ಸಿಂದಗಿ: ತಳವಾರ ಸಮುದಾಯಕ್ಕೆ ಎಸ್‌ಟಿ (ಪರಿಶಿಷ್ಟ ಪಂಗಡ) ಪ್ರಮಾಣಪತ್ರ ನೀಡಬೇಕೆಂದು ಅಖಿಲ ಭಾರತ ಮೀನುಗಾರರ ಸಂಘದ ರಾಷ್ಟೀಯ ಉಪಾಧ್ಯಕ್ಷ ಡಾ.ಗೌತಮ್ ಚೌಧರಿ, ಕೋಲಿ ಸಮಾಜದ ವಿಜಯಪುರ ಜಿಲ್ಲಾಧ್ಯಕ್ಷ ಶರಣಪ್ಪ ಕಣಮೇಶ್ವರ್ ಆಗ್ರಹಿಸಿದ್ದಾರೆ.
ಈ ಸಂಬಂಧ ಜಂಟಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಿಂದಗಿ ಉಪ ಚುನಾವಣೆ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಸ್‌ಟಿ ಪ್ರಮಾಣಪತ್ರ ನೀಡುವುದಾಗಿ ಭರವಸೆ ನೀಡಿದ್ದರು. ಈ ಭರವಸೆ ಹಿನ್ನೆಲೆಯಲ್ಲಿಯೇ ತಳವಾರ ಸಮುದಾಯದವರು ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ ಅವರನ್ನು ಗೆಲ್ಲಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಹೀಗಾಗಿ ತಳವಾರ ಸಮುದಾಯಕ್ಕೆ ಎಸ್‌ಟಿ ಪ್ರಮಾಣಪತ್ರ ನೀಡುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊಟ್ಟ ಭರವಸೆ ಈಡೇರಿಸಿ, ಸಮುದಾಯದ ಏಳ್ಗೆಗೆ ನೆರವಾಗಬೇಕೆಂದು ಒತ್ತಾಯಿಸಿದ್ದಾರೆ.
ನೂತನ ಶಾಸಕರಿಗೆ ಅಭಿನಂದನೆ:
ಸಿಂದಗಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ರಮೇಶ್ ಭೂಸನೂರ ಅವರಿಗೆ ಅಖಿಲ ಭಾರತ ಮೀನುಗಾರರ ಸಂಘದ ರಾಷ್ಟೀಯ ಉಪಾಧ್ಯಕ್ಷ ಡಾ.ಗೌತಮ್ ಚೌಧರಿ, ಕೋಲಿ ಸಮಾಜದ ವಿಜಯಪುರ ಜಿಲ್ಲಾಧ್ಯಕ್ಷ ಶರಣಪ್ಪ ಕಣಮೇಶ್ವರ್ ಹಾಗೂ ಹಲವು ನಾಯಕರು ಅಭಿನಂದನೆ ಸಲ್ಲಿಸಿದ್ದಾರೆ.
ರಮೇಶ್ ಭೂಸನೂರ ನೇತೃತ್ವದಲ್ಲಿ ಸಿಂದಗಿ ವಿಧಾನಸಭಾ ಕ್ಷೇತ್ರ ಸರ್ವತೋಮುಖ ಅಭಿವೃದ್ಧಿ ಹೊಂದಲಿ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.
ವರದಿ: ಪಂಡಿತ್ ಯಂಪೂರೆ, ಸಿಂದಗಿ