ರಮವನ್ನು ಎಲ್ಲರ ಸಹಕಾರದೊಂದಿಗೆ ಯಶಸ್ವಿಗೊಳಿಸೋಣ ಎಂದರು.

ಈ ಸಂದರ್ಭದಲ್ಲಿ ಸೆಲ್ಯೂಟ ತಿರಂಗಾ ರಾಷ್ಟ್ರವಾದಿ ಸಂಘಟನೆಯ ರಾಜ್ಯ ಅದ್ಯಕ್ಷ ಚಂದ್ರಶೇಖರ ನಾಗರಬೆಟ್ಟ, ಪತ್ರಕರ್ತ ಪಂಡಿತ ಯಂಪೂರೆ, ಶಿಕ್ಷಕ ಜಿ.ಎನ್.ಪಾಟೀಲ, ರಾಜು ಕಾಖಂಡಕಿ, ವಿಕಾಸ ಮಾವೂರ, ಸಂತೋಷ ಮಲಗೊಂಡ, ಶಕೀಲ್ ಬಡಿಗೇರ, ಪ್ರೇಮ ಜೇರಟಗಿ, ಮಕಬೂಲ್ ಸೌದಾಗರ, ಫಝಲ್ ಈಟವಾಲೆ, ನೆಹರೂ ಯುವಕೇಂದ್ರ ಅಧ್ಯಕ್ಷ ಸಂಜಯ ಪವಾರ ಸೇರಿದಂತೆ ಕ್ರೀಡಾಪಟುಗಳು ಇದ್ದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...
- Advertisement -

More Articles Like This

- Advertisement -
close
error: Content is protected !!